ಟಿ20 ಕ್ರಿಕೆಟ್ : Tulu Times | ಟಿ 20 ಕ್ರಿಕೆಟ್ ನಲ್ಲಿ ಭಾರತ ತಂಡವು ಅತ್ಯಂತ ಜನಪ್ರಿಯ ಹಾಗೂ ಶಕ್ತಿಶಾಲಿ ತಂಡಗಳಲ್ಲಿ ಒಂದಾಗಿದೆ. 2007ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೊದಲ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಭಾರತ ತಂಡ ಚಾಂಪಿಯನ್ ಆಗುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ತನ್ನ ಶಕ್ತಿ ಪ್ರದರ್ಶಿಸಿತು. ಈ ವಿಜಯವು ಭಾರತದಲ್ಲಿ ಟಿ20 ಕ್ರಿಕೆಟ್‌ಗೆ ಹೊಸ ಉತ್ಸಾಹ ನೀಡಿತು.
ಈ ಟೂರ್ನಿಯಿಂದ ಶುಭ್ಮನ್ ಗಿಲ್ ಅವರನ್ನು ಕೈ ಬಿಡಲಾಗಿದೆ ;
ಇದೀಗ ಬಹುನಿರೀಕ್ಷಿತ ಟಿ20 ವಿಶ್ವಕಪ್ಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಟೂರ್ನಿಯಿಂದ ಶುಭ್ಮನ್ ಗಿಲ್ ಅವರನ್ನು ಕೈ ಬಿಡಲಾಗಿದೆ ಎಂದು ವರದಿಯಾಗಿದೆ.
ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವು ಫೆಬ್ರವರಿ 7 ರಿಂದ ತನ್ನ ಆಟವನ್ನು ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಯುಎಸ್ಎ ತಂಡವನ್ನು ಎದುರಿಸಲಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಫೆಬ್ರವರಿ 15 ರಂದು ಪಾಕಿಸ್ತಾನದ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯಕ್ಕೆ ಕೊಲೊಂಬೊದ ಆರ್. ಪ್ರೇಮದಾಸ ಸ್ಟೇಡಿಯಂ ಆತಿಥ್ಯವಹಿಸಲಿದೆ. ಅದರಂತೆ ಟಿ20 ವಿಶ್ವಕಪ್ಗೆ ಭಾರತ ತಂಡ ಹಾಗೂ ಟೀಮ್ ಇಂಡಿಯಾದ ವೇಳಾಪಟ್ಟಿ ಹೀಗಿವೆ ;
ಟಿ20 ವಿಶ್ವಕಪ್ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.
Gill out of T20 cricket: Suryakumar named captain – ತುಳು ಟೈಮ್ಸ್
ಇದನ್ನೂ ಓದಿ :ಅತಿಯಾದ ವ್ಯಾಮೋಹ ಒಳ್ಳೆಯದಲ್ಲ : ನಿಮ್ಮ ಆಸಕ್ತಿ ಸಾಧನೆಯ ಮೇಲಿರಲಿ
===
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/MOqjEYxAJa8?si=ZnMAz2_LgUHSxqn9











