ಬ್ರೇಕಿಂಗ್ ನ್ಯೂಸ್
ಕರ್ನಾಟಕಬೆಳ್ತಂಗಡಿಮಂಗಳೂರು

ಬೆಳ್ತಂಗಡಿ: ಪತ್ನಿಯಿಂದ ಪತಿ ಹತ್ಯೆ ಪ್ರಕರಣದ ತೀರ್ಪು

ಬೆಳ್ತಂಗಡಿ :Tulu Times | 2022 ರಲ್ಲಿ ಪತ್ನಿಯಿಂದ ಪತಿಯ ಕೊಲೆ ಪ್ರಕರಣದ ತೀರ್ಪು ಡಿ.23 ರಂದು ಹೊರಬಿದ್ದಿದ್ದು, ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ ಎಂಬ ತೀರ್ಪು ಬಂದಿದೆ.

ಇದನ್ನೂ ಓದಿ: ರೈತ ಉಳಿದರೆ ದೇಶ ಉಳಿಯುತ್ತದೆ : ಡಿಸೆಂಬರ್ 23 ‘ರಾಷ್ಟ್ರೀಯ ರೈತ ದಿನ’

ಯಾವುದು ಕೊಲೆ ಪ್ರಕರಣ..?

ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ 2022 ರಲ್ಲಿ ನಡೆದ ಪತ್ನಿಯಿಂದ ಪತಿ ಹತ್ಯೆ ಪ್ರಕರಣದ ತೀರ್ಪು ಡಿ.23 ರಂದು ಹೊರಬಿದ್ದಿದೆ. 05-07-2022 ರಂದು ಬೆಳಿಗ್ಗೆ 5:30 ಕ್ಕೆ ನಾವೂರು ಮನೆಯಲ್ಲಿ ಪತಿ ಯೋಹಾನನ್ (72) ಅವರನ್ನು ಎಲಿಯಮ್ಮ (56) ಕತ್ತಿಯಿಂದ ಕಡಿದು ಕೊಲೆ ಮಾಡಿದ್ದರು. ನಂತರ, ಆರೋಪಿ ಎಲಿಯಮ್ಮ ನನ್ನು ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟ‌ರ್ ಶಿವಕುಮಾರ್ ಮತ್ತು ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನ ವಿಧಿಸಿತ್ತು.

ಇದನ್ನೂ ಓದಿ: ಕರ್ನಾಟಕ ಹೈಕೋರ್ಟ್ ನಲ್ಲಿ ಕಾನೂನು ಸಂಶೋಧನಾ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

ವಿಚಾರಣೆ ವೇಳೆ ಆರೋಪಿ ತಾನು ಕೊಂದಿರುವುದು ಹೌದು ಎಂದು ಒಪ್ಪಿಕೊಂಡಿದ್ದರು. ಆದರೆ, ನ್ಯಾಯಾಲಯ ಪೂರ್ಣ ಸಾಕ್ಷಿ ವಿಚಾರಣೆ ನಡೆಸಿತ್ತು.  ಆದರೆ ಅಂತಿಮವಾಗಿ ಆರೋಪಿ ಪರ ವಕೀಲ ವಿಕ್ರಮ್ ರಾಜ್ ಎ. ಅವರು ನಡೆಸಿದ ಕ್ರಾಸ್ ಎಕ್ಸಾಮಿನೇಷನ್‌ನಲ್ಲಿ ಆರೋಪಿ “Delusional Disorder” ನಿಂದ ಬಳಲುತ್ತಿದ್ದರು ಎಂಬುದು ಸಾಬೀತಾಯಿತು. “ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಾರಣ ಆಕೆಗೆ ತಾನು ಮಾಡುತ್ತಿರುವ ಕೃತ್ಯ ತಪ್ಪು ಎಂಬ ಅರಿವು ಇರಲಿಲ್ಲ ಎಂದು ವಕೀಲರು ವಾದಿಸಿದ್ದರು. ಎಲಿಯಮ್ಮ ಗಂಡನನ್ನು ಕೊಂದಿರುವುದು ಸಾಬೀತಾಗಿದೆ. ಆದರೆ ಆಕೆ ಮಾನಸಿಕ ಅಸ್ವಸ್ಥರಾಗಿದ್ದರಿಂದ ಅಪರಾಧಿಕ ಹೊಣೆ ಇಲ್ಲ ಎಂದು ತೀರ್ಪು ನೀಡಿದ್ದಾರೆ. ಈ ಪ್ರಕರಣದಲ್ಲಿ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಶಿವಕುಮಾರ್, ಸಬ್ ಇನ್ಸ್‌ಪೆಕ್ಟ‌ರ್ ನಂದ ಕುಮಾರ್ ಪ್ರಕರಣದ ತನಿಖೆ ನಡೆಸಿದ್ದರು. ಆರೋಪಿ ಪರವಾಗಿ ನ್ಯಾಯವಾದಿಗಳಾದ ವಿಕ್ರಮ್ ರಾಜ್ ಎ ಮತ್ತು ಜೀವನ ಎ.ಎಂ. ವಾದ ಮಂಡಿಸಿದ್ದರು.

Belthangadi: Verdict in case of murder of husband by wife- ತುಳುಟೈಮ್ಸ್

ಇದನ್ನೂ ಓದಿ: ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಸಿಎಂ‌ ಡಿ.ಕೆ.ಶಿವಕುಮಾರ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 163

You cannot copy content of this page