ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕಬೆಳ್ತಂಗಡಿ

ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈ ಕೋರ್ಟ್ ನ ಹಿರಿಯ ನ್ಯಾಯವಾದಿ ದೊರೆರಾಜು ಭೇಟಿ !

ಬೆಳ್ತಂಗಡಿ: Tulu Times | ಬೆಳ್ತಂಗಡಿ ನ್ಯಾಯಾಲಯಕ್ಕೆ ಹೈ ಕೋರ್ಟ್ ನ ಹಿರಿಯ ವಕೀಲರಾದ ದೊರೆರಾಜು ಜ.3 ರಂದು 12:30 ಕ್ಕೆ ಹಾಜರಾಗಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಮತ್ತಷ್ಟು ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ.

ಇದೀಗ ಜಯಂತ್. ಟಿ ತಂಡಕ್ಕೆ ವಾದ ಮಂಡಿಸಲು ದೊರೆರಾಜು ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ್ದು,  ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ 39/25 ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಾದ ನಡೆಸಲಿದ್ದಾರೆ.  ಈ ಪ್ರಕರಣದಲ್ಲಿ  ಮಹೇಶ್ ಶೆಟ್ಟಿ ಜಯಂತ್ ಟಿ  ಹಾಗೂ ಇತರರ ಪರವಾಗಿ ವಾದ ಮಂಡಿಸಲು ಹಿರಿಯ ನ್ಯಾಯವಾದಿ ದೊರೆ ರಾಜು ಅವರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ನ್ಯಾಯಾಲಯದ ಮುಂದೆ ವಾದ ಮಂಡಿಸಲು ಬಂದ ಹಿರಿಯ ವಕೀಲ ದೊರೆರಾಜು!

ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ಬೆಳ್ತಂಗಡಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಎಸ್.ಐ.ಟಿ ತನಿಖೆಯಲ್ಲಿ, ಈ ಆರೋಪಗಳು ಕಟ್ಟುಕಥೆ ಮತ್ತು ಪಿತೂರಿ ಎಂದು ಕಂಡುಬಂದಿದೆ, ಮತ್ತು ಈ ಪಿತೂರಿಯ ಹಿಂದೆ ಕೆಲವು ವ್ಯಕ್ತಿಗಳಿದ್ದಾರೆ ಎಂದು ವರದಿ ಹೇಳಿದೆ. ಈ ಸಮಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರನ್ನು ಆರೋಪಿಗಳಾಗಿಸಲು ಅನುಮತಿ ನೀಡುವಂತೆ ಕೇಳಿಕೊಂಡಿದ್ದು, ವಿಚಾರಣೆ ನಡೆಯುತ್ತಿದೆ. ಇದೀಗ ಇದರ ಆಧಾರದ ಮೇಲೆ ಅವರು ನ್ಯಾಯಾಲಯದ ಮುಂದೆ ವಾದ ಮಂಡಿಸಲಿದ್ದಾರೆ. ಎಸ್.ಐ.ಟಿ ಸಲ್ಲಿಸಿದ್ದ ವರದಿಯ ಪ್ರತಿಯನ್ನು ಪಡೆಯಲು ಜಯಂತ್ ಟಿ ಅವರ ಪರವಾಗಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದ್ದ ದೊರೆ ರಾಜು ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿ ವರದಿಯ ಪ್ರತಿಯನ್ನು ಪಡೆದಿದ್ದರು.

ಮಹಾಂತೇಶ್ ಬೀಳಗಿ ಮಗಳಿಗೆ ಅನುಕಂಪದ ಆಧಾರದಲ್ಲಿ ಹುದ್ದೆ!

ಬೆಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ,ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಾಂತೇಶ್ ಬೀಳಗಿ ಅವರ ನಿಧನದ ನಂತರ ಇದೀಗ ಅದರ ಮಗಳಿಗೆ ಅನುಕಂಪದ ಆಧಾರದಲ್ಲಿ ಹುದ್ದೆ ನೀಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ವಿಶೇಷ ಪ್ರಕರಣದಡಿ ಸಚಿವಾಲಯದಲ್ಲಿ ಅನುಕಂಪದ ಆಧಾರದಲ್ಲಿ ಸಿ ದರ್ಜೆ ಸಹಾಯಕಿ ಹುದ್ದೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಹಾಂತೇಶ್ ಬೀಳಗಿ ಕುಟುಂಬದವರಿಗೆ ಅನುಕಂಪದ ಹುದ್ದೆ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಚೈತನ್ಯ ಅವರಿಗೆ ಅನುಕಂಪದ ಆಧಾರದ ಮೇಲೆ ಗ್ರೂಪ್ ಸಿ ಹುದ್ದೆ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ.

ಹಲವು ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಜಿಲ್ಲಾಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು. ಮಹಾಂತೇಶ್ ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಎಲ್ಲ ಕಡೆಗಳಲ್ಲಿಯೂ ತಮ್ಮ ದಕ್ಷತೆಯಿಂದಾಗಿ ಹೆಜ್ಜೆ ಗುರುತುಗಳನ್ನು ಉಳಿಸಿ ಹೋಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದ್ದಾರೆ. ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾದ ಸುದ್ದಿ ಇಡೀ ಕರ್ನಾಟಕಕ್ಕೆ ನೋವು ತಂದಿತ್ತು.

Senior High Court lawyer Doreraju visits Belthangady court!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess‌

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 172

You cannot copy content of this page