Kasargod: ಆತ್ಮಹತ್ಯೆಗೆ ಯತ್ನಿಸಿದ್ದ ನರ್ಸಿಂಗ್ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಅಪಘಾತ ಹೊಂದಿ ಮೃತಪಟ್ಟ ಘಟನೆ ನಡೆದಿದೆ.
ಕುಟ್ಟಿಕ್ಕೋಲ್ ಗ್ರಾಮ ಪಂಚಾಯತ್‌ನ ಬೇತೂರು ಪಾರ ನಿವಾಸಿ ಮಹಿಮಾ ಕೆ.ಸಿ (19) ಮೃತಪಟ್ಟ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ. ಈಕೆ ಕಾಸರಗೋಡಿನ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಬೆಳಿಗ್ಗೆ ಮನೆಯ ಕೋಣೆಯಲ್ಲಿ ಮಹಿಮಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕೂಡಲೇ ಆಕೆಯ ಸಹೋದರ ಮಹೇಶ್ ಆಕೆಯನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಕಾರಿನಲ್ಲಿ ಕಾಸರಗೋಡಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಅಪಘಾತ ನಡೆದಿದೆ. ಮನೆಯಿಂದ ಒಂದು ಕಿ.ಮೀ ಅಂತರದಲ್ಲಿ ಅಪಘಾತ ನಡೆದಿದೆ.
ಅತಿವೇಗದ ಚಾಲನೆಯಿಂದ ಕಾರು ನಿಯಂತ್ರಣ ತಪ್ಪಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳೀಯರು ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ತಲುಪಿಸಿದ್ದಾರೆ. ಆದರೆ ಮಹಿಮಾ ಆಗಲೇ ಮೃತಪಟ್ಟಿದ್ದರು. ಮಹೇಶ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ ಹಾಗೂ ಅಪಘಾತದ ಬಗ್ಗೆ ಬೇಡಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಪಘಾತದಿಂದ ಅಥವಾ ನೇಣು ಬಿಗಿದು ಮಹಿಮಾ ಮೃತಪಟ್ಟಿರಬಹುದೇ ಎಂಬ ಬಗ್ಗೆ ಮರಣೋತ್ತರ ಪರೀಕ್ಷಾ ವರದಿ ಲಭಿಸಿದ ಬಳಿಕ ಸ್ಪಷ್ಟಗೊಳ್ಳಲಿದೆ.
ಇದನ್ನೂ ಓದಿ: Belthangady:ಉಪ್ಪಿನಂಗಡಿ-ಕುಪ್ಪೆಟ್ಟಿ ರಸ್ತೆ ರಿಪೇರಿ ಸದ್ಯಕ್ಕಿಲ್ಲ!?
ವೀಡಿಯೋ ಸುದ್ದಿಗಳನ್ನು ವೀಕ್ಷಿಸಲು ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ Subscribe ಮಾಡಿ:https://www.youtube.com/watch?v=JJgZvG3Eep4











