ಬ್ರೇಕಿಂಗ್ ನ್ಯೂಸ್
ಕರ್ನಾಟಕಮಂಗಳೂರು

ಮಂಗಳೂರು: ಬೈಕ್‌ ಗೆ ಡಿಕ್ಕಿ ಹೊಡೆದ ಬಸ್‌..ಪ್ರಾಣಾಪಾಯದಿಂದ ಪಾರು

ಮಂಗಳೂರು: Tulu Times | ನಂತೂರಿನಲ್ಲಿ ಯುವತಿಯನ್ನು ಬಲಿ ಪಡೆದಿದ್ದ ಬಸ್ ನಿಂದ ಮತ್ತೊಂದು ಅಪಘಾತ ಸಂಭವಿಸಿದ್ದು, ಬಸ್‌ ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಈ ಬಸ್‌ ಈ ಹಿಂದೆ ಮಂಗಳೂರಿನ  ನಂತೂರಿನಲ್ಲಿ ಯುವತಿಯನ್ನು ಬಲಿ ಪಡೆದಿದ್ದ ಬಸ್ ಎನ್ನಲಾಗಿದೆ. ಈ ಬಸ್ ಸೋಮವಾರ ವಾಮಂಜೂರು ಮೂಲಕ ಕೈಕಂಬಕ್ಕೆ ಹೋ ಗಿದ್ದ ಬಸ್ ಬೈಕ್ ಗೆ ಢಿಕ್ಕಿಯಾದ ಪರಿಣಾಮ ಬೈಕ್ ಬಸ್ ನ ಅಡಿಗೆ ಬಿದ್ದಿದೆ. ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಳೆದ ಬುಧವಾರ ಸ್ಕೂಟರ್ ಗೆ ಡಿಕ್ಕಿಪಡಿಸಿದ್ದ ಚಾಲಕ ಸೋಮವಾರ ಚಾಲನೆ ಮಾಡುತ್ತಿರಲಿಲ್ಲ. ನಂತೂರು ಘಟನೆ ಬಳಿಕ ಆ ಚಾಲಕನನ್ನು ಬಂಧಿಸಲಾಗಿತ್ತು. ಕಳೆದ ಬುಧವಾರ  ಸ್ಕೂಟರ್ ಗೆ ಡಿಕ್ಕಿಪಡಿಸಿ, ಯುವತಿ ಸಾವನ್ನಪ್ಪಿದ್ದರು. ನಂತರ ಚಾಲಕನನ್ನು ಬಂಧಿಸಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ.

ಉಡುಪಿ: ಪ್ರಾರ್ಚೂನರ್ ಕಾರು ಚರಂಡಿಗೆ ಪಲ್ಟಿ: ವಿದ್ಯಾರ್ಥಿಗಳು ಗಂಭೀರ

ಉಡುಪಿ: ಪ್ರತ್ಯೇಕ ಪ್ರಕರಣಗಳಲ್ಲಿ,  ಚಾಲಕನ ನಿಯಂತ್ರಣ ತಪ್ಪಿ ಪ್ರಾರ್ಚೂನರ್ ಕಾರು ಚರಂಡಿಗೆ ಪಲ್ಟಿಯಾಗಿ ಆರು ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

ಘಟನೆಯು ರಾಷ್ಟ್ರೀಯ ಹೆದ್ದಾರಿ-66ರ ಕುಂದಾಪುರ ತಾಲೂಕಿನ ಕನ್ನುಕರೆ, ನವಶಕ್ತಿ ಕಲ್ಯಾಣ ಮಂಟಪದ ಎದುರು ನಡೆದಿದೆ. ಕಾರಿನಲ್ಲಿ ಮಹಾರಾಷ್ಟ್ರದ ಪುಣೆಯ ಲಾ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎನ್ನಲಾಗಿದೆ. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ವಾಪಸಾಗುತ್ತಿದ್ದವೇಳೆ ಘಟನೆ ನಡೆದಿದೆ. ಜ.31ರಂದು ಎರಡು ಕಾರುಗಳಲ್ಲಿ ಪ್ರವಾಸ ಹೊರಟಿದ್ದಾರೆ. ಒಟ್ಟು 12 ಮಂದಿ ವಿದ್ಯಾರ್ಥಿಗಳು ಹೊರಟಿದ್ದರು.

ತೆಕ್ಕಟ್ಟೆ ಸಮೀಪದ ಕನ್ನುಕರೆ ಪ್ರದೇಶದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಹಾರಿ ವಿರುದ್ಧ ದಿಕ್ಕಿನ ರಸ್ತೆಯ ಚರಂಡಿಗೆ ಕಾರು ಪಲ್ಟಿ ಹೊಡೆದಿದೆ. ಈ ಕಾರಿನಲ್ಲಿ ಚಾಲಕ ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಪುಯಾಣಿಸುತ್ತಿದ್ದರು. ಅಪಘಾತದ ಪರಿಣಾಮ ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ.ಅಪಘಾತಕ್ಕೆ ಚಾಲಕನ ಅತೀವೇಗ ಮತ್ತು ಅಜಾಗರೂಕತೆ ಕಾರಣವಾಗಿದೆ. ಗಾಯಾಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ವಿದ್ಯಾರ್ಥಿಗಳು ಮದ್ಯಪಾನ ಸೇವಿಸಿರಬಹುದು ಎಂದು ಮಾಹಿತಿ ಇದೆ. ಸ್ಥಳಕ್ಕೆ ಕೋಟಿ ಪೊಲೀಸ್ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆರ್. ಅವರು ಭೇಟಿ ನೀಡಿದ್ದಾರೆ.

Mangalore: Bus hits bike .. escapes with life- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 160

You cannot copy content of this page