ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರಿಂದ ಮಾರ್ಗಸೂಚಿಗಳೇನು..?

ಬೆಂಗಳೂರು: Tulu Times | ಇನ್ನೇನು ಈ ವರುಷದ ಕೊನೆಯಲ್ಲಿ ನಾವಿದ್ದೇವೆ. ಹೊಸ ವರ್ಷವನ್ನು ಸ್ವಾಗತ ಮಾಡಲು ಎಲ್ಲರೂ ಸಜ್ಜಾಗಿದ್ದೇವೆ. ಇದೀಗ  ಸಿಲಿಕಾನ್‌ ಸಿಟಿಯಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರಿಂದ ಮಾರ್ಗಸೂಚಿ ಹೊರಡಿಸಲಾಗಿದ್ದು,  ಕಡ್ಡಾಯವಾಗಿ ಪಾಲಿಸಬೇಕಾಗಿದೆ.

ಪ್ರತೀ ವರ್ಷ ಹೊಸ ವರ್ಷಾಚರಣೆಯನ್ನು ವಿಜೃಂಭಣೆಯಿಂದ  ಆಚರಿಸುತ್ತೇವೆ. ಬೆಂಗಳೂರಿನಲ್ಲಿ  ಡಿಸೆಂಬರ್.31ರ ರಾತ್ರಿಯಂದು  ಈ ವೇಳೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಸಾರ್ವಜನಿಕರು, ಮಹಿಳೆಯರು, ಮತ್ತು ಮಕ್ಕಳ ಭದ್ರತೆ ಮತ್ತು ಸುರಕ್ಷತೆ ದೃಷ್ಠಿಯಿಂದ ನಗರ ಪೊಲೀಸರಿಂದ ಕೆಲವು ಸಲಹಾ ಸೂಚನೆಗಳನ್ನು ಪಾಲಿಸಬೇಕಾಗಿದೆ. ಹೊಸ ವರ್ಷಾಚರಣೆಯನ್ನು ಆಚರಿಸುವ ಮುನ್ನಚ್ಚರಿಕೆ ಕ್ರಮಗಳನ್ನು ನೋಡೋದಾದ್ರೆ,  ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಆಚರಿಸುವುದು, ಕಾನೂನು ನಿಯಮಗಳನ್ನು ಪಾಲನೆ ಮಾಡಿ, ನಿಯಮಿತವಾಗಿ ವಾಹನ ಚಾಲನೆ ಮಾಡಿ ಮತ್ತು ಸಂಚಾರಿ ನಿಮಯಗಳನ್ನು ಕಡ್ಡಾಯವಾಗಿ ಪಾಲಿಸಿ. ಸಾರ್ವಜನಿಕರು ಶಾಂತಿ ಮತ್ತು ಶಿಸ್ತನ್ನು ಕಾಪಾಡಲು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಯವರ ಜೊತೆ ಸಹಕರಿಸಿ.

ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮೋದಿಸಲ್ಪಟ್ಟ ಅಧೀಕೃತ ಸ್ಥಳಗಳಲ್ಲಿ ವರ್ಷಾಚರಣೆಯನ್ನು ಆಚರಿಸಿ. ತುರ್ತು ಸಂದರ್ಭಗಳಲ್ಲಿ 112 ಅಥವಾ ಸಮೀಪದ ಪೊಲೀಸ್ ಠಾಣೆಯನ್ನು/ಪೊಲೀಸ್ ಕಿಯೋಸ್ಕ್ ಅನ್ನು ಸಂಪರ್ಕಿಸುವುದು.  ವರ್ಷಾಚರಣೆಯ ಸಂದರ್ಭದಲ್ಲಿ ಅಕ್ಕಪಕ್ಕದವರ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವುದು. ಹೆಚ್ಚು ಬೆಳಕಿರುವ ಪ್ರದೇಶಗಳಲ್ಲಿ ವರ್ಷಾಚರಣೆಯನ್ನು ಆಚರಿಸಿ. ಸಾರ್ವಜನಿಕರು ಮಹಿಳೆಯರು, ಮಕ್ಕಳು ಮತ್ತು ಹಿರಿಯರ ಸುರಕ್ಷತೆ ಬಗ್ಗೆ ಗಮನಹರಿಸುವುದು.

ಸಾರ್ವಜನಿಕರು ಜನಸಂದಣಿ ಇರುವ ಸ್ಥಳಗಳಲ್ಲಿ ಹೆಚ್ಚು ಜಾಗರೂಕತೆಯಿಂದ ಇರುವುದು. ಅಹಿತಕರ ಘಟನೆ/ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಹತ್ತಿರದ ಪೊಲೀಸರಿಗೆ ಮಾಹಿತಿಯನ್ನು ನೀಡುವುದು. ಸಾರ್ವಜನಿಕರು ತಮ್ಮ ಚಲನವಲನಗಳ ಬಗ್ಗೆ ಕುಟುಂಬಕ್ಕೆ ಮಾಹಿತಿಯನ್ನು ಆಗಿದ್ದಾಂಗೆ ನೀಡುತ್ತಿರಿ. ವರ್ಷಾಚರಣೆಯನ್ನು ಆಚರಿಸುವ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಬೆಲೆಬಾಳುವ ಆಭರಣಗಳನ್ನು ಧರಿಸದೇ ಇರುವುದು ಒಳಿತು. ಅಲ್ಲದೇ ಮೊಬೈಲ್ ಫೋನ್ ಮತ್ತು ಹಣವನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು ಮುಂತಾದ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕಾಗಿದೆ.

ಸಾರ್ವಜನಿಕರು ಮಾಡಬಾರದ ಅಂಶಗಳ ಬಗ್ಗೆ ನೋಡೋದಾದ್ರೆ, ಮದ್ಯಪಾನ ಮತ್ತು ಮಾದಕ ವಸ್ತುಗಳನ್ನು ಸೇವಿಸಿ ವಾಹನ ಚಾಲನೆ ಮಾಡಬೇಡಿ, ಇದು ಕಾನೂನು ಬಾಹಿರವಾಗಿದ್ದು, ಜೀವಕ್ಕೆ ಹಾನಿ ಉಂಟು ಮಾಡಬಹುದು.  ಪಟಾಕಿಗಳನ್ನು ಸಿಡಿಸಬಾರದು. ಪರಿಸರ ಮಾಲಿನ್ಯ ಉಂಟಾಗುವುದನ್ನು ತಪ್ಪಿಸಿ.  ಅನಾವಶ್ಯಕವಾಗಿ ವಾಹನದ ಹಾರ್ನ್ ಮೊಳಗಿಸಬೇಡಿ, ಹಾಗೂ ಪೀಪಿ ಯನ್ನು ಊದಬೇಡಿ. ಅಪಾಯಕಾರಿಯಾಗಿ, ಅತೀವೇಗ ಮತ್ತು ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವಂತಿಲ್ಲ. ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯದೇ ಯಾವುದೇ ಸಮಾರಂಭಗಳನ್ನು ಆಯೋಜಿಸುವಂತಿಲ್ಲ ಹೀಗೆ ಇನ್ನೂ ಅನೇಕ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕಾಗಿದೆ.

What are the guidelines from the police for New Year celebrations in Bengaluru?- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess‌

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page