ಬ್ರೇಕಿಂಗ್ ನ್ಯೂಸ್
ಕರ್ನಾಟಕ

ಕಾಶಿಯಲ್ಲಿ ಲಕ್ಷ್ಮಿಪುತ್ರ ಸಿನಿಮಾತಂಡ…ಎಮೋಷನಲ್ ಕ್ಲೈಮ್ಯಾಕ್ಸ್ ಶೂಟಿಂಗ್ ಮುಗಿಸಿದ ಚಿಕ್ಕಣ್ಣ..!

ಸ್ಯಾಂಡಲ್‌ ವುಡ್:‌ Tulu Times | ಹೊಸ ಮುಖಗಳನ್ನು ಚಿತ್ರರಂಗಕ್ಕೆ ಪರಿಚಯಿಸುವಲ್ಲಿ ಪಂಟರ್ ಎನಿಸಿಕೊಂಡಿರುವ ನಿರ್ದೇಶಕ ಎಪಿ ಅರ್ಜುನ್, ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಈ ಕಾಂಬೋದಲ್ಲಿ ಲಕ್ಷ್ಮಿಪುತ್ರ ಸಿನಿಮಾ ತಯಾರಾಗ್ತಿದೆ.

ಎಪಿ ಅರ್ಜುನ್ ಕಥೆ ಬರೆದು ತಮ್ಮದೇ ಎಪಿ ಅರ್ಜುನ್ ಫಿಲ್ಮ್ ಬ್ಯಾನರ್ ನಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಫಸ್ಟ್ ಲುಕ್ ಮೂಲಕ ಕುತೂಹಲ ಹೆಚ್ಚಿಸಿರುವ ಲಕ್ಷ್ಮಿಪುತ್ರ ಸಿನಿಮಾದ ಶೂಟಿಂಗ್ ಬಗ್ಗೆ ಕ್ರೇಜಿ ಅಪ್ ಡೇಟ್ ಸಿಕ್ಕಿದೆ. ಲಕ್ಷ್ಮಿಪುತ್ರ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಕಾಶಿಯಲ್ಲಿ ಅದ್ದೂರಿಯಾಗಿ ನಡೆದಿದೆ. ಮೂರು ದಿನಗಳ ಕಾಲ ನಡೆದ ಶೂಟಿಂಗ್ ನಲ್ಲಿ ನಾಯಕ ಚಿಕ್ಕಣ್ಣ, ತಾರಾ ಸೇರಿದಂತೆ ಅರವತ್ತಕ್ಕೂ ಹೆಚ್ಚು ಕಲಾವಿದರು ಭಾಗಿಯಾಗಿದ್ದರು. ಕಾಶಿಯ ಮಣಿಕರ್ಣಿಕಾ ಘಾಟ್, ಗಂಗಾ‌ನದಿ ತೀರ, ಬನರಾಸ್, ಕಾಶಿ ಪ್ರಮುಖ ಬೀದಿಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಇದನ್ನೂ ಓದಿ:‌ ಮರುಪ್ರಾರಂಭಗೊಳ್ಳಲಿದೆ ಮೈಸೂರು ಸ್ಯಾಂಡಲ್ ಸೋಪ್ : ನಟಿ ತಮನ್ನಾ ಬ್ರಾಂಡ್ ಅಂಬಾಸಿಡರ್

ಎರಡು ದಿನದ ಮಾತಿನ ಭಾಗದ ಚಿತ್ರೀಕರಣ ಬಾಕಿ ಇದ್ದು, ಶೀಘ್ರದಲ್ಲೇ ಹಾಡುಗಳ ಶೂಟಿಂಗ್ ‌ನ್ನು ಚಿತ್ರತಂಡ ಕೈಗೆತ್ತಿಕೊಳ್ಳಲಿದೆ. ಮೇ ಅಥವಾ ಜೂನ್ ತಿಂಗಳಲ್ಲಿ ಲಕ್ಷ್ಮಿಪುತ್ರ ಸಿನಿಮಾವನ್ನು ಥಿಯೇಟರ್ ಅಂಗಳಕ್ಕೆ ಇಳಿಸಲು ಟೀಂ ಯೋಜನೆ ಹಾಕಿಕೊಂಡಿದೆ. ವಿಜಯ್ ಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿರುವ ಸಿನಿಮಾದಲ್ಲಿ ಚಿಕ್ಕಣ್ಣನಿಗೆ ಜೋಡಿಯಾಗಿ ನವ ನಟಿ ವಂದಿತಾ ಅಭಿನಯಿಸುತ್ತಿದ್ದಾರೆ. ತಾರಾ, ಕುರಿ ಪ್ರತಾಪ್, ಧರ್ಮಣ್ಣ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿದೆ.

ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ಎ.ಪಿ.ಅರ್ಜುನ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಆ್ಯಕ್ಷನ್ ಸೀಕ್ವೆನ್ಸ್‌ಗಳಿಗೆ ಮಾಸ್ ಮಾದ ನಿರ್ದೇಶನ ಮಾಡಿದ್ದಾರೆ. ಗಿರೀಶ್ ಆರ್.ಗೌಡ ಅವರ ಕ್ಯಾಮೆರಾ ಹಿಡಿದಿದ್ದಾರೆ. ಎ.ಪಿ.ಅರ್ಜುನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ಎ.ಪಿ.ಅರ್ಜುನ್ ಪತ್ನಿ ಅನ್ನಪೂರ್ಣ ಅರ್ಜುನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರವಿಕಿರಣ್ ಗೌಡ ಸಹ-ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ.

ಇದನ್ನೂ ಓದಿ:‌ ಜಾಗತಿಕ ಆರ್ಥಿಕತೆ ಜೀವ ವೈವಿಧ್ಯ ನಾಶಕ್ಕೆ ಕಾರಣ; ಮಾನವ ಜೀವನಕ್ಕೆ ಅಪಾಯ

Lakshmiputra film crew in Kashi…Chikkanna has completed the emotional climax shooting..!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 153

You cannot copy content of this page