ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕಮಂಗಳೂರು

ಕರಾವಳಿ ಪ್ರವಾಸೋದ್ಯಮವನ್ನು ಪರಂಪರೆ ಆಧಾರಿತ ವಿಷನ್‌ ಆಗಿ ರೂಪಿಸಲು ಬ್ರಿಜೇಶ್‌ಚೌಟ ಆಗ್ರಹ!

ಮಂಗಳೂರು: Tulu Times | ಕರಾವಳಿ ಪ್ರವಾಸೋದ್ಯಮವನ್ನು ಜನ ಕೇಂದ್ರೀಕೃತ ಹಾಗೂ ಪರಂಪರೆ ಆಧಾರಿತ ವಿಷನ್‌ರೂಪಿಸಬೇಕೆಂದು ಸಂಸದ ಕ್ಯಾ, ಬ್ರಿಜೇಶ್‌ಚೌಟ ಅವರು ತಿಳಿಸಿದ್ದಾರೆ. ಉಳ್ಳಾಲವನ್ನು ಹೆರಿಟೇಜ್ ವಿಲೇಜ್ ಆಗಿ ಗುರುತಿಸಲು ಸಂಸದ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ಜಿಲ್ಲಾ ಬಿಜೆಪಿ ನೂತನ ಪದಾಧಿಕಾರಿಗಳ ಆಯ್ಕೆ

ಉಳ್ಳಾಲವನ್ನು ಹೆರಿಟೇಜ್ ವಿಲೇಜ್ ಆಗಿಯೂ ಘೋಷಿಸಲು ಚಿಂತನೆ !

ದಕ್ಷಿಣ ಕನ್ನಡವು ದಶಕಗಳಿಂದ ಹಾಗೆಯೇ ಉಳಿದಿಕೊಂಡಿದೆ. ಇಲ್ಲಿನ ಇತಿಹಾಸ-ಪರಂಪರೆ, ಸ್ಥಳೀಯ ಜೀವನೋಪಾಯ ಮತ್ತು ಸುಸ್ಥಿರ ಆರ್ಥಿಕ ಮಾದರಿಗಳಲ್ಲಿ ನೆಲೆಗೊಳ್ಳಬೇಕು. ಪೋರ್ಚ್‌ಗೀಸ್‌ ವಿರುದ್ಧ ಧೀರವಾಗಿ ಹೋರಾಡಿದ್ದ ವೀರವನಿತೆ ರಾಣಿ ಅಬ್ಬಕ್ಕನ ಆಡಳಿತ ಕೇಂದ್ರ ಉಳ್ಳಾಲ. ಇದು ಭಾರತೀಯ ನಾರೀಶಕ್ತಿಯ ಮೊದಲ ಪ್ರತಿರೋಧದ ಗುರುತು. ಇಂಥಹ ಪಾರಂಪರಿಕ ಇತಿಹಾಸದ ಶ್ರೀಮಂತಿಕೆ ಹೊಂದಿರುವ ಉಳ್ಳಾಲದಲ್ಲಿ ಅರಮನೆ, ಸೋಮನಾಥೇಶ್ವರ ದೇವಾಲಯ, ಕೃಷಿ, ಮ್ಯೂಸಿಯಂ ಒಳಗೊಂಡಂತೆ ಒಂದು ಕೇಂದ್ರೀಕೃತ ಪ್ರವಾಸೋದ್ಯಮ ವಲಯ ನಿರ್ಮಾಣ ಮಾಡಬಹುದು. ಹೀಗಾಗಿ, ಉಳ್ಳಾಲವನ್ನು ಕೇವಲ ಒಂದು ಪ್ರವಾಸಿ ತಾಣವಾಗಿ ಮಾತ್ರ ಗುರುತಿಸದೆ ಅದನ್ನು ಒಂದು ಹೆರಿಟೇಜ್ ವಿಲೇಜ್ ಆಗಿಯೂ ಘೋಷಿಸಬೇಕು.  ಎಂದು ಸಂಸದ ಕ್ಯಾ. ಚೌಟ ಹೇಳಿದ್ದಾರೆ.

ಇದನ್ನೂ ಓದಿ: ಪೊಲೀಸ್‌ ಇಲಾಖೆ ವಿರುದ್ಧ ಬಿಜೆಪಿಯಿಂದ ಸಂಘಟಿತ ಹೋರಾಟ: ಡಿ.ವಿ ಸದಾನಂದ ಗೌಡ

ಸ್ಥಳೀಯ ಯುವಕರಿಗೆ ಉದ್ಯೋಗ ನೀಡಲು ಅವಕಾಶ!

ಅಂತಾರಾಷ್ಟ್ರೀಯ ಮಟ್ಟದ ‘ಇಂಡಿಯಾ ಪ್ಯಾಡಲ್ ಫೆಸ್ಟಿವಲ್’ ಅನ್ನು ಯಶಸ್ವಿಯಾಗಿ ಆಯೋಜಿಸಿರುವ ಸಸಿಹಿತ್ತು ಬೀಚ್, ಮೂಲಭೂತ ಸೌಕರ್ಯ ಅಭಿವೃದ್ಧಿಪಡಿಸಿ ಸುರಕ್ಷತಾ ಪ್ರಮಾಣೀಕರಣ ಪಡೆದರೆ ಇಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗ ನೀಡಲು ವಿಪುಲ ಅವಕಾಶಗಳಿವೆ ಎಂದರು. ಸಸಿಹಿತ್ತು ಬೀಚ್ ಅನ್ನು  ಬೀಚಿಂಗ್ ತಾಣವನ್ನು ಸರ್ಫಿಂಗ್ ಮತ್ತು ಪ್ಯಾಡ್ಡಿಂಗ್‌ನಂತಹ ಸಾಹಸ ಕ್ರೀಡೆಗಳ ಜಾಗತಿಕ ಕೇಂದ್ರವನ್ನಾಗಿ ಮಾಡುವ ಅಗತ್ಯವಿದೆ ಎಂದರು. ಇದೇ ವೇಳೆ, ಈ ಯೋಜನೆಗಳ ಸಮಯೋಚಿತ ಅನುಷ್ಠಾನಕ್ಕಾಗಿ ಒಬ್ಬ ನೋಡಲ್‌ ಅಧಿಕಾರಿಯನ್ನು ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊಲ್ಹಾಪುರಿ ನಂತರ ಮತ್ತೆ ‘ದೇಶಿ’ ಪ್ರೇರಣೆಗೆ ತಿರುಗಿದ ಪ್ರದಾ‌ ! ಏಲಕ್ಕಿ ಚಹಾ ಪರಿಮಳದ ಬೆಲೆ ಎಷ್ಟು ಗೊತ್ತಾ?

Brijesh Chowta calls for coastal tourism to be shaped into a heritage-based vision!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 171

You cannot copy content of this page