ಕೊಕ್ಕಡ: Tulu Times | ಕೊಕ್ಕಡ ಗ್ರಾಮದ ಹಳ್ಳಿಗೇರಿ ಎಂಬಲ್ಲಿ ಅಜಯ್ ಕುಮಾರ್ (39) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ಸಂಭವಿಸಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ಏನು..?
ಅಜಯ್ ಕುಮಾರ್ ಕೊಕ್ಕಡ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಿವೃತ್ತ ನೌಕರ ಕುಂಞಕಣ್ಣನ್ ಅವರ ಪುತ್ರರಾಗಿದ್ದಾರೆ. ಮಧ್ಯಾಹ್ನ ಊಟ ಮುಗಿಸಿದ ನಂತರ ಅಜಯ್ ತಮ್ಮ ಮನೆಯಲ್ಲಿದ್ದ ಫ್ಯಾನ್‌ಗೆ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ಕೆಲವು ಸಮಯದಿಂದ ಅವರು ಸ್ವಂತ ಆಟೋ ರಿಕ್ಷಾ ಚಾಲನೆ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಇನ್ನುಅಜಯ್ ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದು ತಿಳಿದುಬಂದಿಲ್ಲ.
ಇದನ್ನೂ ಓದಿ: ಫೆಬ್ರವರಿ ತಿಂಗಳ ಮೊದಲ ದಿನವೇ ಕೇಂದ್ರ ಬಜೆಟ್ ಮಂಡನೆಯಾಗುತ್ತಾ ?
ವಿಟ್ಲದ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ!
ವಿಟ್ಲದ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಸಂಭವಿಸಿ ಭಾರೀ ನಷ್ಟ ಉಂಟಾಗಿದೆ. ಪರಿಣಾಮ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ವಿಟ್ಲ ಪೇಟೆಯ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಸುತ್ತಮುತ್ತಲಿನ ಅಂಗಡಿಗಳಿಗೂ ಹಬ್ಬಿದ್ದು, ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಸುತ್ತಮುತ್ತಲಿನ ಜನ ಬಂದು ನೋಡಿ ಶಾಕ್ ಆಗಿದ್ದಾರೆ, ಬೆಂಕಿಯನ್ನು ನಂದಿಸಲಾಗದೆ ನಿಂತುಕೊಂಡು ನೋಡಿದ್ದಾರೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣವೇ ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
ಕೊಡಂಗೆ ಮಾಲೀಕತ್ವದ ಸಂತೋಷ್ ಕುಮಾರ್ ಎಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇನ್ನು ಈ ಅಂಗಡಿನ ಮಧ್ಯೆ ಇದ್ದಂತಹ, ಎಸ್. ಬಿ. ಟೈಲರಿಂಗ್ ಶಾಪ್, ಪಡೀಲ್ ಫಾಸ್ಟ್ ಫುಡ್ ಸಹಿತ ಸಣ್ಣ ಅಂಗಡಿಗಳೂ ಬೆಂಕಿ ತಗುಲಿದ್ದು ಸಂಪೂರ್ಣವಾಗಿ ಬೆಂಕಿ ಹರಡಿದೆ. ಅಮಿತ್ ಹೋಟೇಲ್ ಹಾಗೂ ಸ್ಯಾರ್ ವೈನ್ಸ್ ವರೆಗೂ ಹಬ್ಬಿದ್ದು, ಇದರ ನಡುವೆ ಇದ್ದಬಂಟ್ವಾಳದಿಂದ ಅಗ್ನಿಶಾಮಕ ಸಾಹನ ಬಂದಿದೆ. ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನಲಾಗಿದ್ದು, ಈ ಘಟನೆಯ ಪರಿಣಾಮವಾಗಿ ಭಾರೀ ನಷ್ಟ ಸಂಭವಿಸಿದೆ.
Someone committed suicide by hanging himself in Kokkada- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











