ಸಿನಿಮಾ: Tulu Times | ನಟ ಶಿವರಾಜ್ ಕುಮಾರ್ -ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್ ಅದ್ಧೂರಿಯಾಗಿ ರಿಲೀಸ್ ಆಗಿದೆ. ಅರ್ಜುನ್ ಜನ್ಯ ಆಕ್ಷನ್ ಕಟ್ ಹೇಳಿರುವ ಮೊದಲ ಸಿನಿಮಾ ಇದಾಗಿದ್ದು, ಈಗಾಗಲೇ ಬಹಳ ನಿರೀಕ್ಷೆ ಮೂಡಿಸಿದೆ. ಡಿ.25 ಕ್ಕೆ ಈ ಸಿನಿಮಾ ತೆರೆ ಮೇಲೆ ಮೋಡಿ ಮಾಡಲಿದೆ.
ಇದನ್ನೂ ಓದಿ: ಜೋಗಿ ಪ್ರೇಮ್ ಶಿಷ್ಯ ಶಿವ ಮಂಜು ನಿರ್ದೇಶನದ ಹೊಸ ಚಿತ್ರಕ್ಕೆ ಚಾಲನೆ
ಇನ್ನ ಚಿತ್ರದ ಟ್ರೈಲರ್ ಸಿನಿಪ್ರಿಯರ ಗಮನ ಸೆಳೆದಿದ್ದು, ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ರಮೇಶ್ ರೆಡ್ಡಿ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಶಿವರಾಜ್ ಕುಮಾರ್, ಉಪೇಂದ್ರ, ರಾಜ್ ಬಿ. ಶೆಟ್ಟಿ, ಕೌಸ್ತುಭ ಮಣಿ ಮತ್ತು ಜಿಶು ಸೇನ್ಗುಪ್ತಾ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಸಂಗೀತ ಸಂಯೋಜಿಸಿದ್ದಾರೆ.ಈ ಚಿತ್ರವು ಡಿಸೆಂಬರ್ 25ರಂದು ರಿಲೀಸ್ ಆಗಲಿದೆ.
ಇದನ್ನೂ ಓದಿ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕರಿಗೆ ಗುಡ್ ನ್ಯೂಸ್ ಏನದು..?
ಚಿತ್ರದ 40% ಕ್ಕಿಂತ ಹೆಚ್ಚು VFX ಅವಲಂಬಿಸಿದ್ದು, ಸತ್ಯ ಹೆಗ್ಡೆ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ ಮತ್ತು ಮೋಹನ್ ಪಂಡಿತ್ ಕಲಾ ನಿರ್ದೇಶನ ಮಾಡಿದ್ದಾರೆ. ಡಾ. ಕೆ. ರವಿವರ್ಮ, ಜಾಲಿ ಬಾಸ್ಟಿಯನ್, ಡಿಫರೆಂಟ್ ಡ್ಯಾನಿ ಮತ್ತು ಚೇತನ್ ಡಿಸೋಜಾ ಸಾಹಸ ಸಂಯೋಜನೆ ಮಾಡಿದ್ದಾರೆ, ಚಿನ್ನಿ ಪ್ರಕಾಶ್ ಮತ್ತು ಬಿ. ಧನಂಜಯ್ ನೃತ್ಯ ಸಂಯೋಜನೆ ಮಾಡಿದ್ದಾರೆ.ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಚಿತ್ರ ಮೂಡಿ ಬಂದಿದೆ. ಈ ಸಿನಿಮಾವನ್ನು ಹಾಲಿವುಡ್ ದರ್ಜೆಯ ದೃಶ್ಯ ಪರಿಣಾಮಗಳಿಗೆ ಹೆಸರುವಾಸಿಯಾದ ಕೆನಡಾದ ಕಂಪನಿಯಾದ MARZ ಸ್ಟುಡಿಯೋ ನಿರ್ವಹಿಸಿದೆ.
ಬೆಂಗಳೂರಿನ ಕೆಂಪೇಗೌಡ ಮೈದಾನದಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಕಾರ್ಯಕ್ರಮ ನಡೆಯಿತು. ಅಲ್ಲದೆ, ಕರ್ನಾಟಕದ 7 ಜಿಲ್ಲೆಗಳ ಆಯ್ದ ಚಿತ್ರಮಂದಿರಗಳಲ್ಲಿ ಟ್ರೇಲರ್ ಅನ್ನು ನೇರಪ್ರಸಾರ ಮಾಡಲಾಯಿತು.ಇನ್ನೊಂದು ಇಂಟ್ರೆಸ್ಟಿಂಗ್ ಅಂಶ ಅಂದ್ರೆ, ‘45’ ಚಿತ್ರದಲ್ಲಿ ಶಿವರಾಜ್ ಕುಮಾರ್ ಲೇಡಿ ಗೆಟಪ್ ಹಾಕಿದ್ದಾರೆ. ನರ್ತಕಿಯಾಗಿ ಶಿವಣ್ಣ ಸೊಗಸಾಗಿ ಕಾಣಿಸಿಕೊಂಡಿದ್ದಾರೆ. ನೃತ್ಯಗಾರ್ತಿಯಾಗಿ ಶಿವಣ್ಣನ ಲುಕ್ ಕಂಡು ಫ್ಯಾನ್ಸ್ ಅಕ್ಷರಶಃ ಫಿದಾ ಆಗಿದ್ದಾರೆ.
Actor Shivraj Kumar-Upendra starrer 45 trailer release!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess











