ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

ರಾಸಲೀಲೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್ !

ಕರ್ನಾಟಕ: Tulu Times | ರಾಸಲೀಲೆ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಅಮಾನತು ಗೊಳಿಸಲಾಗಿದೆ.

ಡಿಜಿಪಿ ರಾಮಚಂದ್ರರಾವ್ ಅವರ ರಾಸಲೀಲೆ ವಿಡಿಯೋ ಭಾರಿ ವೈರಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಕಾನೂನುಗಿಂತ ಯಾರು ದೊಡ್ಡವರಲ್ಲ ರಾಮಚಂದ್ರರಾವ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು. ಇದೀಗ ರಾಮಚಂದ್ರರಾವ್ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಮವಸ್ತ್ರಕ್ಕೆ ಕಳಂಕ ತಂದ್ರಾ ಹಿರಿಯ ಐಪಿಎಸ್ ಅಧಿಕಾರಿ?

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರ ವಿವಾದಾತ್ಮಕ ವಿಡಿಯೋ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇಮಹಿಳೆಯೊಬ್ಬರ ಜೊತೆ ಸರಸವಾಡುತ್ತಿದ್ದ ವೀಡಿಯೋ ಸರ್ಕಾರಕ್ಕೆ ಮುಜುಗರ ತಂದಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂತಹ ಅಸಹ್ಯ ನಡವಳಿಕೆ ತೋರಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನು ಈ ಹಿಂದೆ ‘ರನ್ಯಾರಾವ್ ಚಿನ್ನದ ಕಳ್ಳಸಾಗಣೆ’ ವಿಚಾರದಲ್ಲಿಯೂ ರಾಮಚಂದ್ರರಾವ್ ಹೆಸರು ಕೇಳಿಬಂದಿತ್ತು. ಈಗ ಕಚೇರಿಯ ಒಳಗಿನ ರಾಸಲೀಲೆ ವಿಡಿಯೋ ವೈರಲ್ ಆಗಿರುವುದು ಸರ್ಕಾರಕ್ಕೆ ಹೆಚ್ಚಿನ ಹಾನಿಯಾಗಿದೆ. ಸಿಎಂ ಗೃಹ ಇಲಾಖೆಗೆ ಪ್ರಾಥಮಿಕ ತನಿಖೆ ನಡೆಸಿ ಕೂಡಲೇ ವರದಿ ಸಲ್ಲಿಸಿ ಎಂದು ವರದಿ ಸಲ್ಲಿಸಿದ್ದಾರೆ. ಅನಂತರ ರಾಮಚಂದ್ರರಾವ್ ಅವರನ್ನು ಅಮಾನತು ಮಾಡುವ ಅಥವಾ ಶಿಸ್ತುಕ್ರಮ ಕೈಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಡಿಜಿಪಿ ಹುದ್ದೆಯ ಐಪಿಎಸ್ ಅಧಿಕಾರಿ ವಿರುದ್ಧ ಅಶ್ಲೀಲ ವೀಡಿಯೋ ಆರೋಪ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರೀ ವಿವಾದ ನಡೆಯುತ್ತಿದೆ. ಈ ವೀಡಿಯೊಗಳು ಹಲವು ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ ಎಂದು ಹೇಳಲಾಗಿದ್ದು, ಪೊಲೀಸ್ ಯೂನಿಫಾರ್ಮ್ ಧರಿಸಿರುವ ಸ್ಥಿತಿಯಲ್ಲೇ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ದೃಶ್ಯಗಳು ಹೊರಬಿದ್ದಿವೆ. ಈ ಬೆಳವಣಿಗೆ ಸಾರ್ವಜನಿಕರು, ರಾಜಕೀಯ ವಲಯ ಹಾಗೂ ಪೊಲೀಸ್ ಇಲಾಖೆಯೊಳಗೆ ತೀವ್ರ ಟೀಕೆಗಳಿಗೆ ಕಾರಣವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಅಧಿಕಾರಿಗಳ ನಡವಳಿಕೆ ಮತ್ತು ಪೊಲೀಸ್ ಯೂನಿಫಾರ್ಮಿನ ಗೌರವದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.

ವಿವಾದ ಗಂಭೀರವಾಗುತ್ತಿದ್ದಂತೆ ರಾಮಚಂದ್ರರಾವ್ ಅವರು ತುರ್ತುವಾಗಿ 10 ದಿನಗಳ ರಜೆ ಪಡೆದು ಸಂಪರ್ಕಕ್ಕೆ ಸಿಗದೆ ಇದ್ದಾರೆ. ಅವರ ಸರ್ಕಾರಿ ಹಾಗೂ ಖಾಸಗಿ ಮೊಬೈಲ್‌ಗಳು ಸ್ವಿಚ್ ಆಫ್ ಆಗಿದ್ದು, ಸರ್ಕಾರದ ಅಧಿಕಾರಿಗಳು ಹಾಗೂ ಮಾಧ್ಯಮಗಳಿಗೂ ಅವರು ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ಇದರಿಂದ ಶಂಕೆಗಳು ಇನ್ನಷ್ಟು ಹೆಚ್ಚಾಗಿವೆ. ಪ್ರಮುಖ ಬೆಳವಣಿಗೆಯೊಂದರಲ್ಲಿ ರಾಮಚಂದ್ರ ರಾವ್ ಅವರು ತಮ್ಮ ವಿವರಣೆ ನೀಡಲು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಲು ಯತ್ನಿಸಿದ್ದರು. ಆದರೆ ಗೃಹ ಸಚಿವರು ಅವರನ್ನು ಭೇಟಿಯಾಗಲು ನಿರಾಕರಿಸಿ, ಗೇಟ್‌ನಲ್ಲೇ ಹಿಂದಿರುಗಿಸಿದ್ದಾರೆ. ಇದರಿಂದ ಆರೋಪಿಗಳ ರಕ್ಷಣೆಗೆ ಸರ್ಕಾರ ನಿಲ್ಲುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದಂತಾಗಿದೆ.

Rasleele case: DGP Ramachandra Rao suspended!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 154

You cannot copy content of this page