ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಫಿಲಂ ಚೇಂಬರ್ ಅಧ್ಯಕ್ಷರಾಗಿ ಡಾ. ಜಯಮಾಲಾ ನೇಮಕ !

ಕರ್ನಾಟಕ: Tulu Times | ಕರ್ನಾಟಕ ಫಿಲಂ ಚೇಂಬರ್ ಅಧ್ಯಕ್ಷರಾಗಿ ಡಾ| ಜಯಮಾಲಾ ಆಯ್ಕೆಯಾಗಿದ್ದಾರೆ.  ಇವರು 170 ಮತಗಳ ಅಂತರದಿಂದ  ತನ್ನ ಗೆಲುವು ಸಾಧಿಸಿದ್ದಾರೆ.

ಎದುರಾಳಿ ಭಾ.ಮಾ ಹರೀಶ್ 334 ಮತಗಳನ್ನು ಪಡೆದಿರುತ್ತಾರೆ. ಇನ್ನು ಅಧ್ಯಕ್ಷ ಸ್ಥಾನಕ್ಕೆ ಒಟ್ಟು 813 ಮತಗಳು ಚಲಾವಣೆ ಆಗಿದ್ದು, ಅವುಗಳಲ್ಲಿ 512 ಮತಗಳನ್ನು ಜಯಮಾಲಾ ಪಡೆದು ಗೆಲುವು ಸಾಧಿಸಿದ್ದಾರೆ.  2008ರಲ್ಲಿ ಅವರು ಮಂಡಳಿಯ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಈಗ ಮತ್ತೊಮ್ಮೆ ಅಧ್ಯಕ್ಷರಾಗಲಿದ್ದಾರೆ. ಮುಂದಿನ ಅವಧಿಗೆ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿದ್ದಾರೆ.

ಜಯಮಾಲಾ ಸಿನಿಮಾ ಜೀವನ ಹೇಗಿತ್ತು..?

1970 ಮತ್ತು 80ರ ದಶಕದಲ್ಲಿ ಕನ್ನಡ ಚಿತ್ರರಂಗದ ಜನಪ್ರಿಯ ನಾಯಕಿಯಾಗಿದ್ದ ಇವರು, ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಶ್ ಸೇರಿದಂತೆ ಅಂದಿನ ಎಲ್ಲಾ ಪ್ರಮುಖ ನಟರೊಂದಿಗೆ ಅಭಿನಯಿಸಿದ್ದಾರೆ.ಇವರು ನಿರ್ಮಿಸಿದ ‘ತಾಯಿ ಸಾಹೇಬ’ ಚಿತ್ರ ರಾಷ್ಟ್ರ ಪ್ರಶಸ್ತಿಯನ್ನು (ಸ್ವರ್ಣ ಕಮಲ) ಗೆದ್ದುಕೊಂಡಿದೆ. ಈ ಚಿತ್ರದ ನಟನೆಗಾಗಿ ಜಯಮಾಲಾ ಅವರಿಗೆ ರಾಷ್ಟ್ರ ಪ್ರಶಸ್ತಿಯ ವಿಶೇಷ ಜ್ಯೂರಿ ಪ್ರಶಸ್ತಿ ಲಭಿಸಿದೆ. ಗ್ರಾಮೀಣ ಮಹಿಳೆಯರ ಪುನರ್ವಸತಿ ಕುರಿತು ಪ್ರಬಂಧ ಮಂಡಿಸಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಈ ಗೌರವ ಪಡೆದ ಏಕೈಕ ನಟಿ ಇವರಾಗಿದ್ದಾರೆ.ಇವರು ಕರ್ನಾಟಕ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಯಾಗಿ ಸೇವೆ ಸಲ್ಲಿಸಿದ್ದಾರೆ.ಕರ್ನಾಟಕ ಸರ್ಕಾರವು ಇತ್ತೀಚೆಗೆ ಇವರಿಗೆ 2020ನೇ ಸಾಲಿನ ಪ್ರತಿಷ್ಠಿತ ‘ಡಾ. ರಾಜ್‌ಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ’ ನೀಡಿ ಗೌರವಿಸಿದೆ.

ಜಯಮಾಲಾ ಚಲನಚಿತ್ರ ವಾಣಿಜ್ಯ ಮಂಡಳಿ ಬಗ್ಗೆ ಹೇಳೋದೇನು..?

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನನ್ನ ತವರು ಮನೆ ಇದ್ದಂತೆ. ಎಷ್ಟೇ ಬೆಳೆದರೂ ತವರು ಮನೆಯನ್ನು ಮರೆಯುವುದಿಲ್ಲ. ತವರು ಮನೆಯ ಸೇವೆ ಖುಷಿ ಕೊಡುತ್ತದೆ. 2008ರಿಂದ 2010 ನಾನು ಅಧ್ಯಕ್ಷೆಯಾಗಿದ್ದೆ. ಚಿತ್ರರಂಗದ ಅಭಿವೃದ್ಧಿಗೆ ಶಕ್ತಿಮೀರಿ ಅವಧಿಯಲ್ಲಿ ಶ್ರಮಸಿದ್ದೇನೆ ಎಂದು ಹೇಳಿದ್ದಾರೆ. ನಾನು ನಟಿಯಾಗಿ ಗುರುತಿಸಿಕೊಂಡಿದ್ದೇನೆ ಎಂದರೆ ಅದಕ್ಕೆ ಕನ್ನಡ ಚಿತ್ರರಂಗವೇ ಕಾರಣ. ಕರ್ನಾಟಕ ಚಲ ನಚಿತ್ರ ವಾಣಿಜ್ಯ ಮಂಡಳಿ ನನ್ನ ತವರು ಮನೆ ಇದ್ದಂತೆ. ನಾವು ಯಾವ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರೂ ತವರು ಮನೆಯನ್ನು ಮರೆಯುವುದಿಲ್ಲ. ತವರು ಮನೆಯ ಸೇವೆ ಖುಷಿ ಕೊಡುತ್ತದೆ.

Dr. Jayamala appointed as President of Film Chamber- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page