ಬ್ರೇಕಿಂಗ್ ನ್ಯೂಸ್
ಕರ್ನಾಟಕಬಂಟ್ವಾಳ

ಬಂಟ್ವಾಳದಲ್ಲಿ ಗಾಂಜಾ ಮಾರಲು ಯತ್ನಿಸುತ್ತಿದ್ದ ಇಬ್ಬರು ಪೊಲೀಸರ ವಶಕ್ಕೆ

ಬಂಟ್ವಾಳ: Tulu Times | ಬಂಟ್ವಾಳದಲ್ಲಿ  ಗಾಂಜಾ ಮಾರಲು ಯತ್ನಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇವರಿಂದ 810 ಗ್ರಾಂ ಗಾಂಜಾ ಸ್ವಾಧೀನ ಪಡಿಸಿಕೊಂಡಿರುವ ಘಟನೆ ತುಂಬೆ ಗ್ರಾಮದ ಹನುಮನಗರದಲ್ಲಿ ನಡೆದಿದೆ.  ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) & ಮತ್ತೋರ್ವ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಬಂಧಿತರಾಗಿದ್ದಾರೆ.

ಪ್ರಕರಣ ನಡೆದದ್ದು ಹೇಗೆ..?

ನಿನ್ನೆ ಸಂಜೆ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ವಿಚಾರ ತಿಳಿದ ನಂತರ ಪೊಲೀಸ್ ಉಪ ನಿರೀಕ್ಷಕರಾದ ಮಂಜುನಾಥ ಟಿ, ಸಿಬ್ಬಂದಿಯೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ಧಾಗ ಇಬ್ಬರು ವ್ಯಕ್ತಿಗಳು KA-19-MN-3664 ನೇ ನೊಂದಣಿ ಸಂಖ್ಯೆಯ ಕಾರು ಮತ್ತು KA-19-AE-0166 ನೇ ನೊಂದಣಿ ಸಂಖ್ಯೆಯ ಆಟೋ ರಿಕ್ಷಾದ ಬಳಿ ಇಬ್ಬರು  ನಿಂತುಕೊಂಡಿದ್ದರು.

ಅವರನ್ನು  ವಿಚಾರಿಸಿದಾಗ ತಾವು ಅಧಿಕ ಹಣಗಳಿಸುವ ಉದ್ದೇಶದಿಂದ ನಿಷೇಧಿತ ಮಾದಕವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ. ಈ ವೇಳೆ ಕಾರನ್ನು ತಪಾಸಣೆ ನಡೆಸಿದಾಗ  450 ಗ್ರಾಂ. ಗಾಂಜಾ ಹಾಗೂ ರಿಕ್ಷಾದಲ್ಲಿ 360 ಗ್ರಾಂ ಗಾಂಜಾ ಪತ್ತೆಯಾಗಿದೆ. ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ ಕ : 183/2025 ಕಲಂ: 8(C), 20(B) ii (a) NDPS Act ಅಡಿಯಲ್ಲಿ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.  ಹೀಗಾಗಿ ವಾಹನಗಳನ್ನು ಹಾಗೂ 810 ಗ್ರಾಂ ಮಾದಕ ವಸ್ತು ಗಾಂಜಾವನ್ನು ಸ್ವಾಧೀನಪಡಿಸಲಾಗಿದೆ.

ಮರದ ಕೆಳಗೆ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ!

ಪ್ರತ್ಯೇಕ ಪ್ರಕರಣದಲ್ಲಿ,  ಸುಬ್ರಹ್ಮಣ್ಯದಲ್ಲಿ ಮರದ ಕೆಳಗೆ ಮಲಗಿದ್ದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕು ಕೂತ್ಕುಂಜ ಗ್ರಾಮದ ಕಲ್ಕ ನಿವಾಸಿ ದೇವಿ ಪ್ರಸಾದ್ ಎಂದು ಗುರುತಿಸಲಾಗಿದೆ.

ಸುಬ್ರಹ್ಮಣ್ಯದ ಹಳೆಯ ಬ್ರಹ್ಮರಥ ಇರುವ ಸ್ಥಳದ ಮರದ ಕೆಳಗೆ ಮಲಗಿದ್ದಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆಯಾಗಿದೆ. ಸವಾರಿ ಮಂಟಪದ ಎದುರು ಇರುವ ಕುಕ್ಕೆಲಿಂಗ ಕಟ್ಟಡದ ಅಂಗಳದಲ್ಲಿ ಹಳೆಯ ಬ್ರಹ್ಮರಥ ಇರುವ ಜಾಗದಲ್ಲಿ ಮರದ ಕೆಳಗೆ ಮಲಗಿದ್ದ ಸ್ಥಿತಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಮೃತಪಟ್ಟಿರುವುದು ಕಂಡುಬರುತ್ತದೆ.

Two arrested for trying to sell ganja in Bantwal- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 158

You cannot copy content of this page