ಬೆಳ್ತಂಗಡಿ: Tulu Times |ಅಕ್ರಮವಾಗಿ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: Bangalore : ಈ ಬೇಸಿಗೆಯಲ್ಲಿ ವಿದ್ಯುತ್ ಬೇಡಿಕೆ ಏರಿಕೆ: ತಡೆರಹಿತ ಪೂರೈಕೆಗೆ ಬೆಂಗಳೂರು ಸಿದ್ಧತೆ
ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ
ಸರಕಾರಕ್ಕೆ ಯಾವುದೇ ಹಣ ಕಟ್ಟದೆ ನದಿಯ ಕಿನಾರೆಯಿಂದ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಲಾಗಿದೆ. ಜ.8 ರಂದು ಬೆಳಗ್ಗೆ 7 ಗಂಟೆಗೆ ಸಿಬ್ಬಂದಿ ಜೊತೆ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಂ ರೌಂಡ್ ಕರ್ತವ್ಯದಲ್ಲಿರುವಾಗ ಮಾಹಿತಿದಾರರಿಂದ ಸಿಕ್ಕ ಖಚಿತ ಮಾಹಿತಿ ಮೇರೆಗೆ ಕಡಿರುದ್ಯಾವರ ಗ್ರಾಮದ ಗಂಡಿಬಾಗಿಲಿನಲ್ಲಿ ದಾಳಿ ಮಾಡಿದಾಗ ನೇತ್ರಾವತಿ ನದಿ ಕಿನಾರೆಯಿಂದ ಮರಳು ಕಳ್ಳತನ ಮಾಡಿ ಹಿಟಾಚಿ ಮೂಲಕ ಟಿಪ್ಪರ್ ಲಾರಿಗೆ ತುಂಬಿಸಿ ಮಾರಾಟ ಮಾಡುತ್ತಿರುವುದು ತಿಳಿದುಬಂದಿದೆ.
ಟಿಪ್ಪರ್ ಚಾಲಕ ಸ್ಥಳದಿಂದ ಲಾರಿ ಬಿಟ್ಟು ಪರಾರಿ!
ಇನ್ನು ಪೊಲೀಸರು ದಾಳಿ ನಡೆಸಿದ ತಕ್ಷಣ ಟಿಪ್ಪರ್ ಚಾಲಕ ಸ್ಥಳದಿಂದ ಲಾರಿ ಬಿಟ್ಟು ಪರಾರಿಯಾಗಿದ್ದಾನೆ, ಹಿಟಾಚಿ ಅಪರೇಟರ್ ನನ್ನು ವಿಚಾರಿಸಿದಾಗ ತನ್ನ ಹೆಸರು ಚಾರ್ಮಡಿಯ ಮಹಮ್ಮದ್ ಶಮೀರುದ್ದಿನ್ ಎಂಬುದಾಗಿ ಹೇಳಿದ್ದಾನೆ. ಓಡಿ ಹೋದ ಟಿಪ್ಪರ್ ಚಾಲಕ ನ ಹೆಸರು ಚಾರ್ಮಾಡಿಯ ಹೆಚ್.ಹನೀಫ್ ಎಂಬುದಾಗಿ ಹೇಳಿದ್ದಾನೆ. ಅಕ್ರಮವಾಗಿ ಮರಳು ತುಂಬಿದ್ದ 3,50,000 ಮೌಲ್ಯದ ಟಿಪ್ಪರ್ KA-41-C-0057 ಮತ್ತು 2,50,000 ಮೌಲ್ಯದ DOOSAN HITACHI- 150 ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳಾದ ಕಕ್ಕುಂಜೆ ಗ್ರಾಮದ ಚಾರ್ಮಾಡಿ ನಿವಾಸಿಗಳಾದ ಮಹಮ್ಮದ್ ಶಮೀರುದ್ದೀನ್ ಮತ್ತು ಹೆಚ್.ಹನೀಫ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 2023(u/s303(2),3,(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ.ಸಿ.ಕೆ ಮಾರ್ಗದರ್ಶನದಲ್ಲಿ ದಾಳಿ ಕಾರ್ಯಾಚರಣೆ ನಡೆಸಲಾಗಿದೆ.
ಬಂಟ್ವಾಳ: ಶಬರಿಮಲೆ ವೃತದಾರಿಗೆ ಲಾರಿ ಡಿಕ್ಕಿಯಾಗಿ ಬಾಲಕ ಸಾವು
ಬಂಟ್ವಾಳ: ಪ್ರತ್ಯೇಕ ಪ್ರಕರಣದಲ್ಲಿ, ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಬಳಿಯಲ್ಲಿ ಲಾರಿ ಢಿಕ್ಕಿಯಾಗಿ ಶಬರಿಮಲೆ ಯಾತ್ರೆ ಕೈಗೊಂಡ ಬಂಟ್ವಾಳದ ಬಾಲಕನೋರ್ವ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ದೇವರ ದರ್ಶನ ಮುಗಿಸಿ ವಾಪಸು ಮನೆಗೆ ಬರುವ ವೇಳೆ ಈ ಘಟನೆ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ. ಲಕ್ಷ್ಮೀಶ ಪೂಜಾರಿ( 15) ಎಂಬಾತ ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ.
ಹಿಂಬದಿಯಿಂದ ಬಂದು ಗುದ್ದಿದ ಲಾರಿ!
ಸಿದ್ದಕಟ್ಟೆಯ ಶಾಲೆಯ 9 ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ಲಕ್ಷ್ಮೀಶ ಪೂಜಾರಿ, ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಸಂತೋಷ್ ಪೂಜಾರಿ, ಸಚಿನ್, ಗೋಪಾಲಪೂಜಾರಿ, ಲಕ್ಷ್ಮೀಶ ಪೂಜಾರಿ, ಕಿರಣ್, ವರದ್ ರಾಜ್ ಜೊತೆಗೂಡಿ ಇನ್ನೋವಾ ಕಾರಿನಲ್ಲಿ ಶಬರಿಮಲೆಗೆ ತೆರಳಿದ್ದರು. ಜ.7 ರಂದು ಒಟ್ಟು 7 ಮಂದಿ ಕುರಿಯಾಳದಿಂದ ದೇವರ ದರ್ಶನ ಮುಗಿಸಿ ಬರುತ್ತಿದ್ದ ವೇಳೆ ಕೊಟೆಕಲ್ ಎಂಬಲ್ಲಿ ಕಾರು ಕೆಟ್ಟುಹೋಗಿದೆ. ಎಂದು ಅಶೋಕ್ ಪೂಜಾರಿ ಒಬ್ಬರು ಕಾರಿನೊಳಗೆ ಕುಳಿತು ಕೊಂಡು ಉಳಿದಂತೆ ಚಾಲಕ ಸೇರಿ ಏಳು ಮಂದಿ ಕೂಡ ಕಾರಿನ ಎದುರು ಬೊನೆಟ್ ಓಪನ್ ಮಾಡಿ ಕಾರು ರಿಪೇರಿಯಲ್ಲಿ ತೊಡಗಿದ್ದರು. ಈ ವೇಳೆ ಯಮಸ್ವರೂಪಿ ಲಾರಿಯೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
Belthangady: Raid on illegal sand mining- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











