ಬ್ರೇಕಿಂಗ್ ನ್ಯೂಸ್
ಕರ್ನಾಟಕಬೆಳ್ತಂಗಡಿ

ಬೆಳ್ತಂಗಡಿ: ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ: Tulu Times | ಮಹೇಶ್ ಶೆಟ್ಟಿ ತಿಮರೋಡಿ ತನ್ನ ಗಡಿಪಾರು ಆದೇಶ ಪ್ರಕರಣವನ್ನು ರದ್ದು ಕೋರಿ ತಿಮರೋಡಿ  ಇದೀಗ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕೆಲವು ದಿನಗಳ ಹಿಂದೆ, ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ಯ ತಾಲೂಕಿಗೆ 2025 ಡಿ. 17 ರಂದು 10 ತಿಂಗಳ ಕಾಲ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೈಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು. ಇದೀಗ ಈ ಆದೇಶವನ್ನು ಪ್ರಶ್ನಿಸಿ
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಹೈಕೋರ್ಟ್ ಗೆ  ರಿಟ್ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಈ ಗಡಿಪಾರು ಆದೇಶದ ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಗೆ ನ್ಯಾಯಪೀಠದ ಮುಂದೆ  ಬರಬೇಕಾಗಿದೆ. ಅರ್ಜಿ ವಿಚಾರಣೆ ನ್ಯಾ ಸೂರಜ್ ಗೋವಿಂದರಾಜು ಪೀಠದಲ್ಲಿ ನಡೆಯಿತು. ಈ ವೇಳೆ ಗಡಿಪಾರು ಅಗತ್ಯ ಇದ್ದರೆ ಮತ್ತೊಮ್ಮೆ ಹೊಸದಾಗಿ ಕಾನೂನು ಪ್ರಕಾರವಾಗಿ ಆದೇಶ ಮಾಡಲು ಪುತ್ತೂರು ಎಸ್ಪಿಗೆ  ಹೈಕೋರ್ಟ್ ಸೂಚಿಸಿದ್ದರು.

ಸಲ್ಲಿಸಿರುವ ಅರ್ಜಿಯಲ್ಲಿ ರಾಜ್ಯ ಗೃಹ ಇಲಾಖೆಯ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅವರನ್ನು ಪ್ರತಿವಾದಿಗಳಾಗಿದ್ದಾರೆ. ತಿಮರೋಡಿ ಅವರ ಮೇಲೆ ಪ್ರಸ್ತುತ ಸುಮಾರು 32 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಪ್ರಚೋದನಾಕಾರಿ ಭಾಷಣ, ಅಕ್ರಮ ಶಸ್ತ್ರಾಸ್ತ್ರಗಳನ್ನು (Arms Act) ಇರಿಸಿಕೊಂಡ ಆರೋಪ ಮತ್ತು ಸಾರ್ವಜನಿಕ ಶಾಂತಿ ಕದಡಿದ ಆರೋಪಗಳು ಸೇರಿವೆ. ಡಿಸೆಂಬರ್ 2025ರಲ್ಲಿ ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯವು ಇವರ ವಿರುದ್ಧ ಜಾಮೀನು ರಹಿತ ವಾರಂಟ್ (NBW) ಹೊರಡಿಸಿದೆ. ತಮ್ಮ ಮೇಲೆ ಸುಳ್ಳು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಆರೋಪಿಸಿ ಇವರು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ (NHRC) ದೂರು ಕೂಡ ನೀಡಿದ್ದರು.

Belthangady: Timarodi moves High Court seeking quashing of case- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 185

You cannot copy content of this page