ಮೂಡಬಿದಿರೆ:Tulu Times | ನಾಗರಕಟ್ಟೆಯ ರಿಂಗ್ ರೋಡ್ ಬಳಿ ಹೊಟೇಲ್ ವ್ಯವಹಾರ ಪ್ರಾರಂಭಿಸಲು ಯೋಜಿಸಿದ್ದ ಮೂಡಬಿದಿರೆಯ ದೀಕ್ಷಿತ್ (35) ಎಂಬ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹೊಟೇಲ್ ಆರಂಭಿಸುವ ಸಿದ್ಧತೆಯಲ್ಲಿದ್ದ ಯುವಕನಿಗೆ ಏನಾಯ್ತು..?
ಸಾಕಷ್ಟು ಜನ ಯುವಕರು ಹೊಟೇಲ್ ಶುರು ಮಾಡಬೇಕು ಎಂದು ಕನಸು ಕಂಡಿರುತ್ತಾರೆ. ಅಂತಹದ್ದೇ ಕನಸು ಹೊತ್ತು ಸಾಗುತಿದ್ದ ಮೂಡಬಿದಿರೆಯ ನಾಗರಕಟ್ಟೆ-ಬಂಟಿಕಟ್ಟೆ ಕ್ರಾಸ್ ರಸ್ತೆ ಬಳಿ ಕಬ್ಬಿನ ಹಾಲಿನ ಅಂಗಡಿ ನಡೆಸುತ್ತಿರುವ ಶ್ರೀನಿವಾಸ್ ಎಂಬುವವರ ಪುತ್ರ ದೀಕ್ಷಿತ್ (35) ಮಾನಸಿಕವಾಗಿ ನೊಂದು ನೇಣಿಗೆ ಕೊರಳು ಒಡ್ಡಿದ್ದಾರೆ.
ಈತ ಮೊದಲು ದುಬೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎನ್ನಲಾಗಿದ್ದು, ಕೆಲವು ಸಮಯಗಳ ಹಿಂದೆ ದುಬೈನಿಂದ ಹಿಂದಿರುಗಿ ಬಂದಿದ್ದಾರೆ. ನಂತರ ದೀಕ್ಷಿತ್, ನಾಗರಕಟ್ಟೆಯ ರಿಂಗ್ ರೋಡ್ ಬಳಿ ಹೊಟೇಲ್ ವ್ಯವಹಾರ ಪ್ರಾರಂಭಿಸಲು ಯೋಚನೆ ಮಾಡಿದ್ದಾರೆ. ಹೊಟೇಲ್ ಉದ್ಯಮ ಶುರು ಮಾಡಿದ್ದಾರೆ ಎಂದು ಕನಸು ಕಂಡು, ಅದಕ್ಕೆ ಬೇಕಾದಂತಹ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದರು.
ಇವರ ತಾಯಿ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ, ಈ ಸಂದರ್ಭದಲ್ಲಿ ದೀಕ್ಷಿತ್ ಮನೆಯ ಕೋಣೆಯೊಂದರ ಕಿಟಕಿ ಸರಳಿಗೆ ಶಾಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮೂಡಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಉಡುಪಿ: ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ನಾಪತ್ತೆ
ಉಡುಪಿ: ಪ್ರತ್ಯೇಕ ಪ್ರಕರಣದಲ್ಲಿ, ಉಡುಪಿ ತಾಲೂಕು 76 ಬಡಗುವೆಟ್ಟು ಗ್ರಾಮದ ಕುಕ್ಕಿಕಟ್ಟೆಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ದರ್ಶನ್ ಎಸ್ (23) ನಾಪತ್ತೆಯಾಗಿರುವ ಘಟನೆ ನಡೆದಿದೆ. ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಒಂದನೇ ಮಹಡಿಯಲ್ಲಿ ವಾಸವಿದ್ದ ಚಿತ್ರಮರ್ಗ ಮೂಲದ ದರ್ಶನ್ ಎಸ್ ನಾಪತ್ತೆಯಾಗಿದ್ದಾರೆ.
ಜನವರಿ 12 ರಂದು ರಾತ್ರಿ 8 ಬಳಿಕ ದರ್ಶನ್ ನಾಪತ್ತೆಯಾಗಿದ್ದಾರೆ. ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. 5 ಆಡಿ 5 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ 9480805408 ಹಾಗೂ ಪೊಲೀಸ್ ಉಪನಿರೀಕ್ಷಕರು ದೂ.ಸಂಖ್ಯೆ: 9480805445 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗದ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ತಿಳಿಸಿದೆ.
Moodbidri: A young man who wanted to start a hotel business committed suicide!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











