ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಮಣಿಪಾಲದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಮಣಿಪಾಲ: Tulu Times | ಮಣಿಪಾಲದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿ  ಪರಾರಿಯಾಗಿರುವ ಘಟನೆ ನಡೆದಿದೆ.ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದಲ್ಲಿ  ಕಳ್ಳತನ ನಡೆದಿದೆ.

ಮನೆಯ ಬಾಗಿಲು ಹಾಗೂ ಹೊರಗಿನ ಗೇಟಿಗೆ ಬೀಗ ಹಾಕಿ ಶಿವಳ್ಳಿ ಗ್ರಾಮದ ಅಮಿತಾ ಡ್ಯಾನಿಯಲ್ ಕರ್ಕಡ ಇವರು ಫೆ. 3 ರಂದು ಮಧ್ಯಾಹ್ನ 01.45 ಗಂಟೆಗೆ ತಾಯಿ ಮನೆಗೆ ತೆರಳಿದ್ದರು. ಫೆ. 02ರಂದು ಮಧ್ಯಾಹ್ನ 01.30 ಗಂಟೆಗೆ ಮನೆಯ ಬಾಗಿಲು ತೆರೆದಿರುವುದಾಗಿ ಪಕ್ಕದ ಮನೆಯವರು ಮಾಹಿತಿ ನೀಡಿದ ಹಿನ್ನೆಲೆ ವಿಚಾರ ಗೊತ್ತಾಗಿದೆ. ನಂತರ ಪೊಲೀಸರು ಅಲ್ಲಿಗೆ ಬಂದು ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಮಧ್ಯಾಹ್ನ 02.00 ಗಂಟೆಯ ನಡುವಿನ ಅವಧಿಯಲ್ಲಿ ಅಜ್ಞಾತ ಕಳ್ಳರು ಮನೆಯೊಳಗೆ ಪ್ರವೇಶಿಸಿ ಸುಮಾರು 75 ಗ್ರಾಂ ತೂಕದ, ಅಂದಾಜು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದು ಗೊತ್ತಾಗಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ವಿದ್ಯುತ್‌ ಆಘಾತದಿಂದ ಕಾರ್ಮಿಕ ಸಾವು

ಬೆಳ್ತಂಗಡಿ: ಪ್ರತ್ಯೇಕ ಪ್ರಕರಣದಲ್ಲಿ, ವಿದ್ಯುತ್‌ ಆಘಾತಕ್ಕೆ ಒಳಗಾಗಿ ಪುತ್ತಿಲ ಗ್ರಾಮದ ಕೊಪ್ಪರಿಗೆ ಮಜಲು ಎಂಬಲ್ಲಿ ಚತ್ತೀಸ್ ಗಡ್ ಮೂಲದ ಕಾರ್ಮಿಕ ಶಿವ ಎಕ್ಕ (33) ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ.

ವಿದ್ಯುತ್‌ ಆಘಾತಕ್ಕೆ ಸಿಲುಕಿದ್ದು ಹೇಗೆ..?

ಫೆ. 3 ರಂದು ರಫೀಕ್ ಎಂಬವರು ತಮ್ಮ ತಂದೆಗೆ ಸೇರಿದ ಜಾಗದಲ್ಲಿ ಹಾಳಾದ ಬೋರ್ ವೆಲ್ ಅನ್ನು ರಿಪೇರಿ ಮಾಡಿಸಲುಹಮೀದ್ ಎಂಬವರಿಗೆ ಸೇರಿದ ಬೋರ್ ವೆಲ್ ರಿಂಗ್ ವಾಹನವನ್ನು ಕರೆಸಿ ರಿಪೇರಿ ಮಾಡಿಸಿದಾಗ ಬೋರ್ ವೆಲ್ ಕೆಲಸ ಮುಗಿಸಿದ ಬಳಿಕ ಲಾರಿಯ ಡ್ರಿಲ್ ಮಾಡುವ ಯಂತ್ರವನ್ನು ಅದರ ಚಾಲಕ ಸಂಪತ್ ಕುಮಾರ್ ಜಾಗ್ರತೆ ವಹಿಸದ ನಿರ್ಲಕ್ಷ್ಯತನದಿಂದ ಕೆಳಗೆ ಇಳಿಸಿದ್ದರು.

ಹಾಗಾಗಿ, ವಿದ್ಯುತ್ ಲೈನಿಗೆ ತಾಗಿದೆ ಈ ಸಂದರ್ಭದಲ್ಲಿ ವಾಹನದ ಸಮೀಪ ನೀರಿನಲ್ಲಿ ನಿಂತಿದ್ದ ಕಾರ್ಮಿಕ ಶಿವ ಎಕ್ಕ ವಿದ್ಯುತ್ ಆಘಾತಕ್ಕೆ ಈಡಾಗಿ ಕೆಳಗೆ ಬಿದ್ದಿದ್ದು ಆತನನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆದರೆ ದಾರಿ ಮಧ್ಯೆ ಇವರು ಸಾವನ್ನಪ್ಪಿದ್ದಾರೆ. ಈ ಕುರಿತು ರಫೀಕ್ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Gold ornaments worth lakhs of rupees stolen in Manipal- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 154

You cannot copy content of this page