ಬ್ರೇಕಿಂಗ್ ನ್ಯೂಸ್
ಕ್ರೀಡೆದೇಶ

ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪ್ರದಾನ

Olympicನಲ್ಲಿ ಚಿನ್ನಗೆದ್ದ ನೀರಜ್‌ ಚೋಪ್ರಾ ಅವರಿಗೆ ಮಹತ್ತರ ಗೌರವ ಸಂದಿದೆ. ಭಾರತದ ಗೋಲ್ಡನ್ ಬಾಯ್ ಎಂದೇ ಖ್ಯಾತರಾಗಿರುವ ಜಾವೆಲಿನ್ ಥ್ರೋ ಹೀರೋ ನೀರಜ್ ಅವರಿಗೆ ಪ್ರಾದೇಶಿಕ ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆಯನ್ನು ಪ್ರದಾನ ಮಾಡಲಾಗಿದೆ.

ಭಾರತವನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮತ್ತು ರಾಷ್ಟ್ರಕ್ಕೆ ನೀಡಿದ ಕೊಡುಗೆಗಳಿಗಾಗಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆಯನ್ನು ಪ್ರದಾನ ಮಾಡಲಾಯಿತು. ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಾದೇಶಿಕ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೀರಜ್ ಚೋಪ್ರಾ​ಗೆ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆಯ ಚಿಹ್ನೆಯನ್ನು ಪ್ರದಾನ ಮಾಡಿದರು.

ನೀರಜ್ ಚೋಪ್ರಾ 2016 ರಲ್ಲಿ ನೈಬ್ ಸುಬೇದಾರ್ ಆಗಿ ಭಾರತೀಯ ಸೇನೆಗೆ ಸೇರಿದ್ದರು. 2021 ರಲ್ಲಿ ಅವರಿಗೆ ಸುಬೇದಾರ್ ಹುದ್ದೆಗೆ ಬಡ್ತಿ ನೀಡಲಾಯಿತು. ಈಗ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆಯನ್ನು ಪ್ರದಾನ ಮಾಡಲಾಗಿದೆ. ಮತ್ತು ಪಡೆಯ ಹಲವಾರು ಹಿರಿಯ ಅಧಿಕಾರಿಗಳು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಮತ್ತು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ ಕಳೆದ ಒಂಬತ್ತು ವರ್ಷಗಳಿಂದ ಭಾರತೀಯ ಸೇನೆಯಲ್ಲಿದ್ದಾರೆ.

ಡಿಸೆಂಬರ್ 24, 1997 ರಂದು ಹರಿಯಾಣದ ಪಾಣಿಪತ್‌ನ ಖಂದ್ರಾ ಗ್ರಾಮದಲ್ಲಿ ಜನಿಸಿದ ನೀರಜ್ ಚೋಪ್ರಾ, 2020 ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವೆಲಿನ್ ಥ್ರೋನಲ್ಲಿ ಅತೀ ದೂರ ಎಸೆದು ಚಿನ್ನದ ಪದಕಕ್ಕೆ ಕೊರಳೊಡ್ಡಿದರು.

ಇದನ್ನೂ ಓದಿ: brahMos ಕ್ಷಿಪಣಿ ಸಾಮರ್ಥ್ಯ ಮತ್ತಷ್ಟು ಹೆಚ್ಚಳ; ಹೇಗಿದೆ ಗೊತ್ತಾ ಬ್ರಹ್ಮೋಸ್ ಪವರ್‌?

=============

 

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಚಾನಲ್ ಕ್ಲಿಕ್ ಮಾಡಿ:https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 23

You cannot copy content of this page