ಬ್ರೇಕಿಂಗ್ ನ್ಯೂಸ್
ಕರ್ನಾಟಕರಾಜಕೀಯ

ಜಿಲ್ಲೆಗಳಲ್ಲಿ ಎಲ್‍ಇಡಿ ಸ್ಕ್ರೀನ್ ಮೂಲಕ ಕೇಂದ್ರ ಬಜೆಟ್ ವೀಕ್ಷಿಸಲು ವ್ಯವಸ್ಥೆ: ಅಶ್ವತ್ಥನಾರಾಯಣ್

ಬೆಂಗಳೂರು: Tulu Times | ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದು, ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ ಮತ್ತು ಎಲ್ಲ ಜಿಲ್ಲಾ ಕಾರ್ಯಾಲಯಗಳಲ್ಲಿ ವಿಶೇಷವಾಗಿ ಇದರ ವೀಕ್ಷಣೆಗೆ ಎಲ್‍ಇಡಿ ಸ್ಕ್ರೀನ್ ಮುಖಾಂತರ ವ್ಯವಸ್ಥೆ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ರಾಜ್ಯ ಕೋರ್ ಕಮಿಟಿ ಸದಸ್ಯರು, ಶಿವಮೊಗ್ಗದ ಜಿಲ್ಲಾ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸಿ ಬಜೆಟ್ ವೀಕ್ಷಿಸುವರು ಎಂದು ತಿಳಿಸಿದ್ದಾರೆ.
ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದ ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಪ್ರಮುಖರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಿಯಾಂಕ್ ಖರ್ಗೆ ಹಾಗೂ ಇಲಾಖೆ ಮುಖ್ಯಕಾರ್ಯದರ್ಶಿಯವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ!

ಸಾರ್ವಜನಿಕರ ತೆರಿಗೆ ಹಣದಲ್ಲಿ ಕೇಂದ್ರಸರ್ಕಾರದ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಕಟಣೆ ನೀಡಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹಾಗು ಇಲಾಖೆ ಮುಖ್ಯ ಕಾರ್ಯದರ್ಶಿ ವಿರುದ್ಧ ಮಂಡ್ಯ ಭಾರತೀಯ ಜನತಾ ಪಾರ್ಟಿಯ ವಕ್ತಾರ ಸಿ.ಟಿ ಮಂಜುನಾಥ್ ಆಗ್ರಹಿಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ಜಾಹೀರಾತುಗಳು ರಾಜಕೀಯ ಪ್ರೇರಿತವಾಗಿರಬಾರದು ಎಂದಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿ ಬಿ ಜಿ ರಾಮ್ ಜಿ ಬಗ್ಗೆ ಪತ್ರಿಕೆಗಳಿಗೆ ನೀಡಿರುವ ಈ ಜಾಹೀರಾತು “ರಾಜಕೀಯ ಪಕ್ಷಪಾತದಿಂದ ಕೂಡಿದೆ. ತೆರಿಗೆದಾರರ ಹಣವನ್ನು ಕೇಂದ್ರದ ಕಾಯ್ದೆಯ ವಿರುದ್ಧ ಅಪಪ್ರಚಾರ ಮಾಡಲು ಬಳಸುವುದು ಸಾರ್ವಜನಿಕ ಹಣದ ದುರುಪಯೋಗ ವಾಗಿದೆ ಎಂದರು.

ಜಾಹೀರಾತಿನಲ್ಲಿ ಮಹಾತ್ಮಗಾಂಧೀಜಿಯವರ ವ್ಯಂಗ್ಯಚಿತ್ರವನ್ನು ಬಳಸಿ ಕೇಂದ್ರದ ಯೋಜನೆಯನ್ನು ಟೀಕಿಸಿರುವುದು ಗಾಂಧೀಜಿಯವರಿಗೆ ಮಾಡಿದ ಅವಮಾನವಾಗಿದೆ. ಜಾಹೀರಾತು ಕೇವಲ ರಾಜಕೀಯ ಟೀಕೆಯಾಗಿದ್ದರೆ ಅದು ಅಭಿವ್ಯಕ್ತಿ ಸ್ವಾತಂತ್ರ್ಯದ ಅಡಿಯಲ್ಲಿ ಬರಬಹುದು. ಆದರೆ ಸಾರ್ವಜನಿಕ ಹಣ ಬಳಸಿರುವುದರಿಂದ ಅದು ಸುಪ್ರೀಂ ಕೋರ್ಟ್‌ 2013ರ ಮಾರ್ಗಸೂಚಿಗಳ ಗಂಭೀರ ಉಲ್ಲಂಘನೆಯಾಗಿದೆ ಎಂದರು.

Arrangements to view central budget through LED screens in districts: Ashwathnarayan- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ:https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 157

You cannot copy content of this page