ಮಂಗಳೂರು: Tulu Times | ಮಂಗಳೂರಿನಲ್ಲಿ ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿ ನಾಪತ್ತೆಯಾಗಿರುವ ಕುರಿತು ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗದೀಶ್ ಆಚಾರ್ಯ(61) ನಾಪತ್ತೆಯಾದ ವ್ಯಕ್ತಿ. ಇವರು ಜ.29ರಂದು ಬೆಳಗ್ಗೆ 8ಕ್ಕೆ ಕೊಟ್ಟಾರ ಚೌಕಿ ಬಳಿ ಕಾರ್ ವಾಶ್ ಸರ್ವಿಸ್ ನಲ್ಲಿ ಕೆಲಸಕ್ಕೆಂದು ಹೋಗಿದ್ದಾರೆ. ನಂತರ, ಮಧ್ಯಾಹ್ನ ಊಟಕ್ಕೆ ಬಂದು ಊಟ ಮಾಡಿ ವಾಪಸ್ ಕೆಲಸಕ್ಕೆಂದು ಹೋಗಿರುವವರು ನಾಪತ್ತೆಯಾಗಿದ್ದಾರೆ. ಮನೆಗೆ ಬಾರದೇ ಇದ್ದಾಗ ಮನೆಯವರು ಗಾಬರಿಯಾಗಿದ್ದಾರೆ, ಸಮಯ ಕಳೆದು ಕೆಲಸದ ಸ್ಥಳಕ್ಕೆ ಬಂದು ವಿಚಾರಿಸಿದಾಗ ಅವರು ಕೆಲಸಕ್ಕೆ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ ಅಂತ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಕೇಂದ್ರ ಬಜೆಟ್ ಜನಹಿತದಿಂದ ಕೂಡಿದೆ: ಆರ್.ಅಶೋಕ್
ಮಂಗಳೂರು: ನೇಪಾಳಿ ಸೈಬರ್ ಕ್ರೈಂ ಗ್ಯಾಂಗ್ ಬಂಧನ
ಮಂಗಳೂರು: ಪ್ರತ್ಯೇಕ ಪ್ರಕರಣದಲ್ಲಿ, ಭಾರತೀಯರನ್ನು ಗುರಿಯಾಗಿಸಿ ವಂಚನೆ ನಡೆಸಿ, ನೇಪಾಳದಲ್ಲಿದ್ದುಕೊಂಡು ಆನ್‌ಲೈನ್ ಹೂಡಿಕೆ ನೆಪದಲ್ಲಿ ಜನರನ್ನು ವಂಚಿಸಿರುವ ಆರೋಪಿಗಳನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ
11 ಆರೋಪಿಗಳು ಅರೆಸ್ಟ್!
ವಂಚನೆ ನಡೆಸಿರುವ ತಂಡವನ್ನು ಭೇದಿಸಿರುವ ಇಲ್ಲಿನ ಸೆನ್ ಕ್ರೈಂ ಠಾಣೆಯ ಪೊಲೀಸರು ಈ ಸಂಬಂಧ 11 ಆರೋಪಿಗಳನ್ನು ಬಂಧಿಸಿದ್ದು, ಇವರಿಂದ ಒಂದು ಲ್ಯಾಪ್ ಟಾಪ್, ವಿವಿಧ ಕಂಪನಿಗಳ 21 ಮೊಬೈಲ್ ಪೋನ್‌ಗಳು, ವಿವಿಧ ಕಂಪನಿಗಳ 20 ಸಿಮ್ ಕಾರ್ಡ್‌ಗಳು, ಬೇರೆ ಬೇರೆ ಬ್ಯಾಂಕ್‌ಗಳ 20 ಡೆಬಿಟ್ ಕ್ರೆಡಿಟ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 16 ಭಾರತೀಯರು ಹಾಗೂ ಒಬ್ಬ ಚೀನಾ ಪ್ರಜೆ ಸೇರಿ 17 ಮಂದಿ ಸೇರಿಕೊಂಡು ಆನ್‌ಲೈನ್ ಹೂಡಿಕೆ ನೆಪದಲ್ಲಿ ಜನರನ್ನು ವಂಚಿಸುತ್ತಿದ್ದರು. 11 ಆರೋಪಿಗಳನ್ನು ಸೆನ್ ಕ್ರೈಠಾಣೆಯ ಪೊಲೀಸರು ಬಂಧಿಸಿದ್ದಾರೆ. ಐವರು ಭಾರತೀಯ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಚೀನಾದ ಆರೋಪಿಯನ್ನು ನೇಪಾಳದ ಪೊಲೀಸರು ಬಂಧಿಸಿದ್ದಾರೆ. ಗುರುವಾರ ಈ ಕುರಿತು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಬಂಧಿತ ಆರೋಪಿಗಳು ಯಾರು..?
ಗುಜರಾತಿನ ಭಾವನಗರ ಜಿಲ್ಲೆಯ ಮಕವನ್ ವಿಕ್ರಂ (25), ಪಶ್ಚಿಮ ಬಂಗಾಳದ ಕೋಲ್ಕತ್ತದ ಸೌಮ್ಯಾಧಿತ್ಯ ಚಟ್ಟೋಪಾಧ್ಯಾಯ (21), ಜಾರ್ಖಾಂಡ್‌ನ ಸಿಂಗಬುಮ್ ಜಿಲ್ಲೆ ಪುಪ್ಲ ಶಿವ ಕುಮಾರ್ ರಾವ್ (32), ಮಿಥುನ್ ಕುಮಾರ್ ಮಂಗರಾಜ್ (38), ಡಿಯೋಗರ್ ಜಿಲ್ಲೆಯ ರಾಜೇಶ್ ಮಂಡನ್ (30), ಉತ್ತರ ಪ್ರದೇಶದ ಮಾವೋ ಜಿಲ್ಲೆಯ ಗೌರವ್ ಪಾಂಡೆ (24), ಸುಲ್ತಾನ್ ಪುರ್ ಜಿಲ್ಲೆಯ ಹರ್ಷ್ ಮಿಸ್ರಾ (22), ಲಖನೌ ಜಿಲ್ಲೆಯ ಮೊಹಮ್ಮದ್ ಆಕೀಬ್ ಅಲಿ (27), ಝಾನ್ಸಿ ಜಿಲ್ಲೆಯ ನೌಶಾದ್ ಅಲಿ (34), ಬಿಹಾರದ ನಳಂದ ಜಿಲ್ಲೆಯ ರಾಜೀವ್ ರಂಜನ್ ಕುಮಾರ್ (30), ರಾಜಾಸ್ಥಾನದ ಜೈಪುರದ ಓಂ ಪ್ರಕಾಶ್ ಯಾದವ್ (37) ಬಂಧಿತರಾಗಿದ್ದಾರೆ.
Man who went to work in Mangalore goes missing- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











