ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕ

Mangaluru: ಅವ್ಯವಹಾರದ ಕೂಪವಾಯಿತೇ ಪಿಳಿಕುಳ ನಿಸರ್ಗಧಾಮ? ಲೋಕಾಯುಕ್ತ ದಾಳಿ

Mangaluru: ಪಿಲಿಕುಳ ನಿಸರ್ಗಧಾಮ ಕಛೇರಿ ಹಾಗೂ ಪಿಳಿಕುಳ ವಿಜ್ಞಾನ ಕೇಂದ್ರದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಗಂಭೀರ ಆರೋಪ ಬಂದ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಟೆಂಡರ್‌ ಪ್ರಕ್ರಿಯೆ, ಆಡಳಿತದಲ್ಲಿ ಲೋಪ, ವೇತನ ತಾರತಮ್ಯ, ಪ್ರಾಣಿಗಳ ಆಹಾರ ಸರಬರಾಜಿನಲ್ಲಿ ಅವ್ಯವಹಾರ ಕಂಡು ಬಂದ ಹಿನ್ನಲೆ ಲೋಕಾಯುಕ್ತ ದಾಳಿ ನಡೆಸಿದೆ.

ಮಂಗಳೂರು ಹೊರಲವಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಕಚೇರಿಗೆ ಲೋಕಾಯುಕ್ತ ಡಿವೈಎಸ್‌ಪಿ ಡಾ. ಗಾನ ಪಿ. ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿದೆ. ಪ್ರಾಧಿಕಾರದ ಕಚೇರಿಯಲ್ಲಿ ಕಡತಗಳನ್ನು ಸುದೀಋಘವಾಗಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ. ಪ್ರಾಧಿಕಾರದ ಆಡಳಿತದಲ್ಲಿ ಹಲವು ಲೋಪದೋಷದ ಆರೋಪ ಕೇಳಿ ಬಂದ ಹಿನ್ನೆಲೆ ದಾಳಿ ನಡೆದಿದೆ. ಸರಕಾರದಿಂದ ಮಂಜೂರಾದ ಅನುದಾನ ದುರುಪಯೋಗ ನಡೆದಿದೆ ಎಂಬ ಆರೋಪವಿದ್ದು, ಆದಾಯ – ವೆಚ್ಚದ ಬಗ್ಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ.

ಟೆಂಡರ್ ಪ್ರಕ್ರಿಯೆಯಲ್ಲಿ ಲೋಪವಲ್ಲದೆ ಮೃಗಾಲಯದ ಪ್ರಾಣಿಗಳ ಆಹಾರ ಸರಬರಾಜಿನಲ್ಲಿ ಅವ್ಯವಹಾರ, ಅಲ್ಲಿನ ಸಿಬ್ಬಂದಿಗಳಿಗೆ ಕಡಿಮೆ ವೇತನ, ಯಾವುದೇ ಆರೋಗ್ಯದ ಸೌಲಭ್ಯವನ್ನು ಒದಗಿಸದೇ ಇರುವುದು ಕಂಡುಬಂದಿದೆ. ಮೃಗಾಲಯದ ನಿರ್ವಹಣೆಯಲ್ಲಿ ಭಾರೀ ಲೋಪದೋಷಗಳ ಬಗ್ಗೆ, ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ಮೇ 23ರಂದು ಕೂಡ ಲೋಕಾಯುಕ್ತ ಅಧಿಕಾರಿಗಳು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಕಚೇರಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಮೃಗಾಲಯದ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಬೇಕೆಂದು ಆದೇಶವಿದ್ದರೂ, ಪ್ರಾಧಿಕಾರ ಈವರೆಗೂ ಹಸ್ತಾಂತರ ಮಾಡದೇ ವಿಳಂಬ ಮಾಡಿದ್ದೂ ಕಂಡುಬಂದಿದೆ.

ಇದನ್ನೂ ಓದಿ: Mangaluru: ಪಾಕ್‌ ಯುದ್ಧದಲ್ಲಿ ಹೆಲಿಕಾಪ್ಟರ್‌ನಿಂದ ಬಿದ್ದು ಬದುಕಿ ಬಂದಿದ್ದ ಮಾಜಿ ಯೋಧ ವಿಧಿವಶ


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 168

You cannot copy content of this page