ಪುತ್ತೂರು:Tulu Times | ಪುತ್ತೂರಿನ ಕೋರ್ಟ್ ನಲ್ಲಿ ಜಡ್ಜ್ ಮುಂದೆಯೇ ವ್ಯಕ್ತಿಯೊಬ್ಬರು ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಕಾವು ನಿವಾಸಿ ರವಿ (35) ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವವರಾಗಿದ್ದಾರೆ. ಜಡ್ಜ್ ಎದುರು ಇರುವಾಗಲೇ ಈ ರೀತಿಯಾಗಿ ಆತ್ಮಹತ್ಯೆಗೆ ಪ್ರಯತ್ನ ಮಾಡಿರುವುದು ಸುತ್ತಮುತ್ತಲಿನ ಜನರಿಗೆ ಶಾಕ್ ಆಗಿದೆ. ಇದೀಗ ರವಿ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿಯಿದೆ.
ಆರ್ ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲು!
ಪುತ್ತೂರು: ಪ್ರತ್ಯೇಕ ಪ್ರಕರಣದಲ್ಲಿ, ಮುಸಲ್ಮಾನ ಮತ್ತು ಕ್ರೈಸ್ತ ಸಮುದಾಯದ ವಿರುದ್ಧ ಹಿಂಸೆಗೆ ಪ್ರಚೋದನೆ ನೀಡುವಂತಹ ಮಾತುಗಳನ್ನು ಆಡಿದ ಹಿನ್ನೆಲೆ ಆರ್ ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಇತ್ತೀಚೆಗೆ ಷರತ್ತುಬದ್ಧ ಜಾಮೀನು ಪಡೆದ ಬೆನ್ನಲ್ಲೇ ಇದೀಗ ಆರ್ ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಜನವರಿ 12 ರಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ, ಮುಸಲ್ಮಾನ ಮತ್ತು ಕ್ರೈಸ್ತ ಸಮುದಾಯದ ವಿರುದ್ಧ ಹಿಂಸೆಗೆ ಪ್ರಚೋದನೆ ನೀಡುವಂತಹ ಮಾತುಗಳನ್ನು ಆಡಿದ್ದಾರೆ.
ಈ ಬಗ್ಗೆ ಮಾನವ ಬಂಧುತ್ವ ವೇದಿಕೆಯ ತಾಲೂಕು ಸಮಿತಿ ಅಧ್ಯಕ್ಷ ರಾಮಚಂದ್ರ ಕೆ. ಪೋಲೀಸರಿಗೆ ದೂರು ನೀಡಿದ್ದಾರೆ. ಪ್ರಭಾಕರ ಭಟ್ ಈ ಹಿಂದೆ ನ್ಯಾಯಾಲಯವು ದ್ವೇಷ ಭಾಷಣ ಮಾಡದಂತೆ ಅವರಿಗೆ ಷರತ್ತು ವಿಧಿಸಿದ್ದರೂ, ಅದರ ಉಲ್ಲಂಘನೆ ಮಾಡಿ ಮತ್ತೆ ಹಿಂಸೆಯನ್ನು ಪ್ರೇರೇಪಿಸುವ ಕೆಲಸ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಿಎನ್ ಎಸ್ (BNS) ಸೆಕ್ಷನ್ 196, 299, 302, 353(2) ಮತ್ತು 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಭಾಷಣವನ್ನು ನೇರ ಪ್ರಸಾರ ಮಾಡಿದ ವಿಕಸನ ಟಿವಿ ಯೂಟ್ಯೂಬ್ ಚಾನಲ್ ವಿರುದ್ಧವೂ ಎಫ್‌ಐಆರ್ ಆಗಿದೆ. ಕಲ್ಲಡ್ಕ ಪ್ರಭಾಕರ ಭಟ್ ಈ ಹಿಂದೆ ಜಾಮೀನು ಪಡೆಯುವಾಗ ಮುಂದೆ ದ್ವೇಷ ಭಾಷಣ ಮಾಡುವುದಿಲ್ಲ’ ಎಂದು ಒಪ್ಪಿಕೊಂಡಿದ್ದರು. ಆದರೆ ಈಗ ಮತ್ತೆ ಅದೇ ರೀತಿಯ ಪ್ರಚೋದನಾಕಾರಿ ಭಾಷಣ ಮಾಡಿರುವುದು ಕಾನೂನು ತೊಡಕು ಉಂಟು ಮಾಡಿದೆ.
Puttur: Attempted suicide by consuming poison in front of a judge!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











