ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಉಡುಪಿ: ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ನಾಪತ್ತೆ

ಉಡುಪಿ: Tulu Times | ಉಡುಪಿ ತಾಲೂಕು 76 ಬಡಗುವೆಟ್ಟು ಗ್ರಾಮದ ಕುಕ್ಕಿಕಟ್ಟೆಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ದರ್ಶನ್ ಎಸ್ (23) ನಾಪತ್ತೆಯಾಗಿರುವ ಘಟನೆ ನಡೆದಿದೆ.

ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಒಂದನೇ ಮಹಡಿಯಲ್ಲಿ ವಾಸವಿದ್ದ ಚಿತ್ರದುರ್ಗ ಮೂಲದ ದರ್ಶನ್ ಎಸ್ ನಾಪತ್ತೆಯಾಗಿದ್ದಾರೆ.

ಜನವರಿ 12 ರಂದು ರಾತ್ರಿ 8 ಬಳಿಕ ದರ್ಶನ್ ನಾಪತ್ತೆಯಾಗಿದ್ದಾರೆ. ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. 5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆ,ಕಪ್ಪು ಮೈಬಣ್ಣ ಹೊಂದಿದ್ದಾರೆ. ಇವರ ಬಗ್ಗೆ, ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 9480805408 ಹಾಗೂ ಪೊಲೀಸ್ ಉಪನಿರೀಕ್ಷಕರು ದೂ.ಸಂಖ್ಯೆ: 9480805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ತಿಳಿಸಿದೆ.

ಇದನ್ನೂ ಓದಿ: ಬಾಡಿ ಶೇಮಿಂಗ್ ಬಗ್ಗೆ ನಟಿ ರಚಿತಾ ಬೋಲ್ಡ್ ಟಾಕ್

ಮುಖ್ಯಮಂತ್ರಿಗಳು ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ ಸಿಬಿಐಗೆ ಕೊಡಲು ಹಿಂದೇಟೇಕೆ?: ಜನಾರ್ಧನ ರೆಡ್ಡಿ

ಬೆಂಗಳೂರು: ಸಿದ್ದರಾಮಯ್ಯನವರು ಪ್ರಾಮಾಣಿಕರೆಂದು ಬಿಂಬಿಸಲು, ಈ ರಾಜ್ಯದ ಸಿಎಂ ಆಗಿ ಕಾನೂನು ರಕ್ಷಿಸಲು ನಾನು ನಿಜವಾಗಿಯೂ ಕಂಕಣಬದ್ಧವಾಗಿ ಇದ್ದೇನೆ ಎಂದು ತೋರಿಸಲು 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟವರು. ಅಂಥ ಮಹಾನುಭಾವ, ಬಳ್ಳಾರಿಯ ಪ್ರಕರಣವನ್ನು ಸಿಬಿಐಗೆ ಕೊಡಲು ಯಾಕೆ ಹಿಂದೇಟು ಹಾಕುತ್ತಾರೆ ಎಂದು ಶಾಸಕ ಜಿ. ಜನಾರ್ಧನ ರೆಡ್ಡಿ ಅವರು ಸವಾಲು ಹಾಕಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಇರುವ ಸಂದರ್ಭದಲ್ಲಿ ಸುಮಾರು 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ಬಿಜೆಪಿಯವರು ಒಂದು ಕೇಸನ್ನಾದರೂ ಸಿಬಿಐಗೆ ಕೊಟ್ಟಿದ್ದಾರಾ ಎಂದು ಮುಖ್ಯಮಂತ್ರಿಗಳು ಕೇಳಿದ್ದಾರೆ. ಯಡಿಯೂರಪ್ಪ ಅವರ ಸರಕಾರದ ಅವಧಿಯಲ್ಲಿ ಎಷ್ಟು ಸಿಬಿಐಗೆ ಕೊಟ್ಟಿದ್ದಾರೆ, ಸಿದ್ದರಾಮಯ್ಯರ ಅವಧಿಯಲ್ಲಿ ಎಷ್ಟು ಸಿಬಿಐಗೆ ವಹಿಸಿದ್ದಾರೆ ಎಂಬ ಪ್ರಶ್ನೆ ಮುಖ್ಯವಲ್ಲ ಎಂದು ನುಡಿದರು.

ನಿಮ್ಮ ಶಾಸಕನೇ ಕೊಲೆ ಮಾಡಿಸಿದ್ದೆಂದು ನಿಮಗೆ ಈಗಾಗಲೇ ಗೊತ್ತಾಗಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ ಮುಜುಗರ ಆಗಿದೆ. ಕೇವಲ ಮೂವರು ಖಾಸಗಿ ಗನ್‍ಮೆನ್‍ಗಳನ್ನು ಬಂಧಿಸಿ, ಸಿಐಡಿಗೆ ಕೊಡುವ ಮೂಲಕ ಇದನ್ನು ಜನರು ಮರೆಯುವಂತೆ ಮಾಡಬೇಕು. ಶಾಸಕರ ಬಂಧನ ಮಾಡಬಾರದೆಂಬ ನಿಮ್ಮ ಕೆಟ್ಟ ಯೋಚನೆ ಇದರಿಂದ ಬಹಿರಂಗ ಆಗುತ್ತಿದೆ ಎಂದು ಆರೋಪಿಸಿದರು. 7 ಪ್ರಕರಣಗಳನ್ನು ಸಿಬಿಐಗೆ ಕೊಟ್ಟಿದ್ದೇನೆ ಎಂದು ಎದೆ ತಟ್ಟಿಕೊಳ್ಳುವ ಸಿದ್ದರಾಮಯ್ಯನವರು, ಈ ಪ್ರಕರಣವನ್ನೂ ಸಿಬಿಐಗೆ ಕೊಡಲು ಯಾಕೆ ಹಿಂದೇಟು ಹಾಕುತ್ತಿದ್ದಾರೆಂದು ರಾಜ್ಯದ ಜನರಿಗೆ ತಿಳಿಸಬೇಕಾಗಿದೆ ಎಂದು ಆಗ್ರಹಿಸಿದರು. ಅದನ್ನು ಬಿಟ್ಟು ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.

‘ಬಳ್ಳಾರಿ ವಿಚಾರದಲ್ಲಿ ಕ್ರಿಮಿನಲ್ ಶಾಸಕ ನಾ.ರಾ. ಭರತ್ ರೆಡ್ಡಿ, ಐದಾರು ಸಾವಿರ ಜನರ ಜೊತೆಗೆ ನಮ್ಮ ಮನೆಗೆ ಬಂದು ಪೆಟ್ರೋಲ್ ಬಾಂಬ್ ಎಸೆದು, ಗನ್ ಫೈರಿಂಗ್ ಮಾಡುವ ಮೂಲಕ ಒಬ್ಬ ಅಮಾಯಕ ಮೃತಪಟ್ಟಿದ್ದಾರೆ ಎಂದು ಗಮನ ಸೆಳೆದರು. ಇದು ನನ್ನ ಮೇಲಿನ ಕೊಲೆ ಯತ್ನ’ ಎಂದು ತಿಳಿಸಿದರು. ಬಳ್ಳಾರಿ ಪ್ರಕರಣದ ಸಿಬಿಐ ತನಿಖೆಗೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ ನಿರ್ಣಯ ಮೂಲಕ ಒತ್ತಾಯಿಸಿದೆ. ಬಳ್ಳಾರಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನಾವು ಸಿಬಿಐ ತನಿಖೆಗೆ ಆಗ್ರಹಿಸಿದ್ದೇವೆ ಎಂದು ವಿವರಿಸಿದರು.

Udupi: Warden of boys’ hostel goes missing- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess‌

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 155

You cannot copy content of this page