ಬೆಂಗಳೂರು: Tulu Times | ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಡೋಲಾಯಮಾನ ಸ್ಥಿತಿಯಲ್ಲಿದೆ. ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು ರಾಜಕೀಯ ಕಾರಣಕ್ಕೆ ಶಿಕ್ಷಣ ವ್ಯವಸ್ಥೆ ಹಾಳು ಮಾಡುವ ಕೆಲಸ ಆಗಬಾರದು. ಶಿಕ್ಷಣ ರಾಜಕೀಯ ಮುಕ್ತವಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಅವರು ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಸುಶಾಸನ ದಿನಾಚರಣೆ ಅಟಲ್ ಪುರಸ್ಕಾರ 2025 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಟಲ್ ಬಿಹಾರಿ ವಾಜಪೇಯಿ ಅವರು ಆರು ದಶಕಗಳ ಕಾಲ ಪರಿಶುದ್ಧ ರಾಜಕಾರಣ ಮಾಡಿದ್ದರು. ಅವರ ನಡೆ ನುಡಿಯಲ್ಲಿ ವ್ಯತ್ಯಾಸ ಇರಲಿಲ್ಲ. ಅಧಿಕಾರಕ್ಜೆ ಬರುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಸುಮಾರು ನಲವತ್ತೈದು ವರ್ಷ ಹೋರಾಟ ಮಾಡಿಕೊಂಡು ಬಂದಿದ್ದರು. ಅಂತವರ ಕೈಯಲ್ಲಿ ಅಧಿಕಾರ ಬಂದಾಗ ಯಾವರೀತಿ ನಡೆಸುತ್ತಾರೆ ಎಂದು ನಿರೀಕ್ಷೆ ಇತ್ತು. ಜನನಾಯಕನ ಕೈಯಲ್ಲಿ ಅಧಿಕಾರ ಬಂದಾಗ ಹೇಗೆ ನಡೆಸುತ್ತಾರೆ ಎಂದು ವಾಜಪೇಯಿಯವರು ತೋರಿಸಿಕೊಟ್ಟರು ಎಂದು ಹೇಳಿದರು.
ಮಹಾತ್ಮಾ ಗಾಂಧಿ ರಾಮರಾಜ್ಯ ಸ್ವರಾಜ್ಯದ ಕಲ್ಪನೆ ಕೊಟ್ಟು ಹೋಗಿದ್ದಾರೆ. ವಾಜಪೇಯಿ ಅವರು ಈಗ ಬೇಕಾಗಿರುವುದು ಸುರಾಜ್ಯ ಎಂದು ಅವರು ಸುರಾಜ್ಯದ ಕಲ್ಪನೆ ಕೊಟ್ಟರು. ಎರಡನೇಯದ್ದು ಲಾಲ ಬಹಾದ್ದೂರ ಶಾಸ್ತ್ರಿ ಯವರು ಜೈ ಜವಾನ್ ಜೈ ಕಿಸಾನ್ ಅಂದರು. ಸ್ವಾತಂತ್ರ್ಯ ಬಂದ ಮೇಲೆ ದೇಶದ ವಿಭಜನೆ ಮತ್ತೆ ನಮ್ಮ ಮೇಲೆ ಯುದ್ದ ಸಾರಿದ್ದರು. ಲಾಲ್ ಬಹದ್ದೂರು ಶಾಸ್ತ್ರಿಯವರು ಜೈ ಜವಾನ್ ಜೈಕಿಸಾನ್ ಅಂದರು ಆಗ ಆಹಾರದ ಕೊರತೆ ಇತ್ತು. ಹೀಗಾಗಿ ಸೈನಿಕ ಮತ್ತು ರೈತರ ಅಗತ್ಯ ಇತ್ತು. ಇವತ್ತಿನ ಭಾರತ ಹಿಂದುಳಿಯಬಾರದು ಎಂದು ವಾಜಪೇಯಿ ಅವರು ಜೈ ವಿಜ್ಞಾನ ಎಂದರು. ಅವರ 101 ನೇ ಜಯಂತಿ ಕಾರ್ಯಕ್ರಮ ನಾಡಿರುವುದು ಅತ್ಯಂತ ಸುಸ್ತ್ಯ ಕಾರ್ಯ ಎಂದರು.
ಶಿಕ್ಷಣ ಕ್ರಾಂತಿ ಆಗಬೇಕು
ಹಳ್ಳಿ ಮಕ್ಕಳು ಬಹಳ ಕಷ್ಟದಲ್ಲಿ ಇದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಹಳ್ಳಿಗಳಲ್ಲಿ ಪಬ್ಕಿಕ್ ಶಾಲೆಗಳನ್ನು ಮಾಡಿದ್ದಾರೆ. ರಾಜ್ಯ ಸರ್ಕಾರ ಇನ್ನಷ್ಟು ಪಬ್ಲಿಕ್ ಶಾಲೆಗಳನ್ನು ಮಾಡಲು ಹೊರಟಿದೆ ಒಳ್ಳೆಯದು. ನಮ್ಮ ಮಕ್ಕಳಿಗೆ ಪ್ರತಿಭೆ ಕೊರತೆಯಿಲ್ಲ. ನಾನು ಸಿಎಂ ಆಗಿದ್ದಾಗ 30 ಸಾವಿರ ಶಾಲಾ ಕೊಠಡಿ ನಿರ್ಮಿಸಲು ತೀರ್ಮಾನಿಸಿ 10 ಸಾವಿರ ಕೊಠಡಿ ನಿರ್ಮಿಸಿದ್ದೇವು ಈಗ ಯೋಜನೆ ನಿಂತಿದೆ. ಕಂಠಪಾಠದ ಶಿಕ್ಷಣ ನಿಲ್ಲಬೇಕು. ಶಿಕ್ಷಣದಲ್ಲಿ ಕ್ರಾಂತಿಯಾದರೆ ದೇಶದಲ್ಲಿ ಕ್ರಾಂತಿಯಾಗುತ್ತದೆ. ಎಲ್ಲ ಶಿಕ್ಷಣವನ್ನು ನೌಕರಿಗೆ ಮಾಡುತ್ತೇವೆ ಉದ್ಯೋಗ ಅರಸುವ ಶಿಕ್ಷಣ ಬಹಳ ದಿನ ಇರುವುದಿಲ್ಲ. ಉದ್ಯೊಗ ಕೊಡುವ ಶಿಕ್ಷಣ ಆರಂಭಿಸಬೇಕು.
ವಾಜಪೇಯಿ ಅವರು ಸರ್ವ ಶಿಕ್ಷಣ ಅಭಿಯಾನ ಆರಂಭಿಸಿ ಶಾಲೆಗಳಿಗೆ ಸುಣ್ಣ ಬಣ್ಣ ಹಚ್ಚುವ ಕೆಲಸ ಮಾಡಿದರು. ಪ್ರಾಥಮಿಕ ಮಾಧ್ಯಮಿಕ ಶಿಕ್ಷಣ ರಾಜ್ಯ ಸರ್ಕಾರದ ಜವಾಬ್ದಾರಿ ಶಿಕ್ಷಣ ದುಬಾರಿಯಾಗಬಾರದು. ಕೆಂಪೇಗೌಡ ಫೌಂಡೇಶನ್ ಅವರು ಬದಲಾವಣೆಯ ಬೀಜ ಬಿತ್ತಬೇಕು. ಕೆಂಪೇಗೌಡರು ಸುಶಾನ ಮಾಡಿದ್ದರು. ಅದೇ ರೀತಿ ವಿಜಯನಗರ ಸಾಮ್ರಾಜ್ಯದಲ್ಲಿ ನಡೆಯಿತು. ರಾಜ್ಯದಲ್ಲಿ ಜನಕೇಂದ್ರಿತ ಆಡಳಿತ ನಡೆಯಬೇಕು. ಪವರ್ ಪೊಲಿಟಿಕ್ಸ್ ಬೇಡ, ಪೀಪಲ್ಸ್ ಪೊಲಿಟಿಕ್ಸ್ ಮಾಡಿ ಎಂದು ಜನ ಸಾಮನ್ಯರು ಈ ಪ್ರಶ್ನೆ ಕೇಳುತ್ತಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ, ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ಅಧ್ಯಕ್ಷ ಡಾ. ಕೃಷ್ಣೇಗೌಡ ಹಾಜರಿದ್ದರು. ಈ ಸಂದರ್ಭದಲ್ಲಿ ಐಐಎಸ್ಸಿ ನಿರ್ದೇಶಕ ಪ್ರೊ ಗೋವಿಂದ ರಂಗರಾಜನ್, ನಿವೃತ್ತ ಕುಲಪತಿ ಡಾ ಚಂದ್ರಶೇಖರ ಶೆಟ್ಟಿ, ಬೇಸ್ ಸಂಸ್ಥೆ ಸಂಸ್ಥಾಪಕ ಡಾ. ನಾಗರಾಜ್ ಅವರಿಗೆ ಅಟಲ್ ಪುರಸ್ಕಾರ ನೀಡಿ ಗೌರವಿಸಲಾಯಿತು.
Education should be free from politics: Basavaraja Bommai- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











