ಬ್ರೇಕಿಂಗ್ ನ್ಯೂಸ್
ಕರ್ನಾಟಕ

ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ; ಪ್ರಾಂಶುಪಾಲನಿಗೆ ಧರ್ಮದೇಟು

ಬೆಳಗಾವಿ – ತುಳು ಟೈಮ್ಸ್:‌ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪ್ರಾಂಶುಪಾಲನಿಗೆ ಪೋಷಕರು ಧರ್ಮದೇಟು ನೀಡಿದ್ದಾರೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಾಲಕಿಯರ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ.

ಬೆಳಗುಂದಿ ಹೆಣ್ಣುಮಕ್ಕಳ ಹೈಸ್ಕೂಲ್‌ ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್ ಎಂಬಾತನ ಮೇಲೆ ಈ ಗಂಭೀರ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕೆಲದಿನಗಳಿಂದ ಪ್ರಾಂಶುಪಾಲನ ಅನುಚಿತ ವರ್ತನೆಯಿಂದ ನೊಂದ ವಿದ್ಯಾರ್ಥಿನಿಯರು ತಮ್ಮ ಪೋಷಕರು ಮತ್ತು ಗ್ರಾಮಸ್ಥರ ಗಮನಕ್ಕೆ ತಂದಿದ್ದಾರೆ. ಇದರಿಂದ ತೀವ್ರ ಆಕ್ರೋಶಗೊಂಡ ಪೋಷಕರು ಶಾಲೆಗೆ ಬಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಜನೌಷಧಿ ಮುಚ್ಚುವ ನಿರ್ಧಾರ ರದ್ದುಗೊಳಿಸಿದ ಹೈಕೋರ್ಟ್

ಡಿ.12ರ ಶುಕ್ರವಾರ ಶಾಲೆಗೆ ನುಗ್ಗಿದ ಪೋಷಕರು, ಸ್ಥಳೀಯರು, ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್‌ನನ್ನು ಹೊರಗೆ ಎಳೆತಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಪ್ರಾಂಶುಪಾಲನಿಗೆ ಗೂಸಾ ನೀಡಿದ್ದಾರೆ. ಇದರಿಂದ ಶಾಲಾ ಆವರಣದಲ್ಲಿ ಕೆಲಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಪ್ರಾಂಶುಪಾಲನಿಗೆ ಜನರು ಥಳಿಸಿದ ಮಾಹಿತಿ ತಿಳಿದ ತಕ್ಷಣವೇ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ರೊಚ್ಚಿಗೆದ್ದ ಪೋಷಕರಿಂದ ಪ್ರಾಂಶುಪಾಲನನ್ನು ರಕ್ಷಿಸಿದ ಪೊಲೀಸರು, ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಪ್ರಾಂಶುಪಾಲನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಂಡು ಕೆಲಸದಿಂದ ವಜಾಗೊಳಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Belagavi high school principal harassment on students – Tulu Times


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ  : https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page