ಸುಳ್ಯ: Tulu Times | ಸಂಪಾಜೆಯಲ್ಲಿ ರಿಕ್ಷಾಗೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾಗಿರುವ ಘಟನೆ ನಡೆದಿದ್ದು, ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೊಡಗು ಜಿಲ್ಲೆಯ ಸಂಪಾಜೆ ಗೇಟ್ ಬಳಿ ಹಿಂಬದಿಯಿಂದ ಬಂದ ಕಾರೊಂದು ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲೇ ಸಾವನ್ನಪ್ಪಿದ್ದಾರೆ. ಇನ್ನು ಆಟೋದಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರಿಗೆ ಗಂಭೀರ ಗಾಯಗಳಾಗಿವೆ. ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಸುಂದರ ಚಿಟ್ಟೆಕ್ಕಾನ(62) ಮೃತ ದುರ್ದೇವಿ ಎಂದು ಗುರುತಿಸಲಾಗಿದೆ.
ಮಧ್ಯಾಹ್ನದ ಸಮಯದಲ್ಲಿ ಗ್ರಾ.ಪಂ. ಸದಸ್ಯೆ ಅನಿತಾ ಅರ ತಾಯಿ ಪದ್ಮಾವತಿ ಅವರನ್ನು ಚಡವು ಎಂಬಲ್ಲಿರುವ ಅವರ ಮನೆಗೆ ಬಿಡಲು ಸುಂದರ ಅವರು ರಿಕ್ಷಾದಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದೆ. ಕಾರು ಮಡಿಕೇರಿ ಕಡೆಗೆ ತೆರಳುತ್ತಿತ್ತು, ಈ ವೇಳೆ ರಭಸದಿಂದ ಬಂದ ಕಾರು
ರಾಂಗ್ ಸೈಡ್ ನಲ್ಲಿ ಚಲಿಸಿದೆ. ಸುಂದರ ಅವರ ಆಟೋಗೆ ಡಿಕ್ಕಿ ಹೊಡೆದು ಆಟೋ ಪಲ್ಟಿಯಾಗಿದ್ದು, ಸುಂದರ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರು ಚಾಲಕ ಆಕ್ಸಿಡೆಂಟ್ ಆದ ಬಳಿಕ ಕಾರನ್ನು ಅಲ್ಲಿಯೇ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಈ ಬಗ್ಗೆ, ಮಡಿಕೇರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕಾರು ಚಾಲಕನಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.
ಬೆಳ್ತಂಗಡಿ: ಮನೆಗೆ ನುಗಿ ಚಿನ್ನಾಭರಣ ಕದ್ದ ಕಳ್ಳರು !
ಬೆಳ್ತಂಗಡಿ: ಪ್ರತ್ಯೇಕ ಪ್ರಕರಣದಲ್ಲಿ, ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಮನೆಯೊಳಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಬಾಲಕೃಷ್ಣ ಗೌಡ ಎಂಬವರ ಮನೆಯಲ್ಲಿ ಬೆಳಗ್ಗೆ 9:30 ರಿಂದ ಸಂಜೆ 4 ಗಂಟೆ ಒಳಗಡೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿದ್ದಾರೆ. ಒಟ್ಟು 47,500 ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಮನೆಯ ಒಳಗೆ ಬೀರುವಿನಲ್ಲಿ ಇಟ್ಟಿದ್ದ 4 ಗ್ರಾಂ ಕಿವಿಯೋಲೆ, 2 ಸಾವಿರ ಮೌಲ್ಯದ 2 ಜೊತೆ ಬೆಳ್ಳಿಯ ಕಾಲುಗೆಜ್ಜೆ 5,500 ರೂಪಾಯಿ ನಗದು ಕದ್ದೊಯ್ದಿದ್ದಾರೆ.ಈ ಬಗ್ಗೆ ಮನೆಯ ಮಾಲಿಕ ಬಾಲಕೃಷ್ಣ ಗೌಡ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿಎಸ್, ಧರ್ಮಸ್ಥಳ ಸಬ್ ಇನ್ಸೆಕ್ಷರ್ ಸಮರ್ಥ್ ಆರ್ ಗಾಣಿಗೇರ ಮತ್ತು ತಂಡ, ಮಂಗಳೂರು ಬೆರಳಚ್ಚು ತಜ್ಞರು, ಪುತ್ತೂರು ಸೊಕೋ ತಂಡ, ಮಂಗಳೂರು ಶ್ವಾನ ದಳ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
Sullia: Car driver escapes after hitting rickshaw! Rickshaw driver dies- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











