ಬೆಂಗಳೂರು : Tulu Times | ಕರ್ನಾಟಕ ಹೈಕೋರ್ಟ್ ಭಾರತದ ಪ್ರಮುಖ ನ್ಯಾಯಾಂಗ ಸಂಸ್ಥೆಗಳಲ್ಲಿ ಒಂದಾಗಿದೆ. ಇದು ಕರ್ನಾಟಕ ರಾಜ್ಯದ ಉನ್ನತ ನ್ಯಾಯಾಲಯವಾಗಿದ್ದು, ಸಂವಿಧಾನದ ರಕ್ಷಣೆ ಹಾಗೂ ನ್ಯಾಯ ವಿತರಣೆಯಲ್ಲಿ ಮಹತ್ವದ ಪಾತ್ರ ವಹಿಸಿದೆ. ಈ ನ್ಯಾಯಾಲಯದ ಕೇಂದ್ರ ಕಚೇರಿ ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿದೆ. ಹೈಕೋರ್ಟ್‌ಗೆ ಅಧೀನವಾಗಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತವೆ. ಹೀಗಾಗಿ ಇದು ನ್ಯಾಯಾಂಗ ವ್ಯವಸ್ಥೆಯ ಮುಖ್ಯ ಅಡಿಪಾಯವಾಗಿದೆ. ಅಲ್ಲದೆ, ನಾಗರಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ ಕರ್ನಾಟಕ ಹೈಕೋರ್ಟ್ ಪ್ರಮುಖ ಪಾತ್ರ ವಹಿಸುತ್ತದೆ.
ಕಾನೂನು ಸಂಶೋಧನಾ ಸಹಾಯಕ ಹುದ್ದೆ ;
ಕರ್ನಾಟಕ ಸರ್ಕಾರದಡಿಯಲ್ಲಿ ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಹೌದು.. ಕರ್ನಾಟಕ ಹೈಕೋರ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಕಾನೂನು ಸಂಶೋಧನಾ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31ರೊಳಗೆ ಅರ್ಜಿ ಸಲ್ಲಿಸತಕ್ಕದ್ದು ಎಂದು ತಿಳಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, officeofhmjtvg@gmail.com ಗೆ ಡಿಸೆಂಬರ್ 31 ರ ಮೊದಲು ಅಗತ್ಯವಿರುವ ಎಲ್ಲಾ ದಾಖಲೆಗಳೊಂದಿಗೆ ಕಳುಹಿಸಬಹುದು.ಕರ್ನಾಟಕ ಹೈಕೋರ್ಟ್ ಹುದ್ದೆಗಳ ಅಧಿಸೂಚನೆಯಡಿ, ಒಟ್ಟು 2 ಹುದ್ದೆಗಳು, ಬೆಂಗಳೂರಿನಲ್ಲಿದ್ದು, ಇದಕ್ಕೆ ಕಾನೂನು ಸಂಶೋಧನಾ ಸಹಾಯಕರನ್ನು ನೇಮಕ ಮಾಡಲಾಗುವುದು ಎಂದು ವರದಿಯಾಗಿದೆ.
Applications are invited for the post of Legal Research Assistant in the High Court of Tamil Nadu – ತುಳು ಟೈಮ್ಸ್
ಇದನ್ನೂ ಓದಿ :ಕಾಡಾನೆ ಹಾವಳಿ ತಡೆಯೋದಕ್ಕಾಗಿ ಹೊಸ ತಂತ್ರದ ಪರಿಚಯ !
=====
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://www.youtube.com/live/FGONMu5gqxQ?si=QFAo0VHBqtafBDpX











