ಮೂಲ್ಕಿ: Tulu Times | ಮೂಲ್ಕಿಯಲ್ಲಿ ಪುಟ್ಟ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಅಡಿಯಲ್ಲಿ ವೃದ್ಧನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸರು ಹಳೆಯಂಗಡಿ ಬಳಿಯ ಚೇಳಾಯರು ಎಂಬಲ್ಲಿ ವೃದ್ಧನನ್ನು ಬಂಧಿಸಲಾಗಿದೆ ಎನ್ನಲಾಗಿದೆ.
ಟ್ಯೂಷನ್ ಗೆ ಹೋದಾಗ ರಸ್ತೆಯಲ್ಲಿ ಲೈಂಗಿಕ ಕಿರುಕುಳ!
ಟ್ಯೂಷನ್ ಮುಗಿಸಿಕೊಂಡು ಮಾಮೂಲಿಯಂತೆ ಬಸ್ ನಲ್ಲಿ ಬಂದು ಮುಕ್ಕದಲ್ಲಿ ಇಳಿದು ತನ್ನ ಮನೆಗೆ ಒಳ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವೃದ್ಧ ಆರೋಪಿ ನನ್ನನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಎಂದು ಸಂತ್ರಸ್ತ ಬಾಲಕಿ ದೂರಿನಲ್ಲಿ ಉಲ್ಲೇಖ ಮಾಡಿ, ದೂರು ನೀಡಿದ್ದಾಳೆ. ಚೇಳಾಯರು ನಿವಾಸಿ ಸುಂದರ ಪೂಜಾರಿ (60) ಬಂಧಿತ ಆರೋಪಿಯಾಗಿದ್ದಾನೆ.
ತನ್ನ ಮೇಲೆ ಲೈಂಗಿಕ ಕಿರುಕುಳ ಆಗುತ್ತಿದೆ ಎಂದು ಬಾಲಕಿ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದಳು. ಈ ಘಟನೆಯು 2025ರ ಅಕ್ಟೋಬರ್‌ನಲ್ಲಿ ನಡೆದಿದೆ. ನಂತರ ಬಾಲಕಿಯ ತಾಯಿ ವೈದ್ಯರ ಬಳಿ ಕರೆದುಕೊಂಡು ಹೋಗಿ ತಪಾಸಣೆಗೆ ನೀಡಿದ್ದರು. ಈ ಸಂದರ್ಭ ಬಾಲಕಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರ ತಿಳಿಸಿದ್ದಾಗಿ ಪೊಲೀಸರು ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದಾರೆ. ಇದೀಗ ಪೊಲೀಸರು ಹೆಚ್ಚಿನ ಗಮನದಿಂದ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಮಡಿಕೇರಿಯಲ್ಲಿ ರಸ್ತೆ ಮಧ್ಯೆ ಹೊತ್ತಿ ಉರಿದ ಬಸ್ !
ಪ್ರತ್ಯೇಕ ಪ್ರಕರಣದಲ್ಲಿ, ಮಡಿಕೇರಿಯ ವಿರಾಜಪೇಟೆಯ ಮಾಕುಟ್ಟಿ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ಪ್ರವಾಸಿಗರ ಬನ್ನೊಂದು ರಸ್ತೆ ಮಧ್ಯೆ ಹೊತ್ತಿದೆ. ಬೆಂಕಿ ಗೊತ್ತಿ ಉರಿದ ಪರಿಣಾಮ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನಲಾಗುತ್ತಿದೆ.
ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದ್ದು, ಬಸ್ ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಎನ್ನಲಾಗಿದೆ. ಬಸ್ ಕೇರಳ ನೋಂದಣಿಯ ಖಾಸಗಿ ಬಸ್ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಒಂದು ವೇಳೆ ಬಸ್ ನಲ್ಲಿ ಪ್ರವಾಸಿಗರು ಇದ್ದರೆ, ಭಾರೀ ಅನಾಹುತ ಸಂಭವಿಸಿದೆ. ಘಟನಾ ಸ್ಥಳಕ್ಕೆ ವಿರಾಜಪೇಟೆ `ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Sexual harassment of a girl in Mulki.. Elderly man arrested- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











