ಬ್ರೇಕಿಂಗ್ ನ್ಯೂಸ್
ಕರ್ನಾಟಕಬೆಳ್ತಂಗಡಿ

ಕಾರ್ಕಳ: ಖಾಸಗಿ ಬಸ್ ಹಾಗೂ ತುಫಾನ್ ಮಧ್ಯೆ ಭೀಕರ ಅಪಘಾತ: ಮೂವರು ಸಾವು

ಕಾರ್ಕಳ: Tulu Times | ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ತೆರಳುತ್ತಿದ್ದ  ಖಾಸಗಿ ಬಸ್ ಹಾಗೂ ತುಫಾನ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು,  ಮೂವರು ಸಾವನ್ನಪ್ಪಿ,  ಆರು ಮಂದಿಗೆ ಗಂಭೀರ  ಗಾಯಗಳಾಗಿವೆ.

ಘಟನೆ ಸಂಭವಿಸಿದ್ದು ಹೇಗೆ..?

ಕಾರ್ಕಳ ತಾಲೂಕಿನ ಮಿಯಾರು ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ 2.50 ರ ಸುಮಾರಿಗೆ ಈ ಘೋರ ಅಪಘಾತ  ನಡೆದಿದೆ. ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ  ಖಾಸಗಿ ಬಸ್ ಮಿಯಾರು ಕಂಬಳಕ್ರಾಸ್ ಬಳಿ ವೇಗವಾಗಿ ಬಂದು ವಿರುದ್ಧ ದಿಕ್ಕಿನಲ್ಲಿ ನುಗ್ಗಿದೆ.

ಈ ವೇಳೆ ಕಾರ್ಕಳದಿಂದ ಬೆಳ್ತಂಗಡಿ  ಕಡೆಗೆ ತೆರಳುತ್ತಿದ್ದ ತುಫಾನ್ ವಾಹನಕ್ಕೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತುಫಾನ್   ಜಖಂಗೊಂಡಿದೆ.  ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಗಂಭೀರ  ಗಾಯಗೊಂಡ  ಆರು ಮಂದಿಯನ್ನು  ಕಾರ್ಕಳದ ಸರ್ಕಾರಿ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ಗಾಯಾಳುಗಳ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.  ಇನ್ನು ಅಪಘಾತದಲ್ಲಿ ಚಾಲಕ ಮಣ್ಣಪ್ಪ ಚೇತು, ರೋಹಿತ್ ಮೃತರು ಎನ್ನಲಾಗಿದೆ.

ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ವಾಹನ ಸವಾರರ ಪರದಾಟ!

ಚಾರ್ಮಾಡಿ: ಪ್ರತ್ಯೇಕ ಪ್ರಕರಣದಲ್ಲಿ, ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಲಾರಿಯೊಂದು ಸಿಲುಕಿದ ಸಿಲುಕಿದ ಪರಿಣಾಮ ಭಾರಿ ಟ್ರಾಫಿಕ್ ಜಾಮ್ ಆಗಿದ್ದು ವಾಹನ ಸವಾರರು ಪರದಾಡಿದರು.

ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಭಾರೀ ಪ್ರಮಾಣದಲ್ಲಿ ಸರಕು ಹೇರಿಕೊಂಡು ಬರುತ್ತಿದ್ದ ಲಾರಿಯೊಂದು ತಿರುವು ಪಡೆದುಕೊಳ್ಳಲು ಸಾಧ್ಯವಾಗದೆ ರಸ್ತೆ ಮಧ್ಯೆ ಬಾಕಿಯಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಾತ್ರಿ ಟ್ರಾಫಿಕ್ ಜಾಮ್ ಮುಂದುವರಿತ್ತು. ಲಾರಿ ರಸ್ತೆಯಲ್ಲೇ ನಿಂತ ಕಾರಣ ಘನ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಲಘು ವಾಹನಗಳಿಗೆ ಸಂಚರಿಸುವಷ್ಟು ಜಾಗವಿದ್ದು ಬೇಕಾಬಿಟ್ಟಿಯಾಗಿ ವಾಹನಗಳನ್ನು ನುಗ್ಗಿಸಿದ ಕಾರಣ ಮತ್ತಷ್ಟು ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಹಲವು ತಾಸು ಸಾಲುಗಟ್ಟಿ ನಿಲ್ಲಬೇಕಾಯಿತು. ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದುಪಾಟಿ ಭಾಗದಲ್ಲಿ ವಾಹನ ಸಂಚಾರ ದಟ್ಟಣೆಯು ಅಧಿಕಗೊಂಡಿದೆ.

Karkala: Three killed in horrific accident between private bus and typhoon- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 159

You cannot copy content of this page