ಬ್ರೇಕಿಂಗ್ ನ್ಯೂಸ್
ಕರಾವಳಿಕರ್ನಾಟಕ

ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಉಡುಪಿಯ ಯುವಕ ಸಾವು

ಉಡುಪಿ: Tulu Times | ಓಮನ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಉಡುಪಿಯ ಯುವಕ ಸಾವನ್ನಪ್ಪಿರವ ಘಟನೆ ನಡೆದಿದೆ.
ಕಾಪು ಉಚ್ಚಿಲ ಸಮೀಪದ ಕಲತ್ತೂರು ನಿವಾಸಿ ಚೇತನ್ (26) ಮೃತ ಯುವಕ ಎನ್ನಲಾಗಿದೆ.  ಅಪಘಾತದಲ್ಲಿ ಒಟ್ಟು ಮೂವರು ಸಾವನ್ನಪ್ಪಿದ್ದಾರೆ.  ಮೂವರು ಗಾಯಗೊಂಡಿದ್ದು,  ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತ ಸಂಭವಿಸಿದ್ದು ಹೇಗೆ..?

ಫೆ. 9 ರಂದು ಮುಂಜಾನೆ ಓಮನ್‌ನ ಉತ್ತರ ಅಲ್ ಬಟಿನಾ ಗವರ್ನರೇಟ್‌ನ ಲಿವಾ ವಿಲಾಯತ್‌ನಲ್ಲಿ ಸರಣಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಅವಶೇಷಗಳಲ್ಲಿ ಸಿಲುಕಿದ್ದವರಿಗೆ ರಕ್ಷಣಾ ಸಿಬ್ಬಂದಿ ಸಹಾಯ ಮಾಡಿದ್ದಾರೆ.   ವೈದ್ಯಕೀಯ ತಂಡಗಳು ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಅನಂತರ, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಈ ಕುರಿತು ನಾಗರಿಕ ರಕ್ಷಣಾ ಮತ್ತು ಆಂಬ್ಯುಲೆನ್ಸ್ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ಧೃಡಪಡಿಸಿದ್ದಾರೆ.

ಉಡುಪಿ: ಪ್ರಾರ್ಚೂನರ್ ಕಾರು ಚರಂಡಿಗೆ ಪಲ್ಟಿ: ವಿದ್ಯಾರ್ಥಿಗಳು ಗಂಭೀರ

ಉಡುಪಿ: ಪ್ರತ್ಯೇಕ ಪ್ರಕರಣಗಳಲ್ಲಿ, ಚಾಲಕನ ನಿಯಂತ್ರಣ ತಪ್ಪಿ ಪ್ರಾರ್ಚೂನರ್ ಕಾರು ಚರಂಡಿಗೆ ಪಲ್ಟಿಯಾಗಿ ಆರು ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ.

ಘಟನೆಯು ರಾಷ್ಟ್ರೀಯ ಹೆದ್ದಾರಿ-66ರ ಕುಂದಾಪುರ ತಾಲೂಕಿನ ಕನ್ನುಕರೆ, ನವಶಕ್ತಿ ಕಲ್ಯಾಣ ಮಂಟಪದ ಎದುರು ನಡೆದಿದೆ. ಕಾರಿನಲ್ಲಿ ಮಹಾರಾಷ್ಟ್ರದ ಪುಣೆಯ ಲಾ ಕಾಲೇಜು ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎನ್ನಲಾಗಿದೆ. ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಪುಣೆಗೆ ವಾಪಸಾಗುತ್ತಿದ್ದವೇಳೆ ಘಟನೆ ನಡೆದಿದೆ. ಜ.31ರಂದು ಎರಡು ಕಾರುಗಳಲ್ಲಿ ಪ್ರವಾಸ ಹೊರಟಿದ್ದಾರೆ. ಒಟ್ಟು 12 ಮಂದಿ ವಿದ್ಯಾರ್ಥಿಗಳು ಹೊರಟಿದ್ದರು,

ತೆಕ್ಕಟ್ಟೆ ಸಮೀಪದ ಕನ್ನುಕರೆ ಪ್ರದೇಶದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಹಾರಿ ವಿರುದ್ದ ದಿಕ್ಕಿನ ರಸ್ತೆಯ ಚರಂಡಿಗೆ ಕಾರು ಪಲ್ಟಿ ಹೊಡೆದಿದೆ. ಈ ಕಾರಿನಲ್ಲಿ ಚಾಲಕ ಸೇರಿದಂತೆ ಆರು ಮಂದಿ ವಿದ್ಯಾರ್ಥಿಗಳು ಪುಯಾಣಿಸುತ್ತಿದ್ದರು. ಅಪಘಾತದ ಪರಿಣಾಮ ಎಲ್ಲರೂ ಗಂಭೀರ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಚಾಲಕನ ಅತೀವೇಗ ಮತ್ತು ಅಜಾಗರೂಕತೆ ಕಾರಣವಾಗಿದೆ. ಗಾಯಾಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ವಿದ್ಯಾರ್ಥಿಗಳು ಮದ್ಯಪಾನ ಸೇವಿಸಿರಬಹುದು ಎಂದು ಮಾಹಿತಿ ಇದೆ. ಸ್ಥಳಕ್ಕೆ ಕೋಟಿ ಪೊಲೀಸ್ ಠಾಣಾಧಿಕಾರಿ ಪ್ರವೀಣ್ ಕುಮಾರ್ ಆರ್. ಅವರು ಭೇಟಿ ನೀಡಿದ್ದಾರೆ.

Udupi youth dies in horrific series of road accidents- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

 

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 168

You cannot copy content of this page