ಬೆಂಗಳೂರು: Tulu Times | ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಒಂದು ಐತಿಹಾಸಿಕ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2026-27ನೇ ಸಾಲಿನ ಮುಂಗಡ ಪತ್ರವನ್ನು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ವೀಕ್ಷಿಸಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಬಜೆಟ್ ಇದಾಗಿದೆ ಎಂದು ವಿಶ್ಲೇಷಿಸಿದರು. ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಧ್ಯೇಯದಂತೆ ಆಯವ್ಯಯ ಪತ್ರವು ಎಲ್ಲರಿಗೂ ಹತ್ತಿರವಾಗಿದೆ ಎಂದು ನುಡಿದರು.
ಇದನ್ನೂ ಓದಿ: ಈ ವರ್ಷದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ಗಮನಿಸಿ !
ದೇಶದ ಸಾರ್ವಭೌಮತ್ವ, ಏಕತೆಯ ಉದ್ದೇಶವನ್ನು ಎತ್ತಿ ಹಿಡಿಯುವಲ್ಲಿ ಇದು ಸಫಲವಾಗಿದೆ. ದೇಶದ ಪುರಾತನ ಸ್ಥಳಗಳ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದಾರೆ. ಕರ್ನಾಟಕ ರೈಲ್ವೆ ಸ್ಟೇಷನ್ ಕಾರಿಡಾರ್ ಘೋಷಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ 25 ಕೋಟಿ ಜನರು ಬಡತನ ರೇಖೆಯಿಂದ ಮೇಲೆ ಬಂದಿದ್ದಾರೆ ಎಂದು ವಿವರಿಸಿದರು.
ಇದನ್ನೂ ಓದಿ: ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ತಂಬಾಕು ಉತ್ಪನ್ನ ಜಾಹೀರಾತಿಗೆ ಬ್ರೇಕ್
ರೈತರ ಆದಾಯ ದ್ವಿಗುಣಗೊಳಿಸಲು ಹೆಚ್ಚಿನ ಒತ್ತು ಕೊಡಲಾಗಿದೆ. 500 ಜಲಾಶಯಗಳು ಮತ್ತು ಅಮೃತ ಸರೋವರಗಳ ಅಭಿವೃದ್ಧಿಯ ಮೂಲಕ ಮೀನುಗಾರಿಕೆ ಕ್ಷೇತ್ರವನ್ನು ಬಲಪಡಿಸಲು ಮುಂದಾಗಿದ್ದಾರೆ. ಪಶುಸಂಗೋಪನೆ ಕ್ಷೇತ್ರದಲ್ಲಿ ಉದ್ಯಮಶೀಲತೆ ಅಭಿವೃದ್ಧಿ ಮೂಲಕ ಉದ್ಯೋಗಾವಕಾಶ ಒದಗಿಸಲಾಗುತ್ತದೆ. ತೆಂಗಿನ ಉತ್ಪಾದನೆ ಹೆಚ್ಚಳ ಹಾಗೂ ಒಂದು ಕೋಟಿ ರೈತರು ಸೇರಿ 3 ಕೋಟಿ ಜನರಿಗೆ ನೆರವು ನೀಡುವಂಥದ್ದು, ಭಾರತೀಯ ಗೋಡಂಬಿ ಮತ್ತು ಸ್ಥಳೀಯ ಕೋಕೋವನ್ನು 2030ರ ವೇಳೆಗೆ ಪ್ರೀಮಿಯಂ ಬ್ರ್ಯಾಂಡ್ ಆಗಿ ರೂಪಿಸಲು ಉದ್ದೇಶಿಸಲಾಗಿದೆ. 7 ಹೈಸ್ಪೀಡ್ ರೈಲ್ವೆ ಓಡಾಟಕ್ಕೆ ಮೆಚ್ಚುಗೆ ಸೂಚಿಸಿದರು. ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಇತರ ಪ್ರಮುಖರು ಇದ್ದರು.
Central budget conducive to the all-round development of the country: B.S. Yediyurappa- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











