ಮೈಸೂರು : Tulu Times | ಇತ್ತೀಚೆಗೆ ಬಾಂಬ್ ಬೆದರಿಕೆ ಹೆಚ್ಚಾಗುತ್ತಿರುವ ಹಿನ್ನಲೆ ಎಲ್ಲಾ ಕಡೆ ಕಟ್ಟುನಿಟ್ಟಿನ ತಪಾಸಣೆಗಳನ್ನು ನಡೆಸಲಾಗುತಿತ್ತು. ಆದರೆ ಇಂದು (ಜ.6) ಮೈಸೂರಿನ ಹಳೆ ಕೋರ್ಟ್ ಹಾಗೂ ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಬಂದಿದ್ದು, ತಪಾಸಣೆ ನಡೆಸಲಾಗಿರುವುದು ವರದಿಯಾಗಿದೆ.
ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ;
ನಿಮ್ಮ ಜಿಲ್ಲಾ ನ್ಯಾಯಾಲಯದ ಕ್ರಿಟಿಕಲ್ ಸ್ಥಳಗಳಲ್ಲಿ ಬಾಂಬ್ ಇಟ್ಟಿದ್ದೇವೆ, ಮಧ್ಯಾಹ್ನದ ಊಟದ ಅವಧಿಯಲ್ಲಿ ಸ್ಫೋಟ ಮಾಡುತ್ತೇವೆ ಎಂಬ ಎಚ್ಚರಿಕೆ ನೀಡಲಾಗಿತ್ತು. ಈ ವಿಷಯ ತಿಳಿದ ನ್ಯಾಯವಾದಿಗಳು, ಕಕ್ಷಿದಾರರು, ನೌಕರರು ಮತ್ತು ಸಾರ್ವಜನಿಕರು ಭಯಭೀತರಾಗಿ ಹೊರಬಂದಿದ್ದಾರೆ. ಪೊಲೀಸ್, ಜಿಲ್ಲಾಡಳಿತ ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಸ್ಥಳಕ್ಕೆ ತೆರಳಿ ಕಟ್ಟಡ ಹಾಗೂ ಆವರಣದ ಸಂಪೂರ್ಣ ತಪಾಸಣೆ ನಡೆಸುತ್ತಿದೆ. ಅಲ್ಲದೇ ಬೆಂಗಳೂರಿನ ಲಾಲ್‌ಬಾಗ್ ರಸ್ತೆಯಲ್ಲಿರುವ ಪಾಸ್‌ಪೋರ್ಟ್ ಕಚೇರಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿರುವುದು ಬೆಳಕಿಗೆ ಬಂದಿದೆ.
ಪಾಸ್‌ಪೋರ್ಟ್ ಕಚೇರಿ ಆವರಣದಲ್ಲಿ ತಪಾಸಣೆ ;
ಸಂದೇಶದಲ್ಲಿ ನ್ಯಾಯಾಧೀಶರನ್ನು ಸ್ಥಳಾಂತರಿಸುವಂತೆ ಎಚ್ಚರಿಸಲಾಗಿತ್ತು. ಮಾಹಿತಿ ಸ್ವೀಕರಿಸಿರುವ ನ್ಯಾಯಾಧೀಶರು, ಕಕ್ಷಿದಾರರು, ವಕೀಲರು ತಕ್ಷಣ ಕೋರ್ಟ್ ಆವರಣದಿಂದ ಹೊರಬಂದಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ತಂಡ ತಕ್ಷಣ ಹೋಗಿ ಪರಿಶೀಲನೆ ನಡೆಸಿದೆ. ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೂ ಮಧ್ಯಾಹ್ನ ಇ-ಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಕಿಡಿಗೇಡಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆವೊಡ್ಡಿದ್ದು, ಮಾಹಿತಿ ತಿಳಿದ ವಿಲ್ಸನ್ ಗಾರ್ಡನ್ ಹಾಗೂ ಎಸ್.ಆರ್.ನಗರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳ ಸಿಬ್ಬಂದಿಯಿಂದ ಪಾಸ್‌ಪೋರ್ಟ್ ಕಚೇರಿ ಆವರಣದಲ್ಲಿ ತಪಾಸಣೆ ನಡೆಸಿರುವುದು ವರದಿಯಾಗಿದೆ.
Bomb threat to Mysore’s Old Court: Message received via email – ತುಳು ಟೈಮ್ಸ್
ಇದನ್ನೂ ಓದಿ : ಕಡಬ: ಬಸ್ ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ವೃದ್ಧ ಸಾವು
=======
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ : https://youtu.be/SDL5CAMpIQ0?si=LsSvXVhrSIMoXFUz











