ಮಂಗಳೂರು : Tulu Times | ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ನ್ಯಾಯವನ್ನು ಕಾಪಾಡುವ ಪ್ರಮುಖ ಹೊಣೆಗಾರಿಕೆ ಪೊಲೀಸ್ ಇಲಾಖೆಯ ಮೇಲಿದೆ. ಅಪರಾಧ, ಅಕ್ರಮ, ಅನ್ಯಾಯಗಳ ವಿರುದ್ಧ ಧೈರ್ಯವಾಗಿ ನಿಲ್ಲುವ ಪೊಲೀಸ್ ಅಧಿಕಾರಿಗಳು ನಿಜಾರ್ಥದಲ್ಲಿ ಸಮಾಜದ ನಿಜವಾದ ರಕ್ಷಕರು. ಅನ್ಯಾಯವನ್ನು ಮಟ್ಟ ಹಾಕುವ ಪೊಲೀಸ್‌ಗಳು ಯಾವುದೇ ಒತ್ತಡ, ಪ್ರಭಾವ ಅಥವಾ ಬೆದರಿಕೆಗಳಿಗೆ ಮಣಿಯದೆ ಕಾನೂನಿನ ಪ್ರಕಾರ ಕಾರ್ಯನಿರ್ವಹಿಸುತ್ತಾರೆ.
ಇಂತಹ ಪೊಲೀಸ್ ಅಧಿಕಾರಿಗಳು ಭ್ರಷ್ಟಾಚಾರ, ಮಾಫಿಯಾ, ಅಕ್ರಮ ಜೂಜು, ಮಾದಕ ವಸ್ತು ಜಾಲ, ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ. ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ದುರ್ಬಲ ವರ್ಗದವರ ರಕ್ಷಣೆಯಲ್ಲಿ ಇವರ ಪಾತ್ರ ಅತ್ಯಂತ ಮಹತ್ವದ್ದು. ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಹೆದರಿರುವವರಿಗೆ ಪೊಲೀಸ್‌ಗಳು ಧೈರ್ಯ ತುಂಬುತ್ತಾರೆ.
ಆದರೆ ಇದೀಗ ಮಂಗಳೂರಿನಲ್ಲಿ ನಡೆದ ಅನ್ಯಾಯಗಳನ್ನು ತಡೆದ ಪೋಲಿಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಪ್ಲಾನ್ ನಡಿತಾ ಇರೋದು ಬೆಳಕಿಗೆ ಬಂದಿದೆ. ಹೌದು… ಸುಧೀರ್ ಕುಮಾರ್ ರೆಡ್ಡಿ ಮತ್ತು ಡಾ. ಅರುಣ್ ಜಿಲ್ಲೆಗೆ ಆಗಮಿಸಿದ ಬಳಿಕ ಅಕ್ರಮ ಚಟುವಟಿಕೆ ನಡೆಸುವವರಿಗೆ ಕಾರ್ಯನಿರ್ವಹಿಸುವುದು ಕಷ್ಟಕರವಾಗಿದ್ದು, ಅದರಿಂದಾಗಿ ಇವರ ವರ್ಗಾವಣೆಗೆ ಬೇರೆಬೇರೆ ತಂತ್ರಗಳನ್ನು ಬಳಸಲಾಗುತ್ತಿದೆ ಎನ್ನಲಾಗಿದೆ.
ಇದಕ್ಕೂ ಮುನ್ನ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಸಂದರ್ಭಗಳಲ್ಲಿ ಧ್ವನಿವರ್ಧಕ (ಲೌಡ್‌ಸ್ಪೀಕರ್) ವಿಚಾರವನ್ನು ಮುಂದಿಟ್ಟುಕೊಂಡು ಅಧಿಕಾರಿಗಳ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು. ಇದೀಗ ಧಾರ್ಮಿಕ ಭಾವನೆ, ಆಚರಣೆ ಮತ್ತು ಸಂಪ್ರದಾಯಗಳ ಹೆಸರಿನಲ್ಲಿ ಅಧಿಕಾರಿಗಳನ್ನು ಗುರಿಯಾಗಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಆಡಳಿತಾರೂಢ ಪಕ್ಷದ ಕೆಲ ನಾಯಕರು ವರ್ಗಾವಣೆಗೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವರು, ಕೆಪಿಸಿಸಿ ಹಿರಿಯ ನಾಯಕರು ಹಾಗೂ ಬೆಂಗಳೂರಿನ ಉನ್ನತ ನಾಯಕತ್ವ ಈ ಹಂತದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಒಪ್ಪಿಲ್ಲ ಎನ್ನಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತಾಲಯವನ್ನು ಒಳಗೊಂಡ ರಾಜ್ಯ ಗೃಹ ಇಲಾಖೆಯ ಪಶ್ಚಿಮ ವಲಯವು ಅತಿ ಸಂವೇದನಾಶೀಲ ಪ್ರದೇಶವೆಂದು ಪರಿಗಣಿಸಲಾಗಿದೆ. ಆದರೆ, ಪ್ರಸ್ತುತ ಇಲ್ಲಿ ಕಾನೂನು–ಸುವ್ಯವಸ್ಥೆ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ. ಈ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ, ಪೊಲೀಸ್ ಮಹಾನಿರ್ದೇಶಕರು ಹಾಗೂ ಇತರ ಹಿರಿಯ ನಾಯಕರು ಮತ್ತು ಅಧಿಕಾರಿಗಳು ಈ ಹೊತ್ತಿಗೆ ಯಾವುದೇ ವರ್ಗಾವಣೆಗಳನ್ನು ಮಾಡದಿರಲು ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Attempt to transfer Mangalore Police Chief and Dakshina Kannada District Police Superintendent! – ತುಳು ಟೈಮ್ಸ್
ಇದನ್ನೂ ಓದಿ :ನಾಯಿಗೆ ಬಲವಂತವಾಗಿ ಮದ್ಯ ಕುಡಿಸಿದ ಯುವಕ : ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
=======
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :https://youtu.be/zt875dd88R8?si=mmKeX2_Bxojx1Fif











