ಉಡುಪಿ:Tulu Times | ಪ್ರೀತಿಸುತ್ತಿದ್ದ ಹುಡುಗಿ ಜೊತೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗಲೇ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕುಂಜಿಬೆಟ್ಟು ನಿವಾಸಿಯಾದ ರಾಜು ಅವರ ಪುತ್ರ ರಂಜಿತ್ (28) ಮೃತಪಟ್ಟ ಯುವಕ.
ಘಟನೆ ನಡೆದ್ದೇನು..?
ಪೈಂಟಿಂಗ್ ಕೆಲಸ ಮುಗಿಸಿ ಮನೆಗೆ ಬಂದ ರಂಜಿತ್ ಮನೆಯವರೊಟ್ಟಿಗೆ ಮಾತನಾಡಿದ್ದರು. ಅನಂತರ ತಾನು ಪ್ರೀತಿಸುತ್ತಿದ್ದ ಹುಡುಗಿ ಪ್ರೀತಿ ಎಂಬವರ ಜತೆ ಫೋನಿನಲ್ಲಿ ಮಾತನಾಡುತ್ತಾ ತನ್ನ ರೂಮಿನೊಳಗೆ ಹೋಗಿದ್ದನು. ರಾತ್ರಿ ವೇಳೆ ಮನೆಯ ವಾಟರ್ ಟ್ಯಾಂಕಿನ ನೀರು ತುಂಬಿ ಕೆಳಗೆ ಬೀಳುತ್ತಿದ್ದುದರಿಂದ ಅವರ ತಂದೆ ವಾಟರ್ ಟ್ಯಾಂಕಿನ ವಾಲ್ ನ್ನು ಆಫ್ ಮಾಡಲು ಹೋಗುವಾಗ ರಂಜಿತ್ ರೂಮ್ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಎಲ್ಲರಿಗೂ ವಿಚಾರ ತಿಳಿಸಿದ್ದಾರೆ.
ರಂಜಿತ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ. ಕೂಡಲೇ ಆತನನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ವೈದ್ಯರು ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ಆತ್ಮಹತ್ಯೆಯ ಹಿಂದೆ ಅನುಮಾನ ಇರೋದಾಗಿ ಅಣ್ಣ ರಕ್ಷಿತ್ ಅವರು ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಬೆಳ್ತಂಗಡಿಯಲ್ಲಿ ತಡೆಗೋಡೆ ಕುಸಿದು ಬಿದ್ದು ಓರ್ವ ಸಾವು
ಬೆಳ್ತಂಗಡಿ: ಪ್ರತ್ಯೇಕ ಪ್ರಕರಣದಲ್ಲಿ, ಬೆಳ್ತಂಗಡಿ ತಾಲೂಕಿನಲ್ಲಿ ಏಕಾಏಕಿಯಾಗಿ ತಡೆಗೋಡೆ ಕುಸಿದು ಬಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಉಜಿರೆಯಿಂದ ಸೂರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಜ.31 ರಂದು ಬೆಳಗ್ಗೆ ತಾಲೂಕಿನ ಉಜಿರೆ – ಸುರ್ಯ ರಸ್ತೆಯಲ್ಲಿ ತಡೆಗೋಡೆ ಕುಸಿದ ಪರಿಣಾಮ ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾನೆ. ತಕ್ಷಣವೇ ಆತನನ್ನು ಸ್ಥಳೀಯರು ರಕ್ಷಣೆಗೆ ಧಾವಿಸಿ ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇನ್ನು ತಡೆಗೋಡೆ ಕುಸಿದ ವೇಳೆ ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Udupi: A young man committed suicide while talking to his lover!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











