ಬ್ರೇಕಿಂಗ್ ನ್ಯೂಸ್
ಕರ್ನಾಟಕತುಳು ಟಾಕೀಸ್

ವೀರ ಕಂಬಳ ಟ್ರೈಲರ್ ರಿಲೀಸ್..ಮತ್ತೊಮ್ಮೆ ತುಳುನಾಡಿನ ವೈಭವ!

ಕರ್ನಾಟಕ: Tulu Times | ತುಳುನಾಡಿನ  ಕಥೆಯನ್ನೊತ್ತ ಮತ್ತೊಂದು ಸಿನಿಮಾ ವೀರ ಕಂಬಳ. ಈ ಸಿನಿಮಾದ ಟ್ರೈಲರ್ ಬಿಡುಗಡೆ ಅದ್ಧೂರಿಯಾಗಿ ನಡೆಯಿತು. ಕಂಬಳವನ್ನು ದೃಶ್ಯಗಳಲ್ಲಿ ತೋರಿಸುವ ಪ್ರಯತ್ನ ಯಾರೂ ಮಾಡಲಿಲ್ಲ.  ಇದೀಗ ಅದೇ ಪ್ರಯತ್ನ ಚಿತ್ರತಂಡವೊಂದು ಮಾಡಿದೆ.

ಮೂಲತಃ ದಕ್ಷಿಣ ಕನ್ನಡ ಭಾಗದೊಂದಿಗೆ ಕರುಳುಬಳ್ಳಿಯ ಬಂಧ ಹೊಂದಿರುವ ರಾಜೇಂದ್ರ ಸಿಂಗ್ ಬಾಬು  ಅವರು ದಶಕಗಟ್ಟಲೆಯಿಂದ ಪ್ರಯತ್ನದಿಂದ ಇಂತಹ ಕಥೆಯನ್ನು ಹೆಣೆದಿದ್ದಾರೆ. ಮೂಲತಃ ದಕ್ಷಿಣ ಕನ್ನಡ ಭಾಗದೊಂದಿಗೆ ಕರುಳುಬಳ್ಳಿಯ ಬಂಧ ಹೊಂದಿದ್ದಾರೆ ರಾಜೇಂದ್ರ ಸಿಂಗ್ ಬಾಬು. ವೀರ ಕಂಬಳದ ಟ್ರೈಲರ್ ಅನ್ನು ನಾದಬ್ರಹ್ಮ ಹಂಸಲೇಖ ಬಿಡುಗಡೆಗೊಳಿಸಿದ್ದಾರೆ. ಇದೇ ಹೊತ್ತಿನಲ್ಲಿ ತುಳು ಆವೃತ್ತಿಯಾದ ಬಿರ್ದ್ದ ಕಂಬುಳದ ಟ್ರೈಲರ್ ಕೂಡಾ ಅನಾವರಣಗೊಂಡಿದೆ.

ಈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಂಸಲೇಖ, ಲೆ ಎಂಬುದು ಮುಪ್ಪಿಲ್ಲದ, ಸುಕ್ಕಿಲ್ಲದ ಕನ್ಯೆಯಿದ್ದಂತೆ. ಅದು ಮನುಷ್ಯನನ್ನು ಸದಾ ಜೀವಂತಿಕೆಯಿಂದ ಉಳಿಸುತ್ತದೆಂದಿರುವ ಹಂಸಲೇಖ, ವೀರತ್ವದ ಸಂಕೇತದಂತಿರೋ ಕಂಬಳಕ್ಕೆ ಕಲೆಯೆಂಬ ಕನ್ಯೆ ಕೊಟ್ಟ ತಾಂಬೂಲವೇ `ವೀರ ಕಂಬಳ ಎಂದರು, ಇನ್ನು ರಾಜೇಂದ್ರ ಸಿಂಗ್ ಬಾಬು ಮಾತನಾಡಿ, ವೀರ ಕಂಬಳದಲ್ಲಿ ಅಡಕವಾಗಿರುವ ವಿಶಿಷ್ಟ ಅಂಶಗಳ ಸುಳಿವನ್ನೂ ಬಿಟ್ಟುಕೊಟ್ಟರು. ಕಂಬಳವನ್ನು ದೃಷ್ಯಕ್ಕೆ ಒಗ್ಗಿಸಿದ ಬಗ್ಗೆ ಹಾಗೂ ಕಂಬಳದ ಸುತ್ತ ಹಬ್ಬಿಕೊಂಡಿರುವ ರೋಚಕ ಅಂಶಗಳ ಚಿತ್ರಣವನ್ನು ಕಟ್ಟಿಕೊಟ್ಟರು. ಈ ಹಾದಿಯಲ್ಲಿ ಜೊತೆಯಾದ ನಿರ್ಮಾಪಕರು, ತಂತ್ರಜ್ಞರು, ಕಲಾವಿದರು ಹಾಗೂ ತುಳು ರಂಗಭೂಮಿಯ ಹೆಸರಾಂತ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ಬೈಲ್, ನಿಖರ ಮಾಹಿತಿ ಒದಗಿಸಿದ ಗುಣಪಾಲ್ ಕಡಂಬ ಮುಂತಾದವರನ್ನು ಅಭಿನಂದಿಸಿದರು.

ಆದಿತ್ಯ, ಪ್ರಕಾಶ್ ರೈ, ರವಿಶಂಕರ್ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದರೆ, ರಾಧಿಕಾ ನಾರಾಯಣ್ ವಿಶೇಷ ಪಾತ್ರಕ್ಕೆ ಜೀವ ತುಂಬಿದ್ದಾರೆ. ತುಳು ಭಾಷೆಯಲ್ಲಿಯೂ ಬಿಡುಗಡೆಗೊಳ್ಳಲಿರುವ ಸದರಿ ಚಿತ್ರದಲ್ಲಿ ನವೀನ್ ಪಡೀಲ್, ಗೋಪಿನಾಥ್ ಭಟ್, ಭೋಜರಾಜ್ ವಾಮಂಜೂರು ಸೇರಿದಂತೆ ಹಲವಾರು ಜನ ನಟಿಸಿದ್ದಾರೆ. ವಿಜಯ್ ಕುಮಾರ್ ಕೊಡಿಯಾಲ್ಬೈಲ್ ಚಿತ್ರಕಥೆ ಸಂಭಾಷಣೆ, ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಆರ್.ಗಿರಿ ಛಾಯಾಗ್ರಹಣ, ಶ್ರೀನಿವಾಸ್ ಎಸ್ ಬಾಬು ಸಂಕಲನ, ಚಂದ್ರಶೇಖರ್ ಸುವರ್ಣ ಮುಲ್ಕಿ ಕಲಾ ನಿರ್ದೇಶನ, ಕಾಂತ ಪ್ರಸಾದನ ಹಾಗೂ ಭಾಷಾ ಅವರ ವಸ್ತ್ರವಿನ್ಯಾಸವಿರುವ ವೀರ ಕಂಬಳ ಫೆಬ್ರವರಿ 27ರಂದು ರಿಲೀಸ್‌ ಆಗಲಿದೆ.

Veera Kambala trailer release..once again the glory of Tulunad!- ತುಳುಟೈಮ್ಸ್

ವೀಡಿಯೋ ಸುದ್ದಿಗಳಿಗಾಗಿ ನಮ್ಮ ಯೂಟ್ಯೂಬ್ ಲಿಂಕ್ ಕ್ಲಿಕ್ ಮಾಡಿ: https://www.youtube.com/@tulutimess

ಈ ಸುದ್ದಿಯನ್ನು ಶೇರ್ ಮಾಡಿ

Related Posts

1 of 152

You cannot copy content of this page