ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ!? ಬ್ಯಾನ್‌ ಆಗುತ್ತಾ?

ಬೆಂಗಳೂರು – ತುಳು ಟೈಮ್ಸ್: ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಎದುರಾಗಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿರುವ ಬಗ್ಗೆ ಸುದ್ದಿ ಬೆಳಕಿಗೆ ಬಂದಿದ್ದು ರಾಜ್ಯ ಸರ್ಕಾರ ರಾಜ್ಯ ವಿವಿಧೆಡೆಯಿಂದ ಸ್ಯಾಂಪಲ್‌ ಸಂಗ್ರಹಣೆಗೆ ಮುಂದಾಗಿದೆ. ರಾಜ್ಯದ 200ಕ್ಕೂ ಹೆಚ್ಚು ಕಡೆಗಳಲ್ಲಿ ಮೊಟ್ಟೆ ಸ್ಯಾಂಪಲ್‌ ಸಂಗ್ರಹ ಮಾಡಲಾಗ್ತಿದೆ. ನಂತರ ಲ್ಯಾಬ್‌ಗೆ ಕಳುಹಿಸಿ ಪರೀಕ್ಷೆ ನಡೆಸಲಿದೆ.

ರಾಜ್ಯದ ಜನಪ್ರಿಯ ಬ್ರಾಂಡ್‌ಗಳ ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದೆ. ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಎಂಬ ಔಷಧದ ಕಣಗಳು ಪತ್ತೆಯಾಗಿದ್ದು, ಇದು ಡಿಎನ್‌ಎಯಿಂದ ಸಂತಾನೋತ್ಪತ್ತಿ ಅಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗೆ ಎಲ್ಲದಕ್ಕೂ ಹಾನಿ ಮಾಡುತ್ತದೆ ಎನ್ನಲಾಗಿದೆ. ಇದು ಕ್ಯಾನ್ಸರ್‌ನಂತಹ ಅಪಾಯಕಾರಿ ರೋಗ ಉಲ್ಬಣಗೊಳ್ಳಲೂ ಕಾರಣವಾಗಬಹುದು ಎನ್ನುವ ಸುದ್ದಿ ಹರಿದಾಡುತ್ತಿದೆ.

ಇದನ್ನೂ ಓದಿ: ಸ್ನೇಹಿತರ ಎಣ್ಣೆ ಪಾರ್ಟಿ ವೇಳೆ ಗಲಾಟೆ – ಕೊಲೆಯಲ್ಲಿ ಅಂತ್ಯ

ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಜ್ಯ ಆರೋಗ್ಯ ಮತ್ತು ಗುಣಮಟ್ಟ ಇಲಾಖೆ ರಾಜ್ಯದ 200 ಕಡೆಗಳಲ್ಲಿ ಸ್ಯಾಂಪಲ್‌ ಟೆಸ್ಟ್‌ಗೆ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಮೊಟ್ಟೆ ಹಾನಿಕಾರಕ ಅಂಶ ಕಂಡುಬಂದಿಲ್ಲ. ಆದರೆ, ಈ ಹೊಸ ಆರೋಪಗಳ ಹಿನ್ನೆಲೆ ರಾಜ್ಯ ವಿವಿಧೆಡೆ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಕೂಲಂಕುಷ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಒಂದು ವೇಳೆ ಮೊಟ್ಟೆಗಳ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ್ರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈಗಾಗಲೇ ಸ್ಯಾಂಪಲ್‌ ಸಂಗ್ರಹಣೆ ನಡೆಯುತ್ತಿದ್ದು, ಲ್ಯಾಬ್‌ಗೆ ಪರೀಕ್ಷೆಗೆ ಕಳುಹಿಸಲಾಗುತ್ತೆ. ಮುಂದಿನ ವಾರದಲ್ಲಿ ಫಲಿತಾಂಶ ರಾಜ್ಯ ಸರ್ಕಾರದ ಕೈಸೇರಲಿದೆ.

Karnataka’s Health Minister Dinesh Gundu Rao announced that the government will investigate social media claims about a specific egg brand allegedly containing cancer-causing genotoxic substances before taking action. Tulu Times


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ  : https://www.youtube.com/@tulutimess 

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page