ಬಂಟ್ವಾಳ: Tulu Times | ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ ಡಿವೈಡರ್ ಹತ್ತಿದ ಘಟನೆ ನಡೆದಿದೆ.
ಸೋಮವಾರ ಬೆಳಗ್ಗಿನ ಜಾವ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪುಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆಯಿಂದ ಬಸ್ಗೆ ಭಾಗಶಃ ಹಾನಿ ಉಂಟಾಗಿದೆ. ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಇದನ್ನೂ ಓದಿ: ಸುನೇತ್ರಾ ಪವಾರ್ ಯಾರು? ಅಜಿತ್ ಪವಾರ್ ಮತ್ತು ಪವಾರ್ ಕುಟುಂಬ
ಕೋಡಿಬೇಂಗ್ರೆಯಲ್ಲಿ ದೋಣಿ ದುರಂತ: ರೀಲ್ಸ್ ಮಾಡ್ತಿದ್ದ ಹುಡುಗಿ ಸಾವು
ಉಡುಪಿ: ಪ್ರತ್ಯೇಕ ಪ್ರಕರಣದಲ್ಲಿ, ಕೋಡಿಬೇಂಗ್ರೆಯಲ್ಲಿ ದೋಣಿ ದುರಂತ ಪ್ರಕರಣದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಮಾಡುತ್ತಿದ್ದ ಮೈಸೂರಿನ ಹುಡುಗಿ ದೋಣಿ ಮುಳುಗಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಸೋಮವಾರ ಚಾಮರಾಜನಗರದ ಜಿಲ್ಲೆಯ ಹರವೆ ಗ್ರಾಮದ ಶಂಕರಪ್ಪ (27) ಹಾಗೂ ಚಾಮರಾಜನಗರದ ಜಿಲ್ಲೆಯ ನರಸೀಪುರ ತಾಲೂಕಿನ ಮೂಗೂರು ನಿವಾಸಿ ಸಿಂಧು(25) ಮೃತಪಟ್ಟಿದ್ದರು. ತೀವ್ರವಾಗಿ ಅಸ್ವಸ್ಥಗೊಂಡ ಮಣಿಪಾಲ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಧರ್ಮರಾಜ(26) ಇದೀಗ ಚಿಕಿತ್ಸೆ ಸ್ಪಂದಿಸುತ್ತಿದ್ದಾರಿ ತಿಳಿದುಬಂದಿದೆ.
ಇದನ್ನೂ ಓದಿ: ಮುಂಬೈ ಪ್ರದೇಶದಲ್ಲಿರುವ ಕಲ್ಲುಗಣಿಗಳೇ ವಾಯುಮಾಲಿನ್ಯದ ಹೆಚ್ಚಳಕ್ಕೆ ಕಾರಣವಾಗಿದ್ಯಾ ?
ಸೋಮವಾರ ಕೋಡಿಬೇಂದ್ರೆ ಅಳಿವೆಬಾಗಿಲು ಎಂಬಲ್ಲಿ ಪ್ರವಾಸಿ ದೋಣಿ ನೀರಿನಲ್ಲಿ ಮುಳುಗಿತ್ತು. ಈ ವೇಳೆ, ತೀವ ವಾಗಿ ಅಸ್ವಸ್ಥಗೊಂಡಿದ್ದ ಮತ್ತೋರ್ವ ಯುವತಿ ಮಂಗಳವಾರ ಸಂಜೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೇರಿದೆ. ಮೃತ ಹುಡುಗಿಯನ್ನು ಮೈಸೂರಿನ ಉದಯಗಿರಿ ಸಮೀಪದ ಜಲಪುರಿ ನಿವಾಸಿ ಶಿವಣ್ಣ ಎಂಬವರ ಮಗಳು ದೀಶಾ(23) ಎನ್ನಲಾಗಿದೆ. ಇನ್ನು ದುರಂತದಲ್ಲಿ ಸಾವನ್ನಪ್ಪಿದ ಎಲ್ಲರೂ ಮೈಸೂರು ಗೋಲ್ ಕ್ರಿಸ್ಟ ಇಂಡಿಯಾ ಪ್ರೈವೇಟ್ ಲಿ. ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದಾರೆ ಎಂಬ ಮಾಹಿತಿಯಿದೆ.
ಇದನ್ನೂ ಓದಿ: ಜಾಗೃತಿ ಇದ್ದರೂ ಬಾಲ್ಯವಿವಾಹ ಮುಂದುವರಿಕೆ: ಕರ್ನಾಟಕದಲ್ಲಿ 8,355 ದೂರು ದಾಖಲು
Bantwal: Bus crashes into divider after driver loses control!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











