ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕಬಂಟ್ವಾಳ

ವಿಟ್ಲ: ಬಸ್-ಕಾರು ಮುಖಾಮುಖಿ ಢಿಕ್ಕಿ: ಓರ್ವ ಮೃತ್ಯು

ವಿಟ್ಲ – ತುಳು ಟೈಮ್ಸ್: ಕೆಎಸ್ಸಾರ್ಟಿಸಿ ಬಸ್ – ಓಮ್ನಿ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪೆರುವಾಯಿ ಸಮೀಪ ಮುಳಿಯ ಎಂಬಲ್ಲಿ ರವಿವಾರ ಸಂಭವಿಸಿದೆ.

ಮೈರ ನಿವಾಸಿ ಮೋನಪ್ಪ ಕುಲಾಲ್ ಮೃತಪಟ್ಟ ಓಮ್ನಿ ಕಾರು ಚಾಲಕ ಎಂದು ಗುರುತಿಸಲಾಗಿದೆ. ಮೋನಪ್ಪ ಅವರ ಪತ್ನಿ ಲಲಿತಾ ಮತ್ತು ಜೊತೆಗಿದ್ದ ರಮಣಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲದಿಂದ ಪೆರುವಾಯಿ ಕಡೆಗೆ ಹೋಗುತ್ತಿದ್ದ ಓಮ್ನಿ ಕಾರು ಮತ್ತು ಪಕಳ ಕುಂಜದಿಂದ ವಿಟ್ಲ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಓಮ್ನಿಯಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದರು. ಈ ಪೈಕಿ ಮೋನಪ್ಪ ಕುಲಾಲ್ ಮೃತಪಟ್ಟಿದ್ದಾರೆ. ವಿಟ್ಲ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ಸೋಲು, ಗೆಲುವಿನ ಬಗ್ಗೆ ಕಾಂಗ್ರೆಸಿಗರು ಯೋಚಿಸುವುದಿಲ್ಲ: ಡಿ.ಕೆ. ಶಿವಕುಮಾರ್

One Killed, Two Seriously Injured in KSRTC Bus–Omni Car Collision Near Vitla – Tulu Times


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ  : https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 138

You cannot copy content of this page