ಪುತ್ತೂರು;ತುಳುಟೈಮ್ಸ್ | ನಾಳೆ ಪುತ್ತೂರಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ಉದ್ಘಾಟನೆಗೊಳ್ಳಲಿದೆ.ಪುತ್ತೂರಿನ ಬನ್ನೂರು ಆನೆಮಜಲಿನಲ್ಲಿ ನೂತನ ನ್ಯಾಯಾಲಯ ಸಂಕೀರ್ಣ ನಿರ್ಮಾಣಗೊಂಡಿದ್ದು ನಾಳೆ ಉದ್ಟಾನೆಯಾಗಲಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ಸರಿಯಾಗಿ ಆಂಧ್ರಪ್ರದೇಶದ ರಾಜ್ಯಪಾಲರು ಮತ್ತು ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರು ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಲಿದ್ದಾರೆ.
ನಾಳಿನ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ದತೆಗಳು ನಡೆಯುತ್ತಿದೆ.ಉದ್ಘಾಟನಾ ಕಾರ್ಯಕ್ರಮ ಅಧ್ಯಕ್ಷತೆಯನ್ನು ಕರ್ನಾಟಕ ಹೈಕೋರ್ಟ್ ಸಿಜೆ ನ್ಯಾ ವಿಭು ಭಕ್ರು ವಹಿಸಿಕೊಳ್ಳಲಿದ್ದಾರೆ.
ಪುತ್ತೂರು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು ಕಾರ್ಯನಿರ್ವಹಿಸುತ್ತಿದ್ದ ಕಟ್ಟಡದಲ್ಲಿ ಜಾಗದ ಕೊರತೆಯಿತ್ತು.ಈ ಕಾರಣಕ್ಕೆ ಹೊಸ ಕಟ್ಟಡ ನಿರ್ಮಾಣಗೊಂಡಿದೆ.ಉದ್ಘಾಟನೆಯ ದಿನವೇ ಕಲಾಪ ಉದ್ಘಾಟನೆಯ ಬಳಿಕ ಅಪರಾಹ್ನ 2 ಗಂಟೆಯ ಬಳಿಕ ಕೋರ್ಟ್ ಕಲಾಪಗಳು ಹೊಸ ಕಟ್ಟಡದಲ್ಲಿ ಆರಂಭಗೊಳ್ಳಲಿದೆ.
ಪುತ್ತೂರು ಮತ್ತು ಆಸುಪಾಸಿನ ತಾಲೂಕುಗಳ ಜನರಿಗೆ ಅನುಕೂಲವಾಗುವಂತೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಈ ಬೃಹತ್ ನ್ಯಾಯಾಲಯ ಸಂಕೀರ್ಣವನ್ನು ನಿರ್ಮಿಸಲಾಗಿದೆ.
Puttur's new court complex is ready for inauguration. tulu timesಇದನ್ನೂ ಓದಿ : ಸೋಂಕಿತ ಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ವೈರಲ್ ರೋಗ
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ :











