ಉಡುಪಿ: Tulu Times | ಅಪ್ರಾಪ್ತನಿಗೆ ಸ್ಕೂಟರ್ ನೀಡಿದ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆರ್ಗಾ ಕಡೆಯಿಂದ ಪರ್ಕಳ ಕಡೆಗೆ ಸ್ಕೂಟರ್ ಚಲಾಯಿಸಿಕೊಂಡು ಬರುತ್ತಿದ್ದ ಶ್ರೇಯಸ್ (16) ನನ್ನು ಪರ್ಕಳ ಜಂಕ್ಷನ್ ಬಳಿ ಮಣಿಪಾಲ ಪೊಲೀಸರು ಹಿಡಿದಿದ್ದಾರೆ. ಆತ ಅಪ್ರಾಪ್ತನಾಗಿದ್ದರಿಂದ ಚಾಲನಾ ಪರವಾನಿಗೆಯೂ ಇರಲಿಲ್ಲ. ಹಾಗಾಗಿ, ಸ್ಕೂಟರ್ ಸವಾರಿ ಮಾಡಲು ನೀಡಿದ ಸ್ಕೂಟರಿನ ಮಾಲಕಿ ಉಷಾ(45) ಅವರ ಮೇಲೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಅದೇ ರಸ್ತೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಶ್ರೇಯಸ್ ನನ್ನು ವಿಚಾರಿಸಿದ್ದಾರೆ. ಈ ವೇಳೆ ಆತ ಮಾಲಕಿಯ ಬಗ್ಗೆ ಹೇಳಿದ್ದಾನೆ.
ಇದನ್ನೂ ಓದಿ: ಡಿಜಿಟಲ್ ವಂಚನೆಗೆ ಒಳಗಾದವರಿಗೆ ಆರ್ ಬಿಐಯಿಂದ ಪರಿಹಾರ
ಬೆಳ್ತಂಗಡಿ: ವಿದ್ಯಾರ್ಥಿನಿಯನ್ನು ಹಾಡಹಗಲೇ ಕಿಡ್ನಾಪ್ ಮಾಡುವ ಯತ್ನ
ಬೆಳ್ತಂಗಡಿ: ಪ್ರತ್ಯೇಕ ಪ್ರಕರಣದಲ್ಲಿ,ಹಾಡಹಗಲೇ ಕಿಡ್ನಾಪ್ ಕೇಸ್ ಹೆಚ್ಚಾಗ್ತಾ ಇದೆ. ಸ್ಕೂಟರ್ ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಕಾಶಿಬೆಟ್ಟು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎಂದಿನಂತೆ ಫೆ.9 ರಂದು ಬೆಳಗ್ಗೆ ಸುಮಾರು 8:30 ಕ್ಕೆ ತಂದೆಯ ಸ್ಕೂಟರ್ ನಲ್ಲಿ ಸಂತೆಕಟ್ಟೆ ಬಸ್ ಹತ್ತಲು ಹೋಗುವಾಗ ಈ ಘಟನೆ ನಡೆದಿರುವುದು ವರದಿಯಾಗಿದೆ.
ಅಪರಿಚಿತ ನಂಬರ್ ಪ್ಲೇಟ್ ಗೆ ಬಟ್ಟೆಯನ್ನು ಕಟ್ಟಿ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಸ್ಕೂಟರ್ ಅಡ್ಡಗಟ್ಟಿ, ವಿದ್ಯಾರ್ಥಿನಿಯನ್ನು ಕಾರಿನೊಳಗೆ ಎಳೆದು ತಂದಾಗ ಬೊಬ್ಬೆ ಹೊಡೆದು ವಿರೋಧ ವ್ಯಕ್ತಪಡಿಸಿ ಹೊರಬಂದಾಗ ಹಿಂಭಾಗದಿಂದ ಸ್ಕೂಟರ್ ಬರುವುದನ್ನು ನೋಡಿ ಚೂರಿಯಿಂದ ಕೈಗೆ, ಬೆರಳಿಗೆ ಚುಚ್ಚಿ ಕಾಲೇಜು ಬ್ಯಾಗ್ ಹಿಡಿದುಕೊಂಡು ಮತ್ತೆ ಕಾರಿನೊಂದಿಗೆ ಅಪರಿಚಿತರು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಆಗಮಿಸಿ ವಿದ್ಯಾರ್ಥಿನಿ ಬಳಿಯಿಂದ ಮಾಹಿತಿ ಪಡೆದುಕೊಂಡು ತನಿಖೆ ಚುರುಕುಗೊಳಿಸಿರುವುದು ತಿಳಿದು ಬಂದಿದೆ.
Udupi: Case registered on charges of giving a scooter to a minor!- ತುಳುಟೈಮ್ಸ್
ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess











