ಬ್ರೇಕಿಂಗ್ ನ್ಯೂಸ್
ಕರ್ನಾಟಕಮಂಗಳೂರು

ಉಪ್ಪಿನಂಗಡಿ: ಎಟಿಎಂ ಹಣ, ಚಿನ್ನದೊಂದಿಗೆ ಬ್ಯಾಂಕ್‌ ಜಂಟಿ ವ್ಯವಸ್ಥಾಪಕ ಎಸ್ಕೇಪ್‌ !

ಉಪ್ಪಿನಂಗಡಿ: Tulu Times | ಉಪ್ಪಿನಂಗಡಿ ಸಮೀಪದ  ಪೆರ್ನೆ ಗ್ರಾಮದ ಬ್ಯಾಂಕ್‌ ಆಫ್ ಬರೋಡಾ ಶಾಖೆಯ ಜಂಟಿ ವ್ಯವಸ್ಥಾಪಕ ಎಟಿಎಂ ಹಣ ಹಾಗೂ ಲಾಕ‌ರ್ ಒಂದರಲ್ಲಿದ್ದ ಚಿನ್ನದೊಂದಿಗೆ ಎಸ್ಕೇಪ್‌ ಆದ ಘಟನೆ ಬೆಳಕಿಗೆ ಬಂದಿದೆ.

ಈ ಗ್ರಾಮದ  ಬ್ಯಾಂಕ್ ಆಫ್ ಬರೋಡಾ ಶಾಖೆಯ ಜಂಟಿ ವ್ಯವಸ್ಥಾಪಕ ಸುಬ್ರಹ್ಮಣ್ಯಂ (30)  ಎಟಿಎಂ ಹಣ ಹಾಗೂ ಲಾಕರ್ ಒಂದರಲ್ಲಿದ್ದ ಚಿನ್ನಗಳನ್ನು ಹಿಡಿದುಕೊಂಡು ಎಸ್ಕೇಪ್‌ ಆದ ಘಟನೆ ನಡೆದಿದ್ದು,  ಬ್ಯಾಂಕ್‌ ಗ್ರಾಹಕರು ಶಾಕ್‌ ಆಗಿದ್ದಾರೆ.

ಬ್ಯಾಂಕ್ ಸಿಬ್ಬಂದಿಯೇ ‌ ಕಳ್ಳತನ ಮಾಡಿ ಓಡಿ ಹೋದ!

ಜಂಟಿ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಸುಬ್ರಮಣ್ಯ ಬ್ಯಾಂಕ್ ಆಫ್ ಬರೋಡಾ ಪೆರ್ನೆ ಶಾಖೆಯ  ಎಟಿಎಂ ಮೇಲ್ವಿಚಾರಣೆಯ  ಜವಾಬ್ದಾರಿ ಹೊಂದಿದ್ದರು. ಇವರು  ಕಳೆದ 06-02-2024 ರಿಂದ 16-12-2025 ರವರೆಗೆ ಎಟಿಎಂಗೆ ನಿಗದಿತ ನಗದು ಜಮಾ ಮಾಡದೇ ಕಡಿಮೆ ಹಣ ಜಮಾ ಮಾಡಿ ರೂ. 70,86,000/- ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.  ನಂತರ 19-12-2025 ರಂದು ಸೇಫ್ ಲಾಕರ್ ಪರಿಶೀಲನೆ ವೇಳೆ ರೂ.55,000/-ಮೌಲ್ಯದ 4.400 ಗ್ರಾಂ ಚಿನ್ನ ವಂಚಿಸಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ವಿಚಾರಣೆ ನಡೆದಂತೆ ಭಯಗೊಂಡ ಸುಬ್ರಹ್ಮಣ್ಯಂ  ಕಳೆದ  17-12-2025 ರಂದು ಯಾರಿಗೂ ತಿಳಿಸದೇ ಎಸ್ಕೇಪ್‌ ಆಗಿದ್ದಾನೆ. ರೂ.71,41,000/-  ಒಟ್ಟು ವಂಚನೆಯ ಮೌಲ್ಯ ಆಗಿದೆ. ಈ ಬಗ್ಗೆ  C.V.S. ಚಂದ್ರಶೇಖರ್ (50), ಶ್ರೀಬ್ಯಾಂಕ್ ಆಫ್ ಬರೋಡಾ ಪ್ರಾದೇಶಿಕ ವ್ಯವಸ್ಥಾಪಕರು ಮಾಹಿತಿ ನೀಡಿದ್ದಾರೆ.  23-12-2025 ನೀಡಿದ ದೂರಿನಂತೆ  ಜೆಪ್ಪು ಮಂಗಳೂರು ರವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 121/2025, ಕಲಂ 314, 316(5), 318(2) BNS-2023 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುಳ್ಯದಲ್ಲಿ ಕೆ.ಎಸ್.ಆ‌ರ್.ಟಿ.ಸಿ ಬಸ್ ಸಮಸ್ಯೆ ಖಂಡಿಸಿ ಎಬಿವಿಪಿ ವಿದ್ಯಾರ್ಥಿಗಳ ಪ್ರತಿಭಟನೆ!

ಸುಳ್ಯ: ಸುಳ್ಯದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬಸ್ ಸಮಸ್ಯೆ ಖಂಡಿಸಿ, ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಬಸ್ ಸಮಸ್ಯೆ ನಿವಾರಣೆ ಆಗದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸೋದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ. ಸಮಯಪಾಲನೆಯಿಲ್ಲದ ಬಸ್ ಸಂಚಾರ, ಬಸ್‌ಗಳ ಕೊರತೆ ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ತೊಂದರೆಗಳನ್ನು ತಕ್ಷಣವೇ ಪರಿಹರಿಸಬೇಕು ಎಂಬುದು ಪ್ರತಿಭಟನೆಯ ಮುಖ್ಯ ಬೇಡಿಕೆಯಾಗಿದ್ದು, ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಜ.3ರಂದು ಪ್ರತಿಭಟನೆ ನಡೆಸಲಾಯಿತು.

ಎಬಿಪಿಪಿ ವಿದ್ಯಾರ್ಥಿಗಳು ಹೇಳೋದೇನು..?

ಈ ವೇಳೆ ಮಾತನಾಡಿದ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮುಳಿಯ ಸಾತ್ವಿಕ್, ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅಡ್ಡಿಯಾಗುತ್ತಿದೆ. ಗ್ರಾಮೀಣ ಭಾಗಗಳಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಿದಾರೆ. ಹೀಗಾಗಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳೊಂದಿಗೆ ನಿಂತಿದೆ. ಬಸ್ ಸಮಸ್ಯೆ ಬಗೆಹರಿಯದಿದ್ದರೆ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಸಿದ್ದಾರೆ.

Uppinangady: Joint manager of bank escapes with ATM money and gold!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 158

You cannot copy content of this page