ಬೆಂಗಳೂರು: Tulu Times | ಕರ್ನಾಟಕವನ್ನು ಗೂಂಡಾ ರಾಜ್ಯದಿಂದ ಕಾಪಾಡಿ ಎಂದು ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾಗಿ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಅವರು ತಿಳಿಸಿದರು.
ಲೋಕಭವನದ ಬಳಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಬಿಜೆಪಿ ನಿಯೋಗವು ಇಂದು ಮಾನ್ಯ ರಾಜ್ಯಪಾಲರನ್ನು ಭೇಟಿ ಮಾಡಿತು. ದ್ವೇಷ ಭಾಷಣ ಮಸೂದೆ ವಿರೋಧಿಸಿ ಮನವಿ ನೀಡಲಾಗಿದೆ ಎಂದರು. ಇದಕ್ಕೆ ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ನೀಡಿಲ್ಲ ಎಂದು ಆಕ್ಷೇಪಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಸಂಸದ ಪಿ.ಸಿ. ಮೋಹನ್, ಶಾಸಕ ಎಸ್.ಆರ್. ವಿಶ್ವನಾಥ್, ಎಸ್. ಮುನಿರಾಜು, ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಭಾರತಿ ಶೆಟ್ಟಿ, ಕೇಶವ ಪ್ರಸಾದ್, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಮಾಳವಿಕಾ ಅವಿನಾಶ್, ರಾಜ್ಯ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್, ರಾಜ್ಯ ವಕ್ತಾರ ಪ್ರಕಾಶ್ ಶೇಷರಾಘವಾಚಾರ್, ನಿವೃತ್ತ ಐ.ಪಿ.ಎಸ್. ಅಧಿಕಾರಿ ಭಾಸ್ಕರ್ ರಾವ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪ್ರಮುಖರು ಈ ಸಂದರ್ಭದಲ್ಲಿ ಇದ್ದರು.
ಬೆಂಗಳೂರಿನ ದಿಟ್ಟ ಮಹಿಳಾ ಸೇನಾಧಿಕಾರಿಗೆ ಒಲಿದ ಐಕ್ಯರಾಷ್ಟ್ರಗಳ ಮಹಾಸಚಿವರ ಪ್ರಶಸ್ತಿ
ಬೆಂಗಳೂರು: ದಕ್ಷಿಣ ಸುಡಾನ್‌ನಲ್ಲಿನ ಐಕ್ಯರಾಷ್ಟ್ರಗಳ ಶಾಂತಿರಕ್ಷಣಾ ಮಿಷನ್ (UNMISS)ನಲ್ಲಿ ಸೇವೆ ಸಲ್ಲಿಸುತ್ತಿರುವ ಬೆಂಗಳೂರಿನ 31 ವರ್ಷದ ಸೇನಾ ಅಧಿಕಾರಿ ಮೇಜರ್ ಸ್ವಾತಿ ಶಾಂತಾ ಕುಮಾರ್ ಅವರಿಗೆ “Equal Partners, Lasting Peace ಎಂಬ ಯೋಜನೆಗಾಗಿ ‘ಐಕ್ಯರಾಷ್ಟ್ರಗಳ ಮಹಾಸಚಿವರ ಪ್ರಶಸ್ತಿ-2025’ ನೀಡಲಾಯಿತು.
5,000 ಮಹಿಳೆಯರಿಗೆ ಸುರಕ್ಷಿತ ವಾತಾವರಣ!
ಭಾನುವಾರ ಐಕ್ಯರಾಷ್ಟ್ರಗಳ ಮಹಾಸಚಿವ ಆಂಟೋನಿಯೊ ಗುಟೆರಸ್ ಈ ಪ್ರಶಸ್ತಿಯನ್ನು ಘೋಷಿಸಿದ್ದು, ದಕ್ಷಿಣ ಸುಡಾನ್‌ನ ಸಂಘರ್ಷಪೀಡಿತ ಪ್ರದೇಶಗಳಲ್ಲಿ ಸುಮಾರು 5,000 ಮಹಿಳೆಯರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿ, ಅವರು ಮುಕ್ತವಾಗಿ ಸಂಚರಿಸಲು ಹಾಗೂ ಸ್ಥಳೀಯ ಶಾಂತಿ ಸಂವಾದಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುವಂತೆ ಮಾಡಿದ ಮೇಜರ್ ಸ್ವಾತಿಯ ತಂತ್ರಾತ್ಮಕ ಕಾರ್ಯಾಚರಣೆಗಳನ್ನು ಈ ಪ್ರಶಸ್ತಿ ಗೌರವಿಸುತ್ತದೆ. ಮೇಜರ್ ಸ್ವಾತಿ ಅವರು ಭಾರತೀಯ ಎಂಗೇಜ್‌ಮೆಂಟ್ ತಂಡದ ನೇತೃತ್ವ ವಹಿಸಿಕೊಂಡಿದ್ದು, ಗ್ರಾಮೀಣ ಮಟ್ಟದಲ್ಲಿ ಭದ್ರತೆಯನ್ನು ಬಲಪಡಿಸುವುದರ ಜೊತೆಗೆ ಸ್ಥಳೀಯ ಸಮುದಾಯಗಳಲ್ಲಿ ವಿಶ್ವಾಸ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಅವರ ಯೋಜನೆ ಐಕ್ಯರಾಷ್ಟ್ರಗಳ ವಿವಿಧ ಶಾಂತಿರಕ್ಷಣಾ ಮಿಷನ್‌ಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳ ನಡುವೆ ನಡೆದ ಕಠಿಣ ಸ್ಪರ್ಧಾತ್ಮಕ ಮತದಾನದ ಬಳಿಕ ‘ಲಿಂಗ ಸಮಾನತೆ ವಿಭಾಗ’ದಲ್ಲಿ ಯಶಸ್ವಿಯಾಗಿ ಹೊರಹೊಮ್ಮಿದೆ.
BJP appeals to Governor with various demands- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











