ಬ್ರೇಕಿಂಗ್ ನ್ಯೂಸ್
ಕರಾವಳಿಮಂಗಳೂರು

Mangaluru: ಬಟ್ಟೆ ಬದಲಾಯಿಸುವ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ – ನಿರೀಕ್ಷಾ ಬಂಧನ

Mangaluru: ಅಭಿಷೇಕ್‌ ಆಚಾರ್ಯ ಆತ್ಮಹತ್ಯೆ ಪ್ರಕರಣ ಸಾಕಷ್ಟು ಮಟ್ಟದಲ್ಲಿ ಸುದ್ದಿಯಾಗಿತ್ತು. ಆತ್ಮಹತ್ಯೆ ಪ್ರಚೋದನೆ ಹಿನ್ನಲೆ ಯುವತಿ ಹಾಗೂ ಆಕೆಯ ತಂಡವನ್ನು ಶೀಘ್ರದಲ್ಲಿ ಪೊಲೀಸರು ಬಂಧಿಸಬೇಕೆಂಬ ಆಗ್ರಹ ವ್ಯಕ್ತವಾಗಿತ್ತು. ಈಗ ಯುವತಿಯೊಬ್ಬಳು ನೀಡಿದ ದೂರಿನಂತೆ ನಿರೀಕ್ಷಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಯುವತಿ ಬಟ್ಟೆ ಬದಲಾಯಿಸುವ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ನಿರೀಕ್ಷಾಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ಮೂಲದ, ಮಂಗಳೂರಿನ ಕಂಕನಾಡಿಯಲ್ಲಿ ಬಾಡಿಗೆ ಮನೆಯಲ್ಲಿ ನಿರೀಕ್ಷಾ ವಾಸವಿದ್ದಳು. ಇತ್ತೀಚಿಗೆ ಕಾರ್ಕಳದ ನಿಟ್ಟೆಯ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣದಲ್ಲಿಯೂ ನಿರೀಕ್ಷಾ ವಿರುದ್ಧ ಹನಿ ಟ್ರ್ಯಾಪ್ ಆರೋಪದ ಕೇಳಿ ಬಂದಿತ್ತು.

ಮಂಗಳೂರಿನ ಕದ್ರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಹಿನ್ನೆಲೆ ನಿರೀಕ್ಷಾಳನ್ನು ಅ. 19ರ ರವಿವಾರ ಬಂಧಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಇತ್ತೀಚೆಗೆ ಬೆಳ್ಮಣ್‌ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಅಭಿಷೇಕ್ ಆಚಾರ್ಯ ಬರೆದಿದ್ದ ಡೆತ್ ನೋಟ್ ನಲ್ಲಿ ನಿರೀಕ್ಷಾ ಹಾಗೂ ಇತರರ ಹೆಸರು ಉಲ್ಲೇಖವಾಗಿತ್ತು. ಬಳಿಕ ನಿರೀಕ್ಷಾ ಬಂಧನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿಯೂ ಆಗ್ರಹ ಕೇಳಿ ಬಂದಿತ್ತು.

ಇದನ್ನೂ ಓದಿ: ಅಶಕ್ತ ಕುಟುಂಬಕ್ಕೆ ಸ್ವಂತ ಖರ್ಚಿನಲ್ಲಿ ಮನೆ‌ ನಿರ್ಮಿಸಿ ಕೊಟ್ಟ ಶಾಸಕ ಸುನಿಲ್‌ ಕುಮಾರ್

=========================

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 36

You cannot copy content of this page