ಪುತ್ತೂರು:Tulu Times | ಮುಸಲ್ಮಾನ ಮತ್ತು ಕ್ರೈಸ್ತ ಸಮುದಾಯದ ವಿರುದ್ಧ ಹಿಂಸೆಗೆ ಪ್ರಚೋದನೆ ನೀಡುವಂತಹ ಮಾತುಗಳನ್ನು ಆಡಿದ ಹಿನ್ನೆಲೆ ಆರ್ ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಇತ್ತೀಚೆಗೆ ಷರತ್ತುಬದ್ಧ ಜಾಮೀನು ಪಡೆದ ಬೆನ್ನಲ್ಲೇ ಇದೀಗ ಆರ್ ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಜನವರಿ 12 ರಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ, ಮುಸಲ್ಮಾನ ಮತ್ತು ಕ್ರೈಸ್ತ ಸಮುದಾಯದ ವಿರುದ್ಧ ಹಿಂಸೆಗೆ ಪ್ರಚೋದನೆ ನೀಡುವಂತಹ ಮಾತುಗಳನ್ನು ಆಡಿದ್ದಾರೆ.
ಈ ಬಗ್ಗೆ ಮಾನವ ಬಂಧುತ್ವ ವೇದಿಕೆಯ ತಾಲೂಕು ಸಮಿತಿ ಅಧ್ಯಕ್ಷ ರಾಮಚಂದ್ರ ಕೆ. ಪೋಲೀಸರಿಗೆ ದೂರು ನೀಡಿದ್ದಾರೆ. ಪ್ರಭಾಕರ ಭಟ್ ಈ ಹಿಂದೆ ನ್ಯಾಯಾಲಯವು ದ್ವೇಷ ಭಾಷಣ ಮಾಡದಂತೆ ಅವರಿಗೆ ಷರತ್ತು ವಿಧಿಸಿದ್ದರೂ, ಅದರ ಉಲ್ಲಂಘನೆ ಮಾಡಿ ಮತ್ತೆ ಹಿಂಸೆಯನ್ನು ಪ್ರೇರೇಪಿಸುವ ಕೆಲಸ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಿಎನ್ ಎಸ್ (BNS) ಸೆಕ್ಷನ್ 196, 299, 302, 353(2) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಭಾಷಣವನ್ನು ನೇರ ಪ್ರಸಾರ ಮಾಡಿದ ವಿಕಸನ ಟಿವಿ ಯೂಟ್ಯೂಬ್ ಚಾನಲ್ ವಿರುದ್ಧವೂ ಎಫ್‌ಐಆರ್ ಆಗಿದೆ. ಕಲ್ಲಡ್ಕ ಪ್ರಭಾಕರ ಭಟ್ ಈ ಹಿಂದೆ ಜಾಮೀನು ಪಡೆಯುವಾಗ ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ’ ಎಂದು ಒಪ್ಪಿಕೊಂಡಿದ್ದರು. ಆದರೆ ಈಗ ಮತ್ತೆ ಅದೇ ರೀತಿಯ ಪ್ರಚೋದನಾಕಾರಿ ಭಾಷಣ ಮಾಡಿರುವುದು ಕಾನೂನು ತೊಡಕು ಉಂಟು ಮಾಡಿದೆ.
ಜ.27ರಿಂದ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ : ಪ್ರಶ್ನೆಪತ್ರಿಕೆ ಲೀಕ್ ತಡೆಗೆ ಕಠಿಣ ಕ್ರಮ
ಬೆಂಗಳೂರು: ಇತ್ತೀಚೆಗೆ ನಡೆದ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎರಡನೇ ಮತ್ತು ಮೂರನೇ ಪೂರ್ವಸಿದ್ಧತಾ ಪರೀಕ್ಷೆಗಳಿಗೆ ಹೊಸ ಸಮಯಪಟ್ಟಿ ಪ್ರಕಟಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೊಳಿಸಿದೆ.
ಇಲಾಖೆಯ ಮಾಹಿತಿ ಪ್ರಕಾರ, ಎರಡನೇ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಗಳು ಜನವರಿ 27ರಿಂದ ಫೆಬ್ರವರಿ 2ರವರೆಗೆ ನಡೆಯಲಿವೆ. ಈವರೆಗೆ ಬೆಳಿಗ್ಗೆ 10 ಗಂಟೆಗೆ ಆರಂಭವಾಗುತ್ತಿದ್ದ ಪರೀಕ್ಷೆಗಳು, ಇನ್ನುಮುಂದೆ ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿವೆ.
ವಿದ್ಯಾರ್ಥಿಗಳು ಬೆಳಿಗ್ಗೆ 9 ಗಂಟೆಗೆ ನಿಯಮಿತ ತರಗತಿಗಳಿಗೆ ಹಾಜರಾಗಬೇಕು ಮತ್ತು ಪರೀಕ್ಷೆ ಆರಂಭವಾಗುವವರೆಗೆ ತಮ್ಮ ತರಗತಿ ಕೊಠಡಿಗಳಲ್ಲೇ ಇರಬೇಕು ಎಂದು ಸೂಚಿಸಲಾಗಿದೆ. ಪುನರ್‌ಸಂಶೋಧಿತ ಮಾನದಂಡ ಕಾರ್ಯಾಚರಣೆ ವಿಧಾನ (SOP) ಪ್ರಕಾರ, ಪ್ರಶ್ನೆಪತ್ರಿಕೆಗಳನ್ನು ಶಾಲೆಯ ಲಾಗಿನ್ ಮೂಲಕ ಬೆಳಿಗ್ಗೆ 9.30ಕ್ಕೆ ಮಾತ್ರ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಮೊದಲು ಇದು ಬೆಳಿಗ್ಗೆ 7 ಗಂಟೆಗೆ ಲಭ್ಯವಿತ್ತು. ಮುಖ್ಯಶಿಕ್ಷಕರು ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧರಿಸಿ ಬೆಳಿಗ್ಗೆ 10 ಗಂಟೆಯೊಳಗೆ ಮುದ್ರಣ ಕಾರ್ಯ ಪೂರ್ಣಗೊಳಿಸಿ, 10ರಿಂದ 10.30ರ ನಡುವೆ ಪ್ಯಾಕಿಂಗ್ ಮಾಡಿ, ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೊಠಡಿಗಳಿಗೆ ಬೆಳಿಗ್ಗೆ 10.50ಕ್ಕಿಂತ ಮುಂಚೆ ಕಳುಹಿಸಬಾರದು ಎಂದು ಸೂಚಿಸಲಾಗಿದೆ.
FIR registered against RSS leader Kalladka Prabhakar Bhat!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess











