ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕಸುಳ್ಯ

ಮೈಸೂರಿನಲ್ಲಿ ಅಪಘಾತ – ಸುಳ್ಯದ ಯುವಕ ಮೃತ್ಯು

ಮೈಸೂರು – ತುಳು ಟೈಮ್ಸ್:‌ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸುಳ್ಯ ಮೂಲದ ಯುವಕ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಮೈಸೂರಿನ ಮಳವಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಈ ಅಪಘಾತ ಸಂಭವಿಸಿದೆ.

ಸುಳ್ಯದ ಉಬರಡ್ಕ ಮಿತ್ತೂರು ಗ್ರಾಮದ ಕಲ್ಚಾರ್ ನಿವಾಸಿ ಶೇಷಪ್ಪ ನಾಯಕ್ ಅವರ ಪುತ್ರ ದೀಕ್ಷಿತ್ (25) ಮೃತಪಟ್ಟವರು. ದೀಕ್ಷಿತ್ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಇವರು ಬೆಂಗಳೂರಿನಿಂದ ತನ್ನ ಊರಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು.

ಮೈಸೂರಿನ ಮಳವಳ್ಳಿ ಬಳಿ ಹೋಗುತ್ತಿದ್ದಾಗ ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ. ಅಪಘಾತದಲ್ಲಿ ದೀಕ್ಷಿತ್ ಅವರಿಗೆ ತೀವ್ರ ಗಾಯವಾಗಿದ್ದು, ಸ್ಥಳೀಯರು ಹತ್ತಿರದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ದೀಕ್ಷಿತ್‌ ಅವರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

ಇದನ್ನೂ ಓದಿ: ಅಕ್ಷಯ ಪದವಿ ಕಾಲೇಜಿನ ಫ್ಯಾಶನ್ ಡಿಸೈನ್ ವಿಭಾಗದಿಂದ ಆಕರ್ಷಕ ರ‍್ಯಾಂಪ್ ವಾಕ್


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ  : https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 251

You cannot copy content of this page