ಕಡಬ: Tulu Times | ಕಡಬದ ಬಾರ್ ಒಂದರಲ್ಲಿ ಊಟ ಮಾಡುತ್ತಿದ್ದ ವೇಳೆ, ಪಾಲ್ತಾಡು ಗ್ರಾಮದ ಜಗದೀಶ (28) ಅವರಿಗೆ ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಒಡ್ಡಿ ಹಲ್ಲೆ ನಡೆಸಲಾಗಿದೆ.
ಇದನ್ನೂ ಓದಿ: ವಿವಾಹದ ಕನಸಿನಿಂದ ಮ್ಯಾಟ್ರಿಮೊನಿಯಲ್ ನಲ್ಲಿ ರೂ. 1.5 ಕೋಟಿ ವಂಚನೆ
ಬಾರ್ ನಲ್ಲಿ ಘಟನೆ ಆಗಿದ್ದೇನು..?
ಕಡಬ ಪೇಟೆಯ ಹೊರವಲಯದ ಕಳಾರದಲ್ಲಿರುವ ಬಾರ್ ನಲ್ಲಿ ಘಟನೆ ನಡೆದಿದೆ. ಜಗದೀಶ್ ರಾತ್ರಿ ಊಟ ಮುಗಿಸಿ ಕ್ಯಾಶ್ ಕೌಂಟರ್ ಹತ್ತಿರ ನಿಂತಿದ್ದರು ಈ ವೇಳೆ ಅಜಯ್, ಬೇಬಿ ಮತ್ತು ಅನಿಲ್ ಅಲ್ಲಿಗೆ ಬಂದು ಜಾತಿನಿಂದನೆ ಮಾಡಿ ಕೈಯಿಂದ ಕೆನ್ನೆ, ತಲೆ, ಭುಜ ಮತ್ತು ಬೆನ್ನಿಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರಾಸಲೀಲೆ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಸಸ್ಪೆಂಡ್ !
ಮಂಗಳೂರು: ನೆಲಕ್ಕುರುಳಿದ ಬೃಹತ್ ಗಾತ್ರದ ಮರ; ಭಾರೀ ಹಾನಿ!
ಮಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ,ಆಕಸ್ಮಿಕವಾಗಿ ನೆಲಕ್ಕುರುಳಿದ ಬೃಹತ್ ಗಾತ್ರದ ಮರದಿಂದಾಗಿ ದ್ವಿಚಕ್ರ ವಾಹನಕ್ಕೆ ಭಾರೀ ಹಾನಿ ಯಾಗಿದ್ದು, ಮರ ಬಿದ್ದ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬವೂ ಮುರಿದು ಬಿದ್ದಿದೆ.
ಇದನ್ನೂ ಓದಿ: ಸೂರತ್‌ನಲ್ಲಿ ರೂ. 5.85 ಕೋಟಿ ಮೌಲ್ಯದ ಕೋಬ್ರಾ ವಿಷ ವಶಕ್ಕೆ
ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟಿ ಮುಂಭಾಗದಲ್ಲಿ ಬೃಹತ್ ಗಾತ್ರದ ಮರ ನೆಲಕ್ಕುರುಳಿದೆ. ಈ ವೇಳೆ ಸ್ಕೂಟರ್ ಮೇಲೆ ಮರ ಬಿದ್ದಿದ್ದು ಸ್ಕೂಟರ್‌ಗೆ ಭಾರೀ ಹಾನಿಯಾಗಿದೆ. ಯಾರಿಗೂ ಏನೂ ಪ್ರಾಣಹಾನಿಯಾಗಿಲ್ಲ. ಅದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟೆಂಪೋ ಚಾಲಕ ಮರ ಬೀಳುವ ಕ್ಷಣದಲ್ಲಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಮೀಪದ ಕಟ್ಟಡವೊಂದರ ಗಾಜುಗಳು ನುಚ್ಚುನೂರಾಗಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಸ್ಥಳೀಯರು ಮರ ತೆರವುಗೊಳಿಸುವ ಕಾರ್ಯಾಚರಣೆ ಮಾಡಿದ್ದಾರೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇದನ್ನೂ ಓದಿ: ಸುಬ್ರಹ್ಮಣ್ಯದಲ್ಲಿ ಮಿಶ್ರ ತಳಿ ಹೆಣ್ಣು ಕರುಗಳ ಪ್ರದರ್ಶನ
Man attacked in a bar in Kadaba- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











