ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ಗೆದ್ದ ಉಡುಪಿಯ ಹುಡುಗ..!

ಕರ್ನಾಟಕ: Tulu Times | ಅಬುದಾಭಿ ಲೈವ್ ಡ್ರಾದಲ್ಲಿ ಉಡುಪಿಯ ಶಂತನು  ಶೆಟ್ಟಿಗಾರ್‌  ₹49ಕೋಟಿ ಗೆದ್ದು, (20 ಮಿಲಿಯನ್‌ ದಿರಮ್‌ ) ರು. ಮೊತ್ತದ ಲಾಟರಿ ಗೆದ್ದಿದ್ದಾರೆ.

ಮಸ್ಕತ್‌ನಲ್ಲಿ ಉದ್ಯೋಗದಲ್ಲಿರುವ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ ಜ.20 ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದೆ. ಇದರಲ್ಲಿ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು.  ಅರ್ಧ ಹಣ ಅಂದರೆ ಸರಿ ಸುಮಾರು 24.5 ಕೋಟಿ ರು. ಹಣ ಅವರ ಗೆಳೆಯನಿಗೆ ಸಿಗಲಿದೆ ಎನ್ನಲಾಗಿದೆ.

ನಂಬುವುದಕ್ಕೆ ಸಾಧ್ಯವಾಗುತ್ತಿಲ್ಲ..ಶಂತನು ಸಂತಸ!

ಈ ಕುರಿತು ಶಂತನು ಮಾತನಾಡಿ, ‘2021ರಿಂದಲೂ ಬಿಗ್‌ ಟಿಕೆಟ್‌ ರಾಫಲ್‌ಗಳಲ್ಲಿ ಭಾಗವಹಿಸುತ್ತಿದ್ದೆ. ಈ ಗೆಲುವು ತುಂಬಾ ಅನಿರೀಕ್ಷಿತವಾಗಿತ್ತು. ನನಗೆ ಸಿಕ್ಕಿರುವುದಕ್ಕೆ ಖುಷಿಯಾಗಿದ್ದು, ನಂಬುವುದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಹರ್ಷಿಸಿದ್ದಾರೆ. ಇದೇ ವೇಳೆ ಅವರು, ‘ ಬಹುಮಾನದಿಂದ ಬಂದ ಹಣವನ್ನು ಹೇಗೆ ಬಳಸಬೇಕೆಂದು ಇದುವರೆಗೆ ಯೋಚಿಸಿಲ್ಲ’ ಎಂದಿದ್ದಾರೆ. ಇದು ದೇಶದ ಪ್ರಮುಖ ಲಾಟರಿ ಡ್ರಾಗಳಲ್ಲಿ ಒಂದಾಗಿದೆ. 1992ರಲ್ಲಿ ಯುಎಇನಲ್ಲಿ ಬಿಗ್‌ ಟಿಕೆಟ್‌ ಪ್ರಾರಂಭವಾಯಿತು. ಮೊದಲು, 2 ಕೋಟಿ ರು.ನಿಂದ ಆರಂಭವಾಗಿತ್ತು. ಇದೀಗ  49 ಕೋಟಿ ರು.ಗೆ ಲಾಟರಿ  ಏರಿಕೆಯಾಗಿದೆ.

ಪುತ್ತೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಪುತ್ತೂರು: ತಲೆಪ್ಪಾಡಿ ಬೆಟ್ಟಂಪಾಡಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೊಹಮ್ಮದ್ ಸುಹ್ಮಬ್ (19) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

ಕೆಲವು ದಿನಗಳ ಹಿಂದೆ ಬೆಳಿಗ್ಗೆ ಮೊಹಮ್ಮದ್ ಸುಹ್ಮಬ್ ಯಾವುದೋ ಕಾರಣದಿಂದಾಗಿ ಮನನೊಂದು ಇಲಿ ಪಾಷಣ ಸೇವಿಸಿದ್ದಾನೆ. ವಿಷಯ ತಿಳಿದು ಮನೆಯವರು ಚಿಕಿತ್ಸೆ ಬಗ್ಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಸುಹ್ಮಬ್ ಯುವಕ ಪಿಯುಸಿವರೆಗೆ ಓದಿದ್ದು, ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮೊಹಮ್ಮದ್ ಸುಹ್ಮಬ್ ಚಿಕಿತ್ಸೆಗೆ ಫಲಿಸದೇ ಬೆಳಿಗ್ಗೆ 05.15 ಗಂಟೆಗೆ ಮೃತಪಟ್ಟಿದ್ದಾನೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣಾ UDR ನಂ 06/2026 ಕಲಂ 194 ಬಿಎನ್ ಎಸ್ ಎಸ್ 2023ಯಂತೆ ಪ್ರಕರಣ ದಾಖಲಾಗಿದೆ. ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಫಾದರ್ ಮುಲ್ಲಾರ್ ಆಸ್ಪತ್ರೆಗೆ ಕಳುಹಿಸಲಾಗಿತ್ತು.

Udupi boy wins Rs 49 crore in Big Ticket draw..!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page