ಬ್ರೇಕಿಂಗ್ ನ್ಯೂಸ್
ಕರ್ನಾಟಕ

Manthra Mangalya: ಹಿಂದೂ ಯುವಕನನ್ನು ವರಿಸಿದ ಗಾಯಕಿ ಸುಹಾನಾ ಸೈಯದ್!

Zee Kannada ಸರಿಗಮಪ ಶೋ ಖ್ಯಾತಿಯ ಗಾಯಕಿ ಸುಹಾನಾ ಸಯ್ಯದ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರು ಬಹುಕಾಲದ ಗೆಳೆಯ ನಿತಿನ್ ಜೊತೆ ಮಂತ್ರ ಮಾಂಗಲ್ಯದ ಮೂಲಕ ವಿವಾಹವಾಗಿದ್ದಾರೆ.

16 ವರ್ಷಗಳಿಂದ ಜೊತೆಗಿದ್ದ ಗೆಳೆಯ ನಿತಿನ್ ಜೊತೆ ಸುಹಾನಾ ಸಯ್ಯದ್ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದು ವಿಶೇಷ. ಸುಹಾನಾ ಪತಿ ನಿತಿನ್ ಕೂಡ ರಂಗಭೂಮಿ ಕಲಾವಿದರಾಗಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆ ಖಾಸಗಿ ರೆಸಾರ್ಟ್‌ನಲ್ಲಿ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಇಬ್ಬರು ಸರಳವಾಗಿ ಮದುವೆಯಾಗಿದ್ದಾರೆ.

ಶಿವಮೊಗ್ಗದ ಸಾಗರದ ಸುಹಾನಾ ಅವರು ಈ ಹಿಂದೆಯೆ ಸಾಮಾಜಿಕ ಮಾಧ್ಯಮದಲ್ಲಿ ನಿತಿನ್ ಶಿವಾಂಶ್‌ ಜೊತೆಗೆ ಕ್ಲಿಕ್ಕಿಸಿಕೊಂಡಿದ್ದ ಫೋಟೊವನ್ನು ಹಂಚಿಕೊಂಡಿದ್ದರು. ಅದರ ಜೊತೆಗೆ ‘ಪ್ರತಿ ಜೀವಿಯ ಅನ್ವೇಷಣೆ ಪ್ರೇಮಕ್ಕಾಗಿಯೇ. ಪ್ರತಿ ಜೀವಿಯ ನಿರೀಕ್ಷೆ ಪ್ರೇಮಕ್ಕಾಗಿಯೇ, ಪ್ರೇಮಕ್ಕೆ ಕಾರಣ ಇಲ್ಲ. ಈ ಪ್ರೇಮ ಅನಂತ ದೂರದ ಸುಧೀರ್ಘ ಪ್ರಯಾಣ. ಪ್ರೇಮಕ್ಕೆ ಯಾವ ಮಿತಿ ಇಲ್ಲ ಎಂಬುದಕ್ಕೆ ನಾವೇ ಸಾಕ್ಷಿ. ಪ್ರತಿ ಜೀವಿಯ ಅನ್ವೇಷಣೆ ಪ್ರೇಮಕ್ಕಾಗಿಯೇ ಹೃದಯಗಳ ಭಾಷೆ ಎಲ್ಲವನ್ನೂ ಮೀರಿದ್ದು. ಪ್ರತಿ ಸವಾಲು, ಪ್ರತಿ ಸಂಶಯ ಮತ್ತು ಪ್ರತಿ ಭಯದ ಮೌನದಲ್ಲಿಯೂ ನಮ್ಮನ್ನು ಹಿಡಿದಿಟ್ಟಿದ್ದು ಪ್ರೀತಿ. ಇಂದು, ನಮ್ಮ ಗುಟ್ಟನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ ನಿಮ್ಮ ಆಶೀರ್ವಾದವಿರಲಿ’ ಎಂದು ಬರೆದುಕೊಂಡಿದ್ದರು

ಸುಹಾನಾ ಸಯ್ಯದ್‌ ಅವರು ಝೀ ಕನ್ನಡ ‘ಸರಿಗಮಪ’ ಶೋಗೆ ತೆರಳಿ ಮಿಂಚಿದ್ದರು. ಆ ಬಳಿಕ ‘ಶ್ರೀಕೃಷ್ಣನೇ ಶ್ರೀನಿವಾಸನೇ’ ಭಜನೆ ಹೇಳಿದ್ದರಿಂದ ಅವರು ಸಾಕಷ್ಟು ಟೀಕೆಗಳನ್ನು ಎದುರಿಸಿದರು. ಮುಸ್ಲಿಂ ಧರ್ಮದ ಅನೇಕರು ಅವರ ಈ ಕೆಲಸವನ್ನು ಖಂಡಿಸಿದ್ದರು.

ಹಿಜಾಬ್ ಧರಿಸಿ ಭಜನೆ ಹಾಡುವ ಸುಹಾನಾಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೀಗ ಎಲ್ಲಾ ಅಡೆತಡೆಗಳನ್ನು ದಾಟಿ ಬಹುವರ್ಷಗಳಿಂದ ಪ್ರೀತಿಸುತ್ತಿರುವ ಅಂತರ್ ಧರ್ಮದ ಹುಡುಗನ ಜೊತೆ ಮದುವೆಯಾಗಿದ್ದಾರೆ.

ಇದನ್ನೂ ಓದಿ: Deepavali bonus:ಚಾಕಲೇಟ್ ಕಂಪನಿ ಕಾರ್ಮಿಕರ ಬೋನಸ್ ಗುಳುಂ ಅಂತೆ ಹೌದಾ?


ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page