ಕರ್ನಾಟಕ: Tulu Times | ಕೇಂದ್ರ ಸರ್ಕಾರ ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಿದ್ದು, ತೆಂಗು ಬೆಳೆಗಾರರಿಗೆ ಗುಡ್‌ನ್ಯೂಸ್ ಕೊಟ್ಟಿದೆ. ಸದ್ಯ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು 2 ಸ್ತರದಲ್ಲಿ ಹೆಚ್ಚಳ ಮಾಡಲಾಗಿದೆ.
ಕೊಬ್ಬರಿಗೆ ಎಷ್ಟು ಬೆಲೆ ನಿಗದಿಪಡಿಸಲಾಗಿದೆ..?
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ 2026ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ನೀಡಿದೆ. ಉಂಡೆ ಕೊಬ್ಬರಿಯ ಎಂಎಸ್‌ಪಿಯನ್ನು ಕ್ವಿಂಟಲ್ ಗೆ 400 ಹೆಚ್ಚಿಸಿ 12,500 ಕ್ಕೆ ನಿಗದಿ ಮಾಡಲಾಗಿದೆ. 2026 ರ ಹಂಗಾಮಿನಲ್ಲಿ ಮಿಲ್ಲಿಂಗ್ ಕೊಬ್ಬರಿಯ ಎಂಎಸ್‌ಪಿಯನ್ನು ಕ್ವಿಂಟಲ್ ಗೆ 445 ಹೆಚ್ಚಿಸಿ 12,027 ಕ್ಕೆ ನಿಗದಿಪಡಿಸಲಾಗಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ MSP ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸುವುದಾಗಿ ಘೋಷಿಸಿತ್ತು.
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಬಗ್ಗೆ ಹೇಳಿದ್ದೇನು..?
ಮಿಲ್ಲಿಂಗ್ ಕೊಬ್ಬರಿಯ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ಹೆಚ್ಚಿಸಿ 12,027ಕ್ಕೆ ನಿಗದಿಪಡಿಸಿದ್ದು, ಉಂಡೆ ಕೊಬ್ಬರಿಯ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 400 ಹೆಚ್ಚಿಸಿ 12,500ಕ್ಕೆ ನಿಗದಿ ಮಾಡಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ ಕೇಂದ್ರ ನೋಡಲ್ ಏಜೆನ್ಸಿಗಳಾಗಿ ಕಾರ್ಯನಿರ್ವಹಿಸುವುದನ್ನು ಮುಂದುವರಿಸುತ್ತವೆ ಎಂದರು.
ಇನ್ನು ಈ ಬಗ್ಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟ್ವೀಟ್ ಮಾಡಿದ್ದು, ತೆಂಗು ಬೆಳೆಗಾರರಿಗೆ ಮೋದಿ ಸರ್ಕಾರ ಬೆಲೆ ಹೆಚ್ಚಳದ ಕುರಿತು ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು 2026ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ನೀಡಿದೆ ಎಂದರು. ಈ ನಿರ್ಧಾರದಿಂದಾಗಿ ರಾಜ್ಯದಲ್ಲಿ ಹೋಳು ಕೊಬ್ಬರಿ ಮತ್ತು ಉಂಡೆ ಕೊಬ್ಬರಿ ಎರಡರ ದರದಲ್ಲೂ ಗಮನಾರ್ಹ ಏರಿಕೆ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಹೋಳು ಕೊಬ್ಬರಿಗೆ 445 ರೂ., ಉಂಡೆ ಕೊಬ್ಬರಿಗೆ 400 ರೂ. ಹೆಚ್ಚಳ ಮಾಡಲಾಗಿದೆ.
The central government has given great good news to coconut growers – ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess











