ಬಂಟ್ವಾಳ: Tulu Times | ಬಂಟ್ವಾಳದಲ್ಲಿ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿದ್ದು, ಬಾಳ್ತಿಲ ಗ್ರಾಮದ ಕಾಂಪುಬೈಲು ಎಂಬಲ್ಲಿ ಮನೆಮಂದಿ ಜಾತ್ರೆಗೆ ತೆರಳಿದ ಸಂದರ್ಭದಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. 9 ಪವನ್ ಚಿನ್ನವನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಳ್ಳತನ ನಡೆದದ್ದು ಹೇಗೆ..?
ಕಶೇಕೋಡಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಜಾತ್ರೋತ್ಸವ ಇದ್ದ ಸಂದರ್ಭದಲ್ಲಿ ಪತ್ನಿಯೊಂದಿಗೆ ಮನೆಗೆ ಬೀಗ ಹಾಕಿ ಸಂಜೆ 6.45 ಕ್ಕೆ ಮನೆಯಿಂದ ಹೊರಟಿದ್ದರು. ಜಾತ್ರೆ ಮುಗಿಸಿ ಮನೆಗೆ ವಾಪಸ್ ಬಂದಾಗ ರಾತ್ರಿ ಸುಮಾರು 10.30 ಆಗಿತ್ತು. ಈ ವೇಳೆ ಮನೆಯ ಹಿಂಬದಿಯ ಬಾಗಿಲು ತೆರೆದಿರುವುದನ್ನು ನೋಡಿದಾಗ ಕಳ್ಳರು ಬಂದಿರುವುದು ಗೊತ್ತಾಗಿದೆ. ಬಾಗಿಲಿನ ಚಿಲಕವನ್ನು ಮುರಿದು ಮನೆಯೊಳಗೆ ಪ್ರವೇಶ ಮಾಡಿರುವುದು ತಿಳಿದುಬಂದಿದೆ.
5 ಪವನ್ ತೂಕದ ಒಂದು ಹವಳದ ಮಾಲೆ, ಎರಡೂವರೆ ಪವನ್ ತೂಕದ ಒಂದು ಮುತ್ತಿನ ಸರ, ಒಂದೂವರೆ ಪವನ್ ತೂಕದ ಬೆಂಡೋಲೆ, ಜುಂಕಿ, 5000 ರೂ ನಗದು ಹಣವನ್ನು ಕಳ್ಳರು ಕದ್ದಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಕಪಾಟಿನಲ್ಲಿದ್ದ ಡಬ್ಬಿಗಳು ಮಂಚದ ಮೇಲೆ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ.
ಮಣಿಪಾಲದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು
ಮಣಿಪಾಲ: ಪ್ರತ್ಯೇಕ ಪ್ರಕರಣದಲ್ಲಿ, ಮಣಿಪಾಲದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಳ್ಳಿ ಗ್ರಾಮದಲ್ಲಿ ಕಳ್ಳತನ ನಡೆದಿದೆ.
ಮನೆಯ ಬಾಗಿಲು ಹಾಗೂ ಹೊರಗಿನ ಗೇಟಿಗೆ ಬೀಗ ಹಾಕಿ ಶಿವಳ್ಳಿ ಗ್ರಾಮದ ಅಮಿತಾ ಡ್ಯಾನಿಯಲ್ ಕರ್ಕಡ ಇವರು ಫೆ. 3 ರಂದು ಮಧ್ಯಾಹ್ನ 01.45 ಗಂಟೆಗೆ ತಾಯಿ ಮನೆಗೆ ತೆರಳಿದ್ದರು. ಫೆ. 02ರಂದು ಮಧ್ಯಾಹ್ನ 01.30 ಗಂಟೆಗೆ ಮನೆಯ ಬಾಗಿಲು ತೆರೆದಿರುವುದಾಗಿ ಪಕ್ಕದ ಮನೆಯವರು ಮಾಹಿತಿ ನೀಡಿದ ಹಿನ್ನೆಲೆ ವಿಚಾರ ಗೊತ್ತಾಗಿದೆ. ನಂತರ ಪೊಲೀಸರು ಅಲ್ಲಿಗೆ ಬಂದು ಪರಿಶೀಲನೆ ನಡೆಸಿದ್ದಾರೆ. I
ಈ ವೇಳೆ ಮಧ್ಯಾಹ್ನ 02.00 ಗಂಟೆಯ ನಡುವಿನ ಅವಧಿಯಲ್ಲಿ ಅಜ್ಞಾತ ಕಳ್ಳರು ಮನೆಯೊಳಗೆ ಪ್ರವೇಶಿಸಿ ಸುಮಾರು 75 ಗ್ರಾಂ ತೂಕದ, ಅಂದಾಜು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವುದು ಗೊತ್ತಾಗಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Gold jewellery worth Rs 8 lakh stolen in Bantwal- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











